HomeಮುಖಪುಟNMP ಯೋಜನೆ: ಕಾಂಗ್ರೆಸ್ ಡಿಎನ್‌ಎಯಲ್ಲಿ ಲೂಟಿ ಇದೆ ಎಂದ ಸಚಿವೆ ನಿರ್ಮಲಾ ಸೀತಾರಾಮನ್

NMP ಯೋಜನೆ: ಕಾಂಗ್ರೆಸ್ ಡಿಎನ್‌ಎಯಲ್ಲಿ ಲೂಟಿ ಇದೆ ಎಂದ ಸಚಿವೆ ನಿರ್ಮಲಾ ಸೀತಾರಾಮನ್

- Advertisement -
- Advertisement -

ಕೇಂದ್ರ ಸರ್ಕಾರದ ’ಸರ್ಕಾರಿ ಆಸ್ತಿ ನಗದೀಕರಣ’ (ನ್ಯಾಷನಲ್ ಮಾನಿಟೈಸೆಶನ್ ಪೈಪ್‌ಲೈನ್ – NMP) ಯೋಜನೆ ವಿರುದ್ದ ಅಸಾಮಾಧಾನವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್‌ ವಿರುದ್ಧ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಿಡಿ ಕಾರಿದ್ದಾರೆ.

ಬಿಜೆಪಿಯು ದೇಶದ ಸಾರ್ವಜನಿಕ ಆಸ್ತಿಯನ್ನು ಮಾರಾಟ ಮಾಡುತ್ತಿದೆ ಎಂದು ಕಾಂಗ್ರೆಸ್ ಹೇಳಿದ್ದು ಕಾಂಗ್ರೆಸ್‌ ಟೀಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್‌ ಪಕ್ಷದ ಡಿಎನ್ಎಯಲ್ಲಿಯೇ “ಲೂಟಿ” ಇದೆ ಎಂದು ಆರೋಪಿಸಿದ್ದಾರೆ.

ಛತ್ತೀಸ್‌ಗಢ ರಾಜಧಾನಿ ರಾಯ್ಪುರದಲ್ಲಿ ಮಾತನಾಡುತ್ತಿದ್ದ ಸೀತಾರಾಮನ್ , “ಲೂಟಿಯು ಕಾಂಗ್ರೆಸ್‌ನ ಮನಸ್ಸಿನಿಂದ ಹೊರಹೋಗುವುದಿಲ್ಲ. ಅವರ ಆಳ್ವಿಕೆಯಲ್ಲಿ ಸ್ಪೆಕ್ಟ್ರಮ್, ಗಣಿ, ನೀರು ಮತ್ತು ಎಲ್ಲಾ ವಲಯದಲ್ಲೂ ಲೂಟಿ ಹರಡಿಕೊಂಡಿತ್ತು” ಎಂದು ಹೇಳಿದ್ದಾರೆ.

ಇದುವರೆಗೂ ಉಪಯೋಗವಾಗಿಲ್ಲದ ಅಥವಾ ಹೆಚ್ಚು ಉಪಯೋಗಕ್ಕೆ ಬಂದಿಲ್ಲದ ಸರ್ಕಾರದ ಆಸ್ತಿಗಳ ನಿರ್ವಹಣೆಯನ್ನು ಖಾಸಗಿಯವರಿಗೆ ಕೊಟ್ಟು, ಅವರಿಂದ ಮುಂದಿನ ನಾಲ್ಕು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ ಶುಲ್ಕ ಸಂಗ್ರಹಿಸುತ್ತೇವೆ  ಎಂದು ಈವರ್ಷದ ಆಗಸ್ಟ್‌ನಲ್ಲಿ ನ್ಯಾಷನಲ್ ಮಾನಿಟೈಸೆಶನ್ ಪೈಪ್‌ಲೈನ್ ಯೋಜನೆಯನ್ನು ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

ಇದನ್ನೂ ಓದಿ: ಭಾರತ ಮಾರಾಟಕ್ಕಿದೆ: ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣದ ಕುರಿತು ಗಮನ ಸೆಳೆದ ಕಾರ್ಟೂನ್‌ಗಳು

ಈ ಯೋಜನೆ ಬಗ್ಗೆ ಟೀಕೆ ವ್ಯಕ್ತಪಡಿಸಿರುವ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ವಿತ್ತ ಸಚಿವೆ, “ಜನರಿಗೆ ಸೇವೆ ಮಾಡವ ಹೊರತಾಗಿಯೂ, ಕಾಂಗ್ರೆಸ್ ನಾಯಕ ಕೇವಲ ಅಧಿಕಾರದಲ್ಲಿ ಉಳಿಯುವತ್ತ ಗಮನ ಹರಿಸಿದ್ದಾರೆ. ಕಾಂಗ್ರೆಸ್ ಜನರ ಆಶೀರ್ವಾದದಿಂದ ಪಡೆಯುವ ಬಹುಮತವನ್ನು ನಿಭಾಯಿಸಲು ಸಾಧ್ಯವಾಗಿಲ್ಲ. ಅವರ ಶಾಸಕರು ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಆದರೆ, ಮುಖ್ಯಮಂತ್ರಿಗಳು ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳುತ್ತಿದ್ದಾರೆ” ಎಂದು ಕೇಂದ್ರ ಸಚಿವೆ ವ್ಯಂಗ್ಯವಾಡಿದ್ದಾರೆ.

ಮಂಗಳವಾರ ಕೂಡ ಇಂಧನ ಬೆಲೆಗಳು ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ಅಂತರಾಷ್ಟ್ರೀಯ ತೈಲ ದರಗಳ ಮೇಲೆ ಅವಲಂಬಿತವಾಗಿವೆ ಎಂದು ಸೀತಾರಾಮನ್ ಹೇಳಿದ್ದಾರೆ.

“ದೇಶವು ತನಗೆ ಅಗಶ್ಯವಿರುವ ಪೆಟ್ರೋಲ್ ಮತ್ತು ಡೀಸೆಲ್‌ನ ಶೇ.99 ರಷ್ಟು ಭಾಗವನ್ನು ಆಮದು ಮಾಡಿಕೊಳ್ಳಬೇಕಾಗಿತ್ತು. ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಹೆಚ್ಚುತ್ತಿರುವ ವೆಚ್ಚದ ಸಮಸ್ಯೆಯನ್ನು ನಿಭಾಯಿಸಬೇಕಾಗಿದೆ” ಎಂದು ಹೇಳಿದ್ದಾರೆ. ಜೊತೆಗೆ ಏರುತ್ತಿರುವ ಇಂಧನ ಬೆಲೆಗಳು ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆ ಹೆಚ್ಚಿಸಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ.


ಇದನ್ನೂ ಓದಿ: ಬಡ – ಮಧ್ಯಮ ವರ್ಗವನ್ನು ಮತ್ತಷ್ಟು ಹಿಂಡಲಿರುವ ನ್ಯಾಷನಲ್ ಮಾನಿಟೈಸೇಶನ್ ಪೈಪ್‌ಲೈನ್ – NMP ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...