Homeಕರ್ನಾಟಕಸಾಮಾಜಿಕ ನ್ಯಾಯ ಕಲ್ಪಿಸಲು ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು: ನಾಗರಾಜ್ ಯಾದವ್

ಸಾಮಾಜಿಕ ನ್ಯಾಯ ಕಲ್ಪಿಸಲು ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು: ನಾಗರಾಜ್ ಯಾದವ್

- Advertisement -
- Advertisement -

ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು; ರಾಜ್ಯದಲ್ಲಿ ಕಾಂತರಾಜು ಆಯೋಗ ನಡೆಸಿರುವ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಸ್ವೀಕರಿಸಿ, ಜಾರಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ವಕ್ತಾರರಾದ ನಾಗರಾಜ್ ಯಾದವ್ ಆಗ್ರಹಿಸಿದರು.

ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಶೇ.70 ರಷ್ಟಿರುವ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳ ಪ್ರಶ್ನೆ ಬಂದಾಗ ಒಂದಾಗಿ ಹೋರಾಡಬೇಕಾಗುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಕೊಟ್ಟಿರುವ ಸಂವಿಧಾನವನ್ನು ಬಳಸಿಕೊಂಡು, ಅವರು ಹೇಳಿದಂತೆ ನಾವು ಸಂಘಟಿತರಾಗಬೇಕಿದೆ. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳುವುದಕ್ಕಾಗಿ ನಾವು ಇಂದು ಒಟ್ಟಾಗಿದ್ದೇವೆ’ ಎಂದರು

‘ಸಂವಿಧಾನ ಆಶಯಗಳನ್ನು ಉಳಿಸುವುದಕ್ಕಾಗಿ ನಾವು ಒಗ್ಗಟ್ಟಾಗಿದ್ದೇವೆ. ನಮ್ಮ ಸಾಮಾಜಿಕ ಹಾಗೂ ಶೈಕ್ಷಣಿಕ, ರಾಜಕೀಯ ಹಕ್ಕುಗಳಿಗಾಗಿ ಒಂದಾಗುತ್ತಿದ್ದೇವೆ; ಸಿದ್ದರಾಮಯ್ಯ ಅವರು ಆರು ವರ್ಷದ ಹಿಂದೆ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಾವು ಸ್ವಾಗತಿಸುತ್ತವೆ. ವರದಿಯನ್ನು ಸರ್ಕಾರ ಸ್ವೀಕಾರ ಮಾಡಿ, ಜಾರಿ ಮಾಡಬೇಕು ಎಂದು ಆಗ್ರಹಿಸುತ್ತೇವೆ’ ಎಂದು ಒತ್ತಾಯಿಸಿದರು.

‘ಎಲ್ಲ ಶೋಷಿತ ವರ್ಗಗಳಿಗೆ ನ್ಯಾಯ ಕೊಡಿಸಬೇಕು, ಸಂವಿಧಾನಿಕ ಹಕ್ಕುಗಳನ್ನು ನೀಡಬೇಕು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಸಮೀಕ್ಷೆ ಮಾಡಿಸಿದ್ದಾರೆ. ಕಾಂತರಾಜು ಸಮಿತಿಯ ಎಲ್ಲ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಳ್ಳಬೇಕು. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮುದಾಯಗಳಿಗೆ ನೆರವಾಗಲು ಕೇಂದ್ರ ಸರ್ಕಾರ ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು’ ಎಂದರು

‘ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತಾರೆ. ಶೋಷಿತ ವರ್ಗದವರಿಗೆ ನ್ಯಾಯ ಕೊಡಿಸುವ ಜೊತೆಗೆ, ಬಡವರಿಗೆ ಹಲವಾರು ಅಭಿವೃದ್ಧಿ ಕಾರ್ಯಕ್ರಮ ನೀಡಿದ್ದಾರೆ. ಕೊಟ್ಟ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ಸರ್ಕಾರ ಮಾತ್ರ. ಆದ್ದರಿಂದಲೆ ಶೋಷಿತ ವರ್ಗದವರು ಈ ಸರ್ಕಾರದ ಪರವಾಗಿ ನಿಂತಿದ್ದೇವೆ’ ಎಂದರು.

‘ಸರ್ಕಾರ ಕಾಂತರಾಜು ಆಯೋಗದ ವರದಿಯನ್ನು ಸ್ವೀಕರಿಸಬೇಕು; ಸಮಿತಿಯು ಸಾಕಷ್ಟು ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿದ್ದಾರೆ. ಸಂವಿಧಾನ ಆಶಯಗಳನ್ನು ಉಳಿಸಿವುದಕ್ಕೋಸ್ಕರ, ಅಹಿಂದ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವುದಕ್ಕಾಗಿ ಸರ್ಕಾರ ಈ ವರದಿಯನ್ನು ಸ್ವೀಕರಿಸಬೇಕು’ ಎಂದು ನಾಗರಾಜ್ ಯಾದವ್ ಆಗ್ರಹಿಸಿದರು.

ಇದನ್ನೂ ಓದಿ; ಚಿತ್ರದುರ್ಗ: ಶೋಷಿತ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...