Homeಮುಖಪುಟದೇಶಾದ್ಯಂತ ಜಾತಿ ಗಣತಿ ಬೆಂಬಲಿಸಬೇಕು: ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಿಂದ ನಿರ್ಣಯ ಅಂಗೀಕಾರ

ದೇಶಾದ್ಯಂತ ಜಾತಿ ಗಣತಿ ಬೆಂಬಲಿಸಬೇಕು: ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಿಂದ ನಿರ್ಣಯ ಅಂಗೀಕಾರ

- Advertisement -
- Advertisement -

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ನಿರ್ಣಾಯಕ ಸಭೆ ಇಂದು ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಆರಂಭಗೊಂಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯ ಕಾರ್ಯತಂತ್ರ ಮತ್ತು ರಾಷ್ಟ್ರವ್ಯಾಪಿ ಜಾತಿ ಗಣತಿ ಕುರಿತು ಪಕ್ಷದ ವರಿಷ್ಠರು ಚರ್ಚೆ ನಡೆಸಲಿದ್ದಾರೆ.

ಯಾವೆಲ್ಲ ರಾಜ್ಯಗಳಲ್ಲಿ ತಮ್ಮ ಪಕ್ಷ ಅಧಿಕಾರದಲ್ಲಿದೆಯೋ ಅಲ್ಲಿ ಜಾತಿ ಗಣತಿ ನಡೆಸಲು ಪಕ್ಷದ ಕಾರ್ಯಕಾರಿ ಸಮಿತಿ ನಿರ್ಣಯ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಉಪಕ್ರಮವು ಜಾತಿ ಅಥವಾ ಧರ್ಮದ ಪರಿಗಣನೆಗಳನ್ನು ಆಧರಿಸಿಲ್ಲ. ಬದಲಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ ಅನುಕೂಲ ಕಲ್ಪಿಸುವ ಉದ್ದೇಶ ಹೊಂದಿದೆ ಎಂದು ಅವರು ಹೇಳಿದ್ದಾರೆ.

”ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಾತಿ ಗಣತಿ ಕುರಿತು ನಾಲ್ಕು ಗಂಟೆಗಳ ಕಾಲ ಚರ್ಚೆ ನಡೆಸಿದ್ದೇವೆ. ನಮ್ಮ ಸಿಎಂಗಳು ರಾಜ್ಯಗಳಲ್ಲಿ ಜಾತಿ ಗಣತಿ ನಡೆಸುವ  ನಿರ್ಣಯ ಅಂಗೀಕರಿಸಿದ್ದಾರೆ. ಜಾತಿ ಗಣತಿ ಮಾಡುವಂತೆ ಬಿಜೆಪಿಗೆ ಒತ್ತಾಯಿಸುತ್ತೇವೆ, ಮಾಡದಿದ್ದರೆ ನಮಗೇ ಬಿಡಲಿ. INDIA ಮೈತ್ರಿಕೂಟದ ಬಹುತೇಕ ಮೈತ್ರಿ ಪಾಲುದಾರರು ಜಾತಿ ಗಣತಿಯ ಕಲ್ಪನೆಯನ್ನು ಬೆಂಬಲಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಚುನಾವಣಾ ಆಯೋಗವು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದ ದಿನದಂದು ಈ ಸಭೆ ನಡೆಯುತ್ತಿದ್ದು ಮಹತ್ವ ಪಡೆದಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಎಲ್ಲಾ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಉನ್ನತ ನಾಯಕರು ಚುನಾವಣಾ ಸಿದ್ಧತೆ ಬಗ್ಗೆ ಚರ್ಚಿಸಿದರು.

ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ತನ್ನ ಸರ್ಕಾರಗಳನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿ (BRS) ಮತ್ತು ಮಿಜೋರಾಂನಲ್ಲಿ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ನಿಂದ ಅಧಿಕಾರವನ್ನು ಪಡೆದುಕೊಳ್ಳಲು ನೋಡುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಸ್ಥಾನ, ಛತ್ತೀಸ್‌ಗಢ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳು, ಚುನಾವಣೆಗೆ ಒಳಪಟ್ಟಿರುವ ರಾಜ್ಯಗಳ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕರು ಸಿಡಬ್ಲ್ಯೂಸಿ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರೆದಿರುವ ಈ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುತ್ತಿದ್ದಾರೆ.  ವರ್ಷಾಂತ್ಯದಲ್ಲಿ ಮಧ್ಯಪ್ರದೇಶ, ರಾಜಸ್ತಾನ, ತೆಲಂಗಾಂಣ ಮಿಜೋರಾಂ ರಾಜ್ಯಗಳಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿರುವುದರಿಂದ ತಯಾರಿ, ಅಭ್ಯರ್ಥಿಗಳ ಆಯ್ಕೆ, ಪ್ರಚಾರ ಕಾರ್ಯಕ್ರಮ ಮೊದಲಾದ ವಿಷಯಗಳನ್ನು ಚರ್ಚಿಸಲು ಮಲ್ಲಿಕಾರ್ಜುನ ಖರ್ಗೆ ಸಭೆ ಕರೆದಿದ್ದಾರೆ.

ಇದನ್ನೂ ಓದಿ: ಹನಿಟ್ರ್ಯಾಪ್ ಹೆಸರಿನಲ್ಲಿ ಬ್ಲ್ಯಾಕ್ ಮೇಲ್: ಮುನಿರತ್ನ ವಿರುದ್ಧ ಮಾಜಿ ಕಾರ್ಪೋರೇಟರ್ ಗಂಭೀರ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...