Homeಮುಖಪುಟ2024 ರ ಲೋಕಸಭೆ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದ ರಾಜಕೀಯ ರಂಗ ರಚನೆ: ಸಿಪಿಐಎಂ

2024 ರ ಲೋಕಸಭೆ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದ ರಾಜಕೀಯ ರಂಗ ರಚನೆ: ಸಿಪಿಐಎಂ

ಚುನಾವಣೆಯ ಮೊದಲು, ರಾಜ್ಯ ಮಟ್ಟದ ರಾಜಕೀಯ ರಂಗಗಳು ಪ್ರಾಯೋಗಿಕ ಅರ್ಥದಲ್ಲಿ ಅತ್ಯುತ್ತಮ ಆಯ್ಕೆಯಾಗಿದೆ ಎಂದು ಪಕ್ಷವು ಹೇಳಿದೆ

- Advertisement -
- Advertisement -

ಭಾರತೀಯ ಪರಿಸ್ಥಿತಿಯಲ್ಲಿನ ವೈವಿಧ್ಯತೆಗಳನ್ನು ಪರಿಗಣಿಸಿ, 2024 ರ ಲೋಕಸಭೆ ಚುನಾವಣೆಯ ನಂತರವೇ ರಾಷ್ಟ್ರೀಯ ಮಟ್ಟದ ರಾಜಕೀಯ ರಂಗವನ್ನು ರಚಿಸಲಾಗುವುದು ಎಂದು ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿದ್ದಾರೆ. ಅವರು ಗುರುವಾರ ಕೇರಳದ ಕಣ್ಣೂರಿನಲ್ಲಿ ನಡೆಯುತ್ತಿರುವ ಸಿಪಿಐ(ಎಂ)ನ 23 ನೇ ರಾಷ್ಟ್ರೀಯ ಅಧಿವೇಶನದ ನಡಾವಳಿಗಳನ್ನು ವಿವರಿಸುತ್ತಿದ್ದರು.

ಚುನಾವಣೆಯ ಮೊದಲು, ರಾಜ್ಯ ಮಟ್ಟದ ರಾಜಕೀಯ ರಂಗಗಳು ಪ್ರಾಯೋಗಿಕ ಅರ್ಥದಲ್ಲಿ ಅತ್ಯುತ್ತಮ ಆಯ್ಕೆಯಾಗಿದೆ ಎಂದು ಹೇಳಿದ ಅವರು, “ಪ್ರತಿ ರಾಜ್ಯದಲ್ಲಿ ವಿವಿಧ ರಾಜಕೀಯ ಪಕ್ಷಗಳು ಪ್ರಬಲವಾಗಿವೆ. 1977 ರಿಂದ, ರಾಷ್ಟ್ರೀಯ ಮಟ್ಟದ ಮೈತ್ರಿಗಳು ಚುನಾವಣೆಯ ನಂತರವೇ ರಚನೆಯಾಗುತ್ತಿವೆ. 1989, 1996, 1998 ಮತ್ತು 2004 ರ ಬೆಳವಣಿಗೆಗಳನ್ನು ನೆನಪಿಸಿಕೊಳ್ಳಿ. ಈ ಎಲ್ಲಾ ವರ್ಷಗಳಲ್ಲಿ, ಚುನಾವಣೆಯ ನಂತರ ಸರ್ಕಾರ ರಚನೆಗೆ ರಾಜಕೀಯ ರಂಗಗಳು ಅಸ್ತಿತ್ವಕ್ಕೆ ಬಂದವು” ಎಂದು ಯೆಚೂರಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಜೆಪಿ ವಿರೋಧಿ ಮತಗಳನ್ನು ಕ್ರೋಢೀಕರಿಸಲು ಸಿಪಿಐ-ಎಂ ಪ್ರಯತ್ನಿಸುತ್ತಿದೆ. ಬಿಜೆಪಿಯನ್ನು ಪ್ರತ್ಯೇಕಿಸುವುದು ಮತ್ತು ಸೋಲಿಸುವುದು ಭಾರತೀಯ ಸಂವಿಧಾನ ಮತ್ತು ಗಣರಾಜ್ಯವನ್ನು ರಕ್ಷಿಸುವ ಪ್ರಮುಖ ಕಾರ್ಯವಾಗಿದೆ. ಅದಕ್ಕಾಗಿ ಬಿಜೆಪಿ ವಿರೋಧಿ ಶಕ್ತಿಗಳ ವಿಶಾಲವಾದ ಮೈತ್ರಿ ಇರುತ್ತದೆ.

ಇಂತಹ ಮೈತ್ರಿಗಳು ಕೆಲವು ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಜಾತ್ಯತೀತ ಶಕ್ತಿಗಳ ಗರಿಷ್ಠ ಸಜ್ಜುಗೊಳಿಸುವಿಕೆಯನ್ನು ನಾವು ಬಯಸುತ್ತೇವೆ. ಎಡ ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳ ಜೊತೆಗೆ ಸಾಮಾಜಿಕ ಮತ್ತು ಜನಾಂದೋಲನಗಳ ಏಕತೆಯನ್ನು ಬಲಪಡಿಸುವುದು ಮುಖ್ಯವಾಗಿದೆ” ಎಂದು ಯೆಚೂರಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಜೆಪಿಯನ್ನು ಸೋಲಿಸುವ ಪ್ರಕ್ರಿಯೆಗೆ ಅವರ ಕೊಡುಗೆ ಏನು ಎಂಬುದನ್ನು ನಿರ್ಧರಿಸುವುದು ಅವರಿಗೆ ಬಿಟ್ಟದ್ದು. ಕಾಂಗ್ರೆಸ್ ಪಕ್ಷದಿಂದ ನಾಯಕರು ನಿರಂತರವಾಗಿ ಬಿಜೆಪಿಗೆ ಹರಿದು ಹೋಗುತ್ತಿದ್ದಾರೆ. ಈ ಪರಿಸ್ಥಿತಿಯ ಬಗ್ಗೆ ಕಾಂಗ್ರೆಸ್ ಯೋಚಿಸಬೇಕು” ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಮೈಸೂರಿನ ಶಕ್ತಿಧಾಮಕ್ಕೆ 5 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...