Homeಮುಖಪುಟ17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

- Advertisement -
- Advertisement -

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಮಂಗಳವಾರ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.

ನವದೆಹಲಿಯ ಡಾ. ಕರ್ಣಿ ಸಿಂಗ್ ಶೂಟಿಂಗ್ ರೇಂಜ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಶೂಟಿಂಗ್ ಸ್ಪರ್ಧೆಯ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. 

ಭಾರದ್ವಾಜ್ ಹೋಟೆಲ್ ಕೋಣೆಯಲ್ಲಿ ಶೂಟರ್‌ ಮೇಲೆ ಆಕೆಯ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುವ ನೆಪದಲ್ಲಿ ಆಹ್ವಾನಿಸಿ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. 

ಘಟನೆಯನ್ನು ಬಹಿರಂಗಪಡಿಸಿದರೆ ಆಕೆಯ ವೃತ್ತಿಜೀವನವನ್ನು ಹಾಳುಮಾಡುವುದಾಗಿ ಮತ್ತು ಆಕೆಯ ಕುಟುಂಬಕ್ಕೆ ಹಾನಿ ಮಾಡುವುದಾಗಿ ಕೋಚ್ ಬೆದರಿಕೆ ಹಾಕಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಆಘಾತದಿಂದ ಕ್ರೀಡಾಪಟು ಹೋಟೆಲ್‌ನಿಂದ ಹೊರಬಂದಿದ್ದಾರೆ ಮತ್ತು ನಂತರ ಘಟನೆಯ ಬಗ್ಗೆ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದ್ದು, ನಂತರ ಕುಟುಂಬವು ಪೊಲೀಸರಿಗೆ ದೂರು ನೀಡಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸೆಕ್ಷನ್ 6 ಮತ್ತು ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 351(2) ರ ಅಡಿಯಲ್ಲಿ NIT ಫರಿದಾಬಾದ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

“ಪ್ರಕರಣದ ಗಂಭೀರತೆಯನ್ನು ಗಮನಿಸಿದರೆ, ಅಪ್ರಾಪ್ತ ಬಾಲಕಿಯ ಆರೋಪಗಳನ್ನು ದೃಢೀಕರಿಸಲು ಘಟನೆ ನಡೆದ ದಿನದ ಎಲ್ಲಾ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ತಕ್ಷಣವೇ ಹಂಚಿಕೊಳ್ಳುವಂತೆ ನಾವು ಹೋಟೆಲ್ ಆಡಳಿತವನ್ನು ಈಗಾಗಲೇ ಕೇಳಿಕೊಂಡಿದ್ದೇವೆ” ಎಂದು ಫರಿದಾಬಾದ್ ಪೊಲೀಸರ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶ್ಪಾಲ್ ಯಾದವ್ ಹೇಳಿದ್ದಾರೆ.

ಭಾರದ್ವಾಜ್ ಅವರು ಭಾರತೀಯ ರಾಷ್ಟ್ರೀಯ ರೈಫಲ್ ಸಂಘ (NRAI) ನೇಮಕ ಮಾಡಿದ 13 ರಾಷ್ಟ್ರೀಯ ಪಿಸ್ತೂಲ್ ತರಬೇತುದಾರರಲ್ಲಿ ಒಬ್ಬರು.

ವಿಚಾರಣೆ ನಡೆಯುವವರೆಗೆ ಕೋಚ್ ಅಂಕುಶ್ ಅವರನ್ನು ಎಲ್ಲಾ ಕರ್ತವ್ಯಗಳಿಂದ ಅಮಾನತುಗೊಳಿಸಲಾಗಿದೆ, ಅವರಿಗೆ ಯಾವುದೇ ಹೊಸ ಹುದ್ದೆ ನೀಡಲಾಗುವುದಿಲ್ಲ” ಎಂದು NRAI ಪ್ರಧಾನ ಕಾರ್ಯದರ್ಶಿ ಪವನ್ ಕುಮಾರ್ ಸಿಂಗ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....