Homeಮುಖಪುಟಮದುವೆ ಮನೆಯಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ ಪ್ರಶ್ನಿಸಿದ್ದಕ್ಕೆ, ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಹತ್ಯೆ

ಮದುವೆ ಮನೆಯಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ ಪ್ರಶ್ನಿಸಿದ್ದಕ್ಕೆ, ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಹತ್ಯೆ

- Advertisement -
- Advertisement -

ಮದುವೆ ಸಮಾರಂಭದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಪುರುಷರ ಗುಂಪನ್ನು ಪ್ರಶ್ನಿಸಿದ್ದಕ್ಕಾಗಿ 20 ಜನ ದುಷ್ಕರ್ಮಿಗಳ ಗುಂಪು ಹೊಂಚುಹಾಕಿ, 26 ವರ್ಷದ ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಅನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಂದಿರುವ ಘಟನೆ ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ನಡೆದಿದೆ.  

ಹುಮಾಯೂನ್‌ಪುರ ಗ್ರಾಮದ ನಿವಾಸಿ ರೋಹಿತ್ ಧಂಖರ್ ದುಷ್ಕರ್ಮಿಗಳ ಹಲ್ಲೆಯಿಂದ ಸಾವನ್ನಪ್ಪಿದ್ದಾರೆ. ರೋಹ್ಟಕ್‌ನ ಜಿಮ್ಖಾನಾ ಕ್ಲಬ್‌ನಲ್ಲಿ ಸದಸ್ಯರಿಗೆ ತರಬೇತಿ ನೀಡಿದ ವೃತ್ತಿಪರ ಬಾಡಿಬಿಲ್ಡರ್ ಆಗಿದ್ದ, ರೋಹಿತ್ 2018 ರಲ್ಲಿ, ಭಾರತದ ಪ್ಯಾರಾ ಒಲಿಂಪಿಕ್ ಸಮಿತಿ ಆಯೋಜಿಸಿದ್ದ ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದರು.

ಬಲಗಾಲಿನಲ್ಲಿ ಅಂಗವೈಕಲ್ಯದಿಂದ ಬಳಲುತ್ತಿದ್ದ ರೋಹಿತ್ 2018 ರಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದ ಅಂತರರಾಷ್ಟ್ರೀಯ ಪದಕ ವಿಜೇತರಾಗಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆಗಿನ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರೋಹಿತ್ ಅವರನ್ನು ಸನ್ಮಾನಿಸಿದ್ದರು. 

ಶುಕ್ರವಾರ, ರೋಹಿತ್ ತನ್ನ ಸ್ನೇಹಿತ ಜತಿನ್ ಜೊತೆ ಜತಿನ್ ಅವರ ಸಂಬಂಧಿಕರ ಮದುವೆಗೆ ‘ಉಡುಗೊರೆ’ ಅರ್ಪಿಸಲು ಭಿವಾನಿಗೆ ಪ್ರಯಾಣ ಬೆಳೆಸಿದ್ದರು. ಅವರ ಸಂಬಂಧಿಕರ ಪ್ರಕಾರ, ಗ್ರಾಮದ ಹುಡುಗನ ಕಡೆಯವರು ತಡರಾತ್ರಿ ಮದುವೆ ಸ್ಥಳಕ್ಕೆ ಬಂದರು, ಆ ಗುಂಪಿನಲ್ಲಿದ್ದ ಕೆಲವು ಪುರುಷರು ಮಹಿಳೆಯರೊಂದಿಗೆ ಕೆಟ್ಟದಾಗಿ ವರ್ತಿಸಲು ಪ್ರಾರಂಭಿಸಿದರು ಎಂದು ಆರೋಪಿಸಲಾಗಿದೆ. ರೋಹಿತ್ ಅವರನ್ನು ಎಚ್ಚರಿಸಿದರು, ಇದು ಸ್ವಲ್ಪ ಸಮಯದ ವಾಗ್ವಾದಕ್ಕೆ ಕಾರಣವಾಯಿತು. ಕಿರುಕುಳ ನೀಡಿದವರು ಅಲ್ಲಿಂದ ಹೊರಟುಹೋದರು, ಆದರೆ ನಂತರ ಪರಿಸ್ಥಿತಿ ಉಲ್ಬಣಗೊಂಡಿತು. ಸಮಾರಂಭದ ನಂತರ, ರೋಹಿತ್ ಮತ್ತು ಜತಿನ್ ಮನೆಗೆ ಮರಳಲು ತಮ್ಮ ವಾಹನದಲ್ಲಿ ಹೊರಟಾಗ, ಗೇಟ್ ಮುಚ್ಚಿದ್ದರಿಂದ ಅವರ ಕಾರು ರೈಲ್ವೆ ಕ್ರಾಸಿಂಗ್‌ನಲ್ಲಿ ನಿಲ್ಲಬೇಕಾಯಿತು.

ಈ ವೇಳೆ ಹೊಂಚು ಹಾಕಿದ್ದ ಸುಮಾರು 20 ದುಷ್ಕರ್ಮಿಗಳ ತಂಡ ದೊಣ್ಣೆ, ರಾಡ್ ಮತ್ತು ಇತರ ಆಯುಧಗಳಿಂದ ರೋಹಿತ್ ಮತ್ತು ಜನಿನ್ ಅವರನ್ನು ಸುತ್ತುವರೆದು ದಾಳಿ ನಡೆಸಿದ್ದಾರೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. 

ರೋಹಿತ್ ಜೊತೆಯಲ್ಲಿದ್ದ ಜತಿನ್ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು, ಆದರೆ ರೋಹಿತ್ ಅವರನ್ನು ಹಿಡಿದು ತೀವ್ರವಾಗಿ ಥಳಿಸಲಾಗಿದೆ. “ಗಾಯದ ಗುರುತುಗಳಿಲ್ಲದ ಅವನ ದೇಹದ ಒಂದು ಭಾಗವೂ ಇರಲಿಲ್ಲ” ಎಂದು ಕುಟುಂಬದ ಸದಸ್ಯರೊಬ್ಬರು ಹೇಳಿದ್ದಾರೆ. ದಾಳಿಕೋರರು ಓಡಿಹೋದ ನಂತರ, ಜತಿನ್ ಸಹಾಯದಿಂದ ಹಿಂತಿರುಗಿ ರೋಹಿತ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ರೋಹ್ಟಕ್‌ನ ಪಿಜಿಐಎಂಎಸ್‌ಗೆ ಕಳುಹಿಸಲಾಯಿತು. ವೈದ್ಯರ ರಾತ್ರಿಯಿಡೀ ಪ್ರಯತ್ನದ ಹೊರತಾಗಿಯೂ, ರೋಹಿತ್ ಶನಿವಾರ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಭಿವಾನಿ ಪೊಲೀಸರು ಪಿಜಿಐಎಂಎಸ್‌ಗೆ ತೆರಳಿದರು. ಕುಟುಂಬದ ದೂರಿನ ಆಧಾರದ ಮೇಲೆ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಹೆಚ್ಚಿನ ತನಿಖೆ ನಡೆಯುತ್ತಿದೆ. ರೋಹಿತ್ ಅವರ ಸೋದರ ಮಾವ ರವಿ ಖಾಸ್ಸಾ ಮತ್ತು ಚಿಕ್ಕಪ್ಪ ಸತೀಶ್ ಧನಖರ್, ಹಲ್ಲೆಕೋರರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು. “ಇದು ಯೋಜಿತ ಕೊಲೆ. ರೋಹಿತ್ ಮಹಿಳೆಯರ ಘನತೆಯ ಪರವಾಗಿ ನಿಂತಿದ್ದಕ್ಕಾಗಿ ತಮ್ಮ ಜೀವವನ್ನು ತೆತ್ತರು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಡವರ ಹೊಟ್ಟೆಗೆ ಒದ್ದ ನಂತರ, ಮೋದಿ ಸರ್ಕಾರ ಅವರ ಬೆನ್ನಿಗೆ ಚೂರಿ ಹಾಕಿದೆ’: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಯುಪಿಎಯ ದೂರದೃಷ್ಟಿಯ ಕಾರ್ಯಕ್ರಮವಾದ ಎಂಜಿಎನ್‌ಆರ್‌ಇಜಿಎಯನ್ನು ರದ್ದುಗೊಳಿಸುವ ಮೂಲಕ ಅವರು "ಬಡವರ ಹೊಟ್ಟೆಗೆ...

ಕರ್ನಾಟಕದ ವಿಚಾರದಲ್ಲಿ ಪಿಣರಾಯಿ ವಿಜಯನ್ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

"ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಮಧ್ಯಪ್ರದೇಶ| ಬಿಜೆಪಿ ನಾಯಕಿ ಮಗನ ಮೇಲೆ ಅತ್ಯಾಚಾರ ಆರೋಪ; ವಿಷ ಸೇವಿಸಿದ ಸಂತ್ರಸ್ತೆ ಸ್ಥಿತಿ ಗಂಭೀರ

ಮಧ್ಯಪ್ರದೇಶದ ಶಿವಪುರಿ ನಗರ ಸಭೆಯ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ಗಾಯತ್ರಿ ಶರ್ಮಾ ಅವರ ಪುತ್ರ ರಜತ್ ಶರ್ಮಾ ವಿರುದ್ಧ ಏಪ್ರಿಲ್ 30 ರಂದು ಎಫ್‌ಐಆರ್ ದಾಖಲಿಸಿದ್ದ ಮಹಿಳೆಯ ಆರೋಗ್ಯ ಹದಗೆಟ್ಟ ನಂತರ...

ದೆಹಲಿಯಲ್ಲಿ ಹೊಸ ವರ್ಷಕ್ಕೂ ಮುನ್ನ ಬೃಹತ್ ಕಾರ್ಯಾಚರಣೆ: 285 ಜನರ ಬಂಧನ, ಶಸ್ತ್ರಾಸ್ತ್ರಗಳು ಮತ್ತು ಮಾದಕ ವಸ್ತುಗಳ ವಶ

ದೆಹಲಿ ಹೊಸ ವರ್ಷಾಚರಣೆಗೆ ಸಜ್ಜಾಗುತ್ತಿದ್ದಂತೆ, ಹಬ್ಬದ ದಟ್ಟಣೆಯಲ್ಲಿ ಅಪರಾಧಗಳನ್ನು ತಡೆಗಟ್ಟುವ ಪ್ರಯತ್ನದಲ್ಲಿ, ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ ರಾತ್ರಿಯಿಡೀ ವಿಸ್ತೃತ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನೂರಾರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮ ಶಸ್ತ್ರಾಸ್ತ್ರಗಳು, ಮಾದಕ...

ಅತ್ಯಾಚಾರಿ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು; ದೆಹಲಿ ಹೈಕೋರ್ಟ್ ಮುಂದೆ ಸಂತ್ರಸ್ತೆ ತಾಯಿ ಪ್ರತಿಭಟನೆ

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ದೆಹಲಿ ಹೈಕೋರ್ಟ್ ಹೊರಗೆ ಶುಕ್ರವಾರ (ಡಿ.26) ಪ್ರತಿಭಟನೆ ನಡೆಸಲಾಯಿತು. ಸೆಂಗಾರ್‌ಗೆ ನಿಡುರವ ಜಾಮೀನು ತಿರಸ್ಕರಿಸಬೇಕೆಂದು...

‘ಉತ್ತರ ಪ್ರದೇಶದ ಗಾಳಿ ಕರ್ನಾಟಕಕ್ಕೂ ಬೀಸಿದೆ, ಬುಲ್ಡೋಜರ್ ನೀತಿ ಇಲ್ಲೂ ಜಾರಿ ಮಾಡುವ ಕೆಲಸ ನಡೆಯುತ್ತಿದೆ: ಪಿಣರಾಯಿ ವಿಜಯನ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ...

ಡೆಹ್ರಾಡೂನ್‌ನಲ್ಲಿ ಜನಾಂಗೀಯ ದಾಳಿ; ಚಾಕು ಇರಿತಕ್ಕೆ ಒಳಗಾಗಿದ್ದ ತ್ರಿಪುರ ವಿದ್ಯಾರ್ಥಿ ಸಾವು

ಜನಾಂಗೀಯ ನಿಂದನೆಯಿಂದ ಪ್ರಾರಂಭವಾಯಿತು ಎನ್ನಲಾದ ಜಗಳವು ಹಿಂಸಾತ್ಮಕ ಪ್ರತಿಭಟನೆಗೆ ತಿರುಗಿದ್ದು, ಚಾಕು ಇರಿತದ ನಂತರ ತ್ರಿಪುರದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಉತ್ತರಾಖಂಡ್ ಆಸ್ಪತ್ರೆಯಲ್ಲಿ ಎರಡು ವಾರಗಳಿಗೂ ಹೆಚ್ಚು ಕಾಲ ಚಿಕಿತ್ಸೆ ಪಡೆಯುತ್ತಿದ್ದ...

ಉತ್ತರ ಪ್ರದೇಶದಲ್ಲಿ ಮತ್ತೋರ್ವ ಬಿಎಲ್‌ಒ ಆತ್ಮಹತ್ಯೆ: ಎಸ್‌ಐಆರ್‌ ಕೆಲಸದ ಒತ್ತಡ ಕಾರಣವೆಂದ ಕುಟುಂಬ

ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಶುಕ್ರವಾರ ಬೂತ್ ಮಟ್ಟದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದ ಕೆಲಸದ ಒತ್ತಡದಿಂದಾಗಿ ಅವರು ಈ ನಿರ್ಧಾರ ಮಾಡಿದ್ದಾರೆ ಎಂದು...

ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ 

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು "ಕಾನೂನಿಗೆ ವಿರುದ್ಧ" ಮತ್ತು "ವಿಕೃತ" ಎಂದು ಕರೆದಿರುವ ಕೇಂದ್ರ ತನಿಖಾ ದಳ (ಸಿಬಿಐ) ಶುಕ್ರವಾರ...

ಮೋದಿ-ಮಲ್ಯ ಇಬ್ಬರನ್ನೂ ಭಾರತಕ್ಕೆ ಕರೆತರುವುದಾಗಿ ವಿದೇಶಾಂಗ ಸಚಿವಾಲಯ ಭರವಸೆ

ಲಲಿತ್ ಮೋದಿ ಮತ್ತು ವಿಜಯ್ ಮಲ್ಯ ಸೇರಿದಂತೆ ಆರ್ಥಿಕವಾಗಿ ಪರಾರಿಯಾಗಿರುವವರನ್ನು ವಿದೇಶದಿಂದ ವಾಪಸ್ ಕರೆತಂದು ದೇಶದಲ್ಲಿ ಕಾನೂನು ಕ್ರಮ ಜರುಗಿಸಲು ಬದ್ಧವಾಗಿದೆ ಎಂದು ಭಾರತ ಸರ್ಕಾರ ಶುಕ್ರವಾರ ಹೇಳಿದೆ. ವಿಜಯ್ ಅವರೊಂದಿಗೆ ಸಾಮಾಜಿಕ ಮಾಧ್ಯಮ...