Homeಮುಖಪುಟನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ 751 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ 751 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

- Advertisement -
- Advertisement -

ಪಂಚರಾಜ್ಯಗಳ ಚುನಾವಣೆಯ ವೇಳೆ ಮಹತ್ವದ ಬೆಳವಣಿಗೆ ಎಂಬಂತೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಹೊಂದಿರುವ ಕಾಂಗ್ರೆಸ್ ಪಕ್ಷದ ‘ಯಂಗ್ ಇಂಡಿಯನ್’ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 751.9 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ.

ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಮತ್ತು ಅದರ ಹಿಡುವಳಿ ಕಂಪನಿ ಯಂಗ್ ಇಂಡಿಯನ್ ವಿರುದ್ಧ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಆಸ್ತಿ ಮುಟ್ಟುಗೋಲಿಗೆ ಆದೇಶ ಹೊರಡಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜಪ್ತಿ ಮಾಡಲಾದ ಸ್ಥಿರ ಆಸ್ತಿಗಳಲ್ಲಿ ದೆಹಲಿಯ ಐಟಿಒನಲ್ಲಿರುವ ನ್ಯಾಷನಲ್ ಹೆರಾಲ್ಡ್ ಕಚೇರಿ, ಲಕ್ನೋದ ಕೈಸರ್‌ಬಾಗ್ ಬಳಿಯ ಮಾಲ್ ಅವೆನ್ಯೂನಲ್ಲಿರುವ ನೆಹರು ಭವನ ಮತ್ತು ಮುಂಬೈನ ಹೆರಾಲ್ಡ್ ಹೌಸ್ ಸೇರಿವೆ ಎಂದು ಮೂಲಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿವೆ.

ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ದೆಹಲಿ, ಮುಂಬೈ ಮತ್ತು ಲಕ್ನೋದಂತಹ ಅನೇಕ ನಗರಗಳಲ್ಲಿ 661.69 ಕೋ.ರೂ. ಮೌಲ್ಯದ ಸ್ಥಿರ ಆಸ್ತಿಗಳ ರೂಪದಲ್ಲಿ ಅಕ್ರಮ ಆಸ್ತಿ ಹೊಂದಿದೆ. ಯಂಗ್ ಇಂಡಿಯನ್ (YI) ಎಜೆಎಲ್‌ನ ಈಕ್ವಿಟಿ ಷೇರುಗಳಲ್ಲಿ ಹೂಡಿಕೆಯ ರೂಪದಲ್ಲಿ 90.21 ಕೋಟಿಗಳಷ್ಟು ಅಕ್ರಮ ಆದಾಯವನ್ನು ಹೊಂದಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಖಾಸಗಿ ದೂರಿನ ಆಧಾರದಲ್ಲಿ ದೆಹಲಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜೂ.26, 2014ರಂದ ಆದೇಶಿಸಿದ ನಂತರ ನ್ಯಾಷನಲ್ ಹೆರಾಲ್ಡ್ ವಿರುದ್ಧ ಮನಿ ಲಾಂಡರಿಂಗ್ ಆಕ್ಟ್‌ ಅಡಿಯಲ್ಲಿ ತನಿಖೆಯನ್ನು ಪ್ರಾರಂಭಿಸಲಾಗಿತ್ತು.

ಈ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರನ್ನು ಈ ಹಿಂದೆ ಇಡಿ ವಿಚಾರಣೆ ನಡೆಸಿತ್ತು. ಈ ತನಿಖೆಯನ್ನು ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ 2015ರ ಆ.18ರಂದು ತಾಂತ್ರಿಕ ಕಾರಣಗಳಿಂದ ತನಿಖೆಯನ್ನು ನಿಲ್ಲಿಸುವುದಾಗಿ ಹೇಳಿತ್ತು. ಈ ತನಿಖೆಯನ್ನು ಮತ್ತೆ ಆರಂಭಿಸುವುದಾಗಿ ಇಡಿ 2015ರ ಸೆ.18ರಂದು ಪ್ರಕಟಿಸಿತ್ತು.

ಆಸ್ತಿ ಮುಟ್ಟುಗೋಲು ಆದೇಶದ ಬೆನ್ನಲ್ಲೇ ರಾಜಕೀಯ ಸೇಡಿಗಾಗಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದ ಕಾಂಗ್ರೆಸ್, ನಮ್ಮ ನಾಯಕರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ.

ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಸ್ಥಿರ ಆಸ್ತಿ ಜಪ್ತಿ ಆದೇಶವನ್ನು ವಿರೋಧಿಸಿದ್ದು, ಇದು ಮೋಸ, ಸುಳ್ಳು ಮತ್ತು ಸುಳ್ಳಿನ ತಂತ್ರವಾಗಿದೆ. ಚುನಾವಣೆಯ ಮಧ್ಯದಲ್ಲಿ ದಿಕ್ಕು ತಪ್ಪಿಸುವ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ಇಡಿ, ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಆದಾಯ ತೆರಿಗೆ ಇಲಾಖೆಯನ್ನು (ಐಟಿ) ಬಿಜೆಪಿಯ ಸಮ್ಮಿಶ್ರ ಪಾಲುದಾರರು ಎಂದು ಕರೆದಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಬಿಜೆಪಿಯ ಯಾವುದೇ ಸಮ್ಮಿಶ್ರ ಪಾಲುದಾರರಾದ ಸಿಬಿಐ, ಇಡಿ ಅಥವಾ ಐಟಿಯಿಂದ ಬಿಜೆಪಿಯ ಕೆಲವು ಸನ್ನಿಹಿತ ಸೋಲನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಉತ್ತರಖಂಡ: ಸುರಂಗದಲ್ಲಿ ಸಿಲುಕಿಕೊಂಡ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...