Homeಮುಖಪುಟನಿಝಾಮುದ್ದೀನ್ ಮರ್ಕಝ್‌ಗೆ ಭೇಟಿ ನೀಡಿದ್ದ ಅಜಿತ್ ದೋವಲ್

ನಿಝಾಮುದ್ದೀನ್ ಮರ್ಕಝ್‌ಗೆ ಭೇಟಿ ನೀಡಿದ್ದ ಅಜಿತ್ ದೋವಲ್

- Advertisement -
- Advertisement -

ದೆಹಲಿ ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳಿಂದ ಬಂಗಲೆವಾಲಿ ಮಸೀದಿಯನ್ನು ಖಾಲಿ ಮಾಡುವಂತೆ ಮಾಡಿದ ಮನವಿಗೆ ಮಣಿಯಲು ನಿಜಾಮುದ್ದೀನ್ ಮರ್ಕಝ್ ಮುಖ್ಯಸ್ಥ ಮೌಲಾನಾ ಸಾದ್ ಅವರು ನಿರಾಕರಿಸಿದಾಗ, ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್‌ಗೆ ಈ ಕೆಲಸವನ್ನು ಪೂರ್ಣಗೊಳಿಸುವಂತೆ ಮನವಿ ಮಾಡಿದರು.

ಗೃಹ ಸಚಿವಾಲಯದ ಉನ್ನತ ಅಧಿಕಾರಿಗಳ ಪ್ರಕಾರ, ಮಾರ್ಚ್ 28-29ರ ರಾತ್ರಿ ಅಜಿತ್ ದೋವಲ್‌ ಮರ್ಕಝ್‌ಗೆ ಮುಂಜಾನೆ 2.00 ಕ್ಕೆ ತಲುಪಿದರು ಮತ್ತು ಕೊರೊನ ಸೋಂಕಿಗೆ ಸಂಬಂಧಿಸಿದಂತೆ ನಿವಾಸಿಗಳನ್ನು ಪರೀಕ್ಷೆಗೆ ಒಳಪಡಿಸುವಂತೆ ಮೌಲಾನಾ ಸಾದ್ ಅವರಿಗೆ ಮನವರಿಕೆ ಮಾಡಿಕೊಟ್ಟರು. ಮಾರ್ಚ್ 18 ರಂದು ತೆಲಂಗಾಣದ ಕರೀಂನಗರದಲ್ಲಿ ಒಂಬತ್ತು ಕೊರೊನ ಪಾಸಿಟಿವ್ ಇರುವ ಇಂಡೋನೇಷಿಯನ್ನರನ್ನು ಭದ್ರತಾ ಸಂಸ್ಥೆಗಳು ಪತ್ತೆ ಹಚ್ಚಿದ್ದರಿಂದ ಶಾ ಮತ್ತು ದೋವಲ್ ಅವರು ಪರಿಸ್ಥಿತಿಯ ಬೆಳವಣಿಗೆಯನ್ನು ಗಮನಿಸುತ್ತಿದ್ದರು ಎನ್ನಲಾಗಿದೆ.

ಭದ್ರತಾ ಏಜೆನ್ಸಿಯೂ ಮರುದಿನವೇ ಎಲ್ಲಾ ರಾಜ್ಯ ಪೊಲೀಸ್ ಮತ್ತು ಅಂಗಸಂಸ್ಥೆ ಕಚೇರಿಗಳಿಗೆ ಮರ್ಕಝ್‌ ಸೋಂಕಿನ ಬಗ್ಗೆ ಎಚ್ಚರಿಕೆಯನ್ನು ಕಳುಹಿಸಿದ್ದಾರೆ.

ಮರ್ಕಝ್‌ ಮಾರ್ಚ್ 27, 28 ಮತ್ತು 29 ರಂದು 167 ತಬ್ಲಿಗಿ ಜನರನ್ನು ಆಸ್ಪತ್ರೆಗೆ ದಾಖಲಿಸಲು ಅವಕಾಶ ಮಾಡಿಕೊಟ್ಟರೆ, ದೋವಲ್ ಅವರ ಹಸ್ತಕ್ಷೇಪದ ನಂತರವೇ ಜಮಾಅತ್ ನಾಯಕತ್ವವು ಮಸೀದಿಯನ್ನು ಸ್ವಚ್ಛಗೊಳಿಸಲು ಮುಂದಾಯಿತು ಎನ್ನಲಾಗಿದೆ.

ದೋವಲ್ ಕಳೆದ ದಶಕಗಳಿಂದ, ಭಾರತ ಮತ್ತು ವಿದೇಶಗಳಲ್ಲಿನ ವಿವಿಧ ಮುಸ್ಲಿಂ ಚಳುವಳಿಗಳೊಂದಿಗೆ ಬಹಳ ನಿಕಟ ಸಂಪರ್ಕವನ್ನು ಹೊಂದಿದ್ದಾರೆ ಎನ್ನಲಾಗಿದೆ. ಅವರು ಎಲ್ಲಾ ಮುಸ್ಲಿಂ ಉಲೆಮಾಗಳೊಂದಿಗೆ ಮೊದಲ ಹೆಸರಿನ ಆಧಾರದ ಮೇಲೆ ಮತ್ತು ಭಾರತಕ್ಕಾಗಿ ರಾಷ್ಟ್ರೀಯ ಕಾರ್ಯತಂತ್ರವನ್ನು ರೂಪಿಸಲು ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ.

ಕಾರ್ಯಾಚರಣೆಯು ಈಗ 2 ನೇ ಹಂತಕ್ಕೆ ಸಾಗಿದೆ. ಭಾರತದಲ್ಲಿರುವ ಎಲ್ಲ ವಿದೇಶಿಯರನ್ನು ಪತ್ತೆಹಚ್ಚಿ ಅವರನ್ನು ವೈದ್ಯಕೀಯವಾಗಿ ಪರೀಕ್ಷಿಸಲು ಮತ್ತು ವೀಸಾ ಮಾನದಂಡಗಳ ಉಲ್ಲಂಘನೆಗೆ ಕಠಿಣವಾಗಿ ನೋಡುವ ಪ್ರಯತ್ನ ನಡೆದಿದೆ ಎಂದು ಭದ್ರತಾ ಅಧಿಕಾರಿಗಳು ಹೇಳುತ್ತಾರೆ. ದೆಹಲಿಯ ಮರ್ಕಝ್‌ನಲ್ಲಿ 216 ವಿದೇಶಿ ಪ್ರಜೆಗಳು ಇದ್ದಾರಲ್ಲದೆ, ದೇಶದ ವಿವಿಧ ಭಾಗಗಳಲ್ಲಿ 800 ಕ್ಕೂ ಹೆಚ್ಚು ಜನರಿದ್ದಾರೆ. ವಿದೇಶಿ ಪ್ರಜೆಗಳಲ್ಲಿ ಹೆಚ್ಚಿನವರು ಇಂಡೋನೇಷ್ಯಾ, ಮಲೇಷ್ಯಾ ಮತ್ತು ಬಾಂಗ್ಲಾದೇಶದ ಪ್ರಜೆಗಳು.

ಗೃಹ ಸಚಿವಾಲಯವು ಸುಮಾರು 2,000 ವಿದೇಶಿಯರು ಜನವರಿಯಿಂದ ಮರ್ಕಝ್‌ ಸಭೆಗೆ ಹಾಜರಾಗಿದ್ದಾರೆ ಎಂದು ಹೇಳಿದೆ. ಆರಂಭಿಕ ವರದಿಗಳು ಪ್ರವಾಸಿಗರ ವೀಸಾಗಳಲ್ಲಿ ಮಿಷನರಿ ಚಟುವಟಿಕೆಗೆ ಭಾರತವನ್ನು ಪ್ರವೇಶಿಸುವ ಮೂಲಕ ಬಹುತೇಕ ಎಲ್ಲರೂ ತಮ್ಮ ವೀಸಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸೂಚಿಸುತ್ತದೆ.

ಮಿಷನರಿ ವರ್ಗದ ಅಡಿಯಲ್ಲಿ ವೀಸಾ ವಿನಂತಿಗಳನ್ನು ಸಲ್ಲಿಸಲು ಸರ್ಕಾರವು ಪುನರಾವರ್ತಿತ ಜ್ಞಾಪನೆಗಳನ್ನು ನೀಡಿದ್ದರೂ ಇದು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರನ್ನು ಮತ್ತೆ ದೇಶಕ್ಕೆ ಪ್ರವೇಶಿಸದಂತೆ ಕಪ್ಪುಪಟ್ಟಿಗೆ ಸೇರಿಸಲಾಗುವುದು ಎನ್ನಲಾಗಿದೆ.

ವಿದೇಶಿಯರಲ್ಲದೆ, ದೆಹಲಿಯ ಸಭೆಗಳಿಗೆ ಹಾಜರಾದ ಜನರೊಂದಿಗೆ ನಿಕಟ ಸಂಪರ್ಕಕ್ಕೆ ಬಂದ ಎಲ್ಲ ಭಾರತೀಯರನ್ನು ಗುರುತಿಸುವ ಪ್ರಯತ್ನವೂ ನಡೆಯುತ್ತಿದೆ. ಅವರಲ್ಲಿ ಕೊರೊನ ವೈರಸ್ ಇರುವಿಕೆಯ ಬಗ್ಗೆ ಪರೀಕ್ಷಿಸಲಾಗುತ್ತಿದೆ ಹಾಗೂ ಸಂಪರ್ಕತಡೆಯಲ್ಲಿ ಇರಿಸಲಾಗಿದೆ.

ತಬ್ಲೀಗ್ ಜಮಾಅತ್ ಅನ್ನು ಮೇವಾಟಿ ಪ್ರದೇಶದಲ್ಲಿ ಮೌಲಾನಾ ಸಾದ್ ಅವರ ಮುತ್ತಜ್ಜ ಮೌಲಾನಾ ಇಲ್ಯಾಸ್ ಕಂಧ್ಲಾವಿ ಸ್ಥಾಪಿಸಿದರು. ಮೇವಾಟಿ ಗ್ರಾಮದ ಜನರು ಮುಸ್ಲಿಮರಾಗಿ ಮತಾಂತರವಾಗಿ, ಮೇವರ್‌ನ ರಾಣಾ ಸಂಘನೊಂದಿಗೆ ಭಬರ್ಪುರದ ಬಳಿಯ ಖಾನ್ವಾ ಕದನದಲ್ಲಿ 1527 ರಲ್ಲಿ ಮೊಘಲ್ ದೊರೆ ಬಾಬರ್ ವಿರುದ್ಧ ಹೋರಾಡಿದ್ದರು. ಸಂಪೂರ್ಣವಾಗಿ ಕುರಾನ್ ಮೇಲೆ ಕೇಂದ್ರೀಕರಿಸಿ ಉತ್ತಮ ಮುಸ್ಲಿಂ ಆಗುವುದು ಹೇಗೆ ಎಂದು ಜಮಾಅತ್ ಬೋಧಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ಭಾಲ್ಕಿ, ಬೆಳಗಾವಿ ಉತ್ತರ-ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರಾರು ಅರ್ಹ ಮತಗಳ ಡಿಲೀಟ್‌ಗೆ ಯತ್ನ; ಅನ್ಯರು ಫಾರಂ-7 ಸಲ್ಲಿಸಿರುವುದು ಬಯಲು!

ಭಾರತೀಯ ಚುನಾವಣಾ ಆಯೋಗದಲ್ಲಿ (ಇಸಿಐ) ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಸರ್ವಾಧಿಕಾರಿ ಧೋರಣೆ ಬಟಾಬಯಲಾಗಿ ದೇಶದಾದ್ಯಂತ ಭಾರೀ ಚರ್ಚೆಯಾಗುತ್ತಿರುವ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌)...

‘ದಿಮಾಗಿ ನಕ್ಸಲರು ಚುನಾವಣಾ ಆಯುಕ್ತರನ್ನು ಗುರಿಯಾಗಿಸಿಕೊಂಡಿದ್ದಾರೆ..’; ಗ್ಯಾನೇಶ್‌ ಕುಮಾರ್ ಬೆಂಬಲಕ್ಕೆ ನಿಂತ ಅಸ್ಸಾಂ ಸಿಎಂ

ಮುಖ್ಯ ಚುನಾವಣಾ ಆಯುಕ್ತರು ಇತರ ಚುನಾವಣಾ ಆಯುಕ್ತರನ್ನು ಸಂಪರ್ಕಿಸದೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯ ಚುನಾವಣಾ ಆಯುಕ್ತರನ್ನು (ಸಿಇಸಿ) ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಯು ಇದು ರಾಜಕೀಯ ಪ್ರಚಾರ ಹಾಗೂ ವಿರೋಧ ಪಕ್ಷಗಳ...

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: ಸಂಕಷ್ಟದಲ್ಲಿ ಲಕ್ಷಾಂತರ ‘Gen Z’ ಯುವಕರ ಮತದಾನದ ಹಕ್ಕು!

ಭಾರತೀಯ ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಇಬ್ಬರು ಆಯುಕ್ತರ ನಡುವೆ ಉಂಟಾಗಿದೆ ಎನ್ನಲಾದ ಆಂತರಿಕ ಭಿನ್ನಾಭಿಪ್ರಾಯದಿಂದಾಗಿ, ದೇಶದ ನೂತನ ಯುವ ಮತದಾರರ ಸೇರ್ಪಡೆ ಪ್ರಕ್ರಿಯೆ ಮಂದಗತಿಯಲ್ಲಿದೆ ಎಂಬ ವರದಿ...

‘ಅನ್ಯಾಯಯುತ’ ಚುನಾವಣೆಗಳಿಗೆ ಅವಕಾಶ ನೀಡಿದ್ದಕ್ಕಾಗಿ ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು: ಪ್ರಿಯಾಂಕಾ ಗಾಂಧಿ

ವಯನಾಡ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಕೋಟ್ಯಂತರ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿರುವ ವಿಚಾರದ ನಡುವೆಯೇ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ನ ವಾಗ್ದಾಳಿ ಮತ್ತಷ್ಟು ತೀವ್ರಗೊಂಡಿದೆ. ಮತದಾರರ...

48 ಗಂಟೆಯೊಳಗೆ ರಾಜೀನಾಮೆ ನೀಡದಿದ್ದರೆ ರಾಷ್ಟ್ರವ್ಯಾಪಿ ಪ್ರತಿಭಟನೆ; ಗ್ಯಾನೇಶ್ ಕುಮಾರ್‌ಗೆ ಸಿಜೆಪಿ ಎಚ್ಚರಿಕೆ

ದೇಶದ ಅತ್ಯಂತ ದೊಡ್ಡ ರಾಷ್ಟ್ರದ್ರೋಹಿ ಎಂದು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), "ಮತದಾರರ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದ್ದಾರೆ" ಎಂದು ಆರೋಪಿಸಿ ಅವರ...

11 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ಗರ್ಭಧಾರಣೆ ಮುಂದುವರಿಸಲು ಒತ್ತಾಯಿಸಲಾಗದು: 24 ವಾರ ಮೀರಿದರೂ ಗರ್ಭಪಾತಕ್ಕೆ ಜಮ್ಮು-ಕಾಶ್ಮೀರ ಹೈಕೋರ್ಟ್ ಅನುಮತಿ

ಶ್ರೀನಗರ: ಲೈಂಗಿಕ ದೌರ್ಜನ್ಯದಿಂದ ಗರ್ಭಿಣಿಯಾಗಿರುವ 11 ವರ್ಷದ ಬಾಲಕಿಯನ್ನು ಕಾನೂನಿನಲ್ಲಿರುವ ನಿಗದಿತ ಅವಧಿಯನ್ನು ಮೀರಿದೆ ಎಂಬ ಕಾರಣಕ್ಕೆ ಗರ್ಭಧಾರಣೆಯನ್ನು ಪೂರ್ಣ ಅವಧಿಯವರೆಗೆ ಮುಂದುವರಿಸುವಂತೆ ಒತ್ತಾಯಿಸಲಾಗುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್...

6 ವರ್ಷದ ಮಲಮಗಳ ಅತ್ಯಾಚಾರ, ಹತ್ಯೆ ಪ್ರಕರಣ : ಅಪರಾಧಿಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಬದಲಾಯಿಸಿದ ಸುಪ್ರೀಂ ಕೋರ್ಟ್

ಮಧ್ಯಪ್ರದೇಶದಲ್ಲಿ ತನ್ನ ಆರು ವರ್ಷದ ಮಲಮಗಳನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾದ ವ್ಯಕ್ತಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ಇಂದು (ಸೆ.24) ಬದಲಾಯಿಸಿದೆ. livelaw.in ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್...

ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ತನಿಖೆಗೆ ಸಮಿತಿ ರಚನೆ

ಬಿ.ಟೆಕ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ಶಂಕಿತ ಆತ್ಮಹತ್ಯೆಯ ಸುತ್ತಲಿನ ಪರಿಸ್ಥಿತಿಗಳ ಬಗ್ಗೆ ತನಿಖೆ ನಡೆಸಲು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆ ಬುಧವಾರ (ಸೆ.23) 10 ಸದಸ್ಯರ...

ಉತ್ತರ ಪ್ರದೇಶ| ಗೋಮಾಂಸ ಸಾಗಿಸುತ್ತಿರುವ ಶಂಕೆ; ಬಿರಿಯಾನಿ ಹೋಟೆಲ್ ಮಾಲೀಕನ ಮೇಲೆ ಗುಂಪು ಹಲ್ಲೆ

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಮೂವರು ಯುವಕರು ಮುಸ್ಲಿಂ ಬಿರಿಯಾನಿ ಹೋಟೆಲ್ ಮಾಲೀಕನೊಬ್ಬ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಶಂಕೆಯಿಂದ ಆತನ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಭಾನುವಾರ (ಸೆ. 20) ಈ...

ಟಿಎಂಸಿ ಹೆಸರು, ಚಿಹ್ನೆ ತಡೆ: ಅಂತಿಮ ನಿರ್ಧಾರದ ಕಾಲಮಿತಿ ಕೇಳಿದ ಸುಪ್ರೀಂ ಕೋರ್ಟ್; ಸೆ. 28ಕ್ಕೆ ವಿಚಾರಣೆ

ತೃಣಮೂಲ ಕಾಂಗ್ರೆಸ್‌ (TMC) ಪಕ್ಷದ ಮೂಲ ಹೆಸರು ಹಾಗೂ ‘ಜೋಡಾ ಘಾಸ್‌ಫುಲ್‌’ (Flowers & Grass) ಚುನಾವಣಾ ಚಿಹ್ನೆಯ ಬಳಕೆಯನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು...