Homeಚಳವಳಿಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ವಿಡಿಯೋ ಮತ್ತು ಚಿತ್ರಗಳು ಇಲ್ಲಿವೆ

- Advertisement -
- Advertisement -

ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ದೇಶದಾದ್ಯಂತ ಶನಿವಾರ ಚಕ್ಕಾ ಜಾಮ್(ರಸ್ತೆ ದಿಗ್ಭಂಧನ) ಪ್ರತಿಭಟನೆಗೆ ಕರೆ ನೀಡಿದ್ದರು. ಪ್ರತಿಭಟನಾ ನಿರತ ರೈತರ ಕರೆಗೆ ದೇಶದಾದ್ಯಂತ ಜನರು ಓಗೊಟ್ಟಿದ್ದು ಯಶಸ್ವಿ ರಸ್ತೆ ದಿಗ್ಬಂಧನ ನಡೆಯುತ್ತಿದೆ.

ದೆಹಲಿ, ಉತ್ತರ ಪ್ರದೇಶ, ಉತ್ತರಖಂಡ್ ಹೊರತುಪಡಿಸಿ ಉಳಿದ ರಾಜ್ಯಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ರೈತರು ಕರೆ ನೀಡಿದ್ದರು. ಇದಕ್ಕೆ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಜನಬೆಂಬಲ ವ್ಯಕ್ತವಾಗಿದೆ. ಅದರಲ್ಲೂ ಪಂಜಾಬ್, ಹರಿಯಾಣ, ರಾಜಸ್ಥಾನ್‌‌ ರಾಜ್ಯಗಳಲ್ಲಿ ಭಾರಿ ಜನಬೆಂಬಲ ವ್ಯಕ್ತವಾಗಿದೆ.

ಪಂಜಾಬ್‌ನ ಮೆಹಲ್ ಕಲನ್ ಬರ್ನಾಲ ಟೋಲ್ ಪ್ಲಾಜಾ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಲೈವ್‌ ವಿಡಿಯೋ ನೋಡಿ.

ಹರಿಯಾಣದ ಕರ್ನಾಲ್‌ನಲ್ಲಿ ರಸ್ತೆ ದಿಗ್ಭಂಧನ ನಡೆಸಿ ರೈತರಿಗೆ ಬೆಂಬಲ ನೀಡಲಾಯಿತು.

ನಾಸಿಕ್-ಔರಂಗಾಬಾದ್ ಹೆದ್ದಾರಿಯನ್ನು ಸ್ವಾಭಿಮಾನಿ ಶೇತ್ಕಾರಿ ಸಂಘಟನೆಯು, ನಾಸಿಕ್‌ನ ನಿಫಾದ್‌ನಲ್ಲಿ ತೆಡೆದು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ದೆಹಲಿ-ಚಂಡೀಘಡ್ ಹೆದ್ದಾರಿಯನ್ನು ರೈತರು ಕರ್ನಾಲ್‌‌ನಲ್ಲಿ ತಡೆಹಿಡಿದಿದ್ದಾರೆ.

ಹರಿಯಾಣದಲ್ಲಿರುವ ಭಿವಾನಿ-ಜಿಂದ್ ಹೆದ್ದಾರಿಯನ್ನು ರೈತರು ತಡೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 44 ಅನ್ನು ಲೂಧಿಯಾನದಲ್ಲಿ ತಡೆಯಲಾಗಿದೆ. ಅಲ್ಲದೆ ಅಮೃತಸರ ಪ್ರವೇಶ ಮಾಡುವ ಹೆದ್ದಾರಿ ಬಳಿ ಭಾರಿ ಸಂಖ್ಯೆಯ ರೈತರು ನರೆದಿದ್ದಾರೆ. ಶಹಜಹಾನ್‌ಪುರ್ ಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆಯಲಾಗಿದೆ.

ಹರಿಯಾಣದ ಫತೇಹಾಬಾದ್ ಜಿಲ್ಲೆಯ ’ಲಾಲ್ ಬತ್ತಿ’ ಹೆದ್ದಾರಿಯನ್ನು ಬಂದ್ ಮಾಡಲಾಯಿತು.

ಹರಿಯಾಣದ ಮಹಾಮ್-ಗೊಹಾನ ರಸ್ತೆಯನ್ನು ತಡೆ ಮಾಡಲಾಗಿದೆ.

ರಾಷ್ಟ್ರೀಯ ಹೆದ್ದಾರಿ-1 ಅನ್ನು ರೈತರು ಕರ್ನಾಲ್‌‌‌ನಲ್ಲಿ ತಡೆದರು.

ಉಕ್ಲಾನಾ ಮಂಡಿಯ ಸುರೇವಾಲಾ ಚೌಕ್‌ನಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಜಮಾಯಿಸಿದ್ದಾರೆ. ರಸ್ತೆ ತಡೆಯನ್ನು ಮಾಡಲಿದ್ದಾರೆ.

ಪಾಣಿಪತ್‌-ರೋಹ್ಟಕ್ ರಸ್ತೆಯನ್ನು ರೈತರು ತಡೆದಿದ್ದಾರೆ. ರೋಹ್ಟಕ್-ಹಿಸಾರ್ ರಸ್ತೆಯಲ್ಲಿರುವ ಮದೀನಾ ಟೋಲ್‌ನಲ್ಲಿ ರೈತರು ಸಭೆ ನಡೆಸಿ ಅಲ್ಲಿ ರಸ್ತೆ ತಡೆ ಮಾಡಿದ್ದಾರೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಗ್ರಾಮವಾದ ನಿಂಡಾನಾದಲ್ಲಿನ ಹೆದ್ದಾರಿಯನ್ನು ರೈತರು ದಿಗ್ಬಂಧನ ಮಾಡಿದ್ದಾರೆ.

ಸಂಗೂರ್‌ನ ಕಲಾಝಾರ್ ಟೋಲ್‌ ಪ್ಲಾಝಾದಲ್ಲಿ ರೈತರು ರಸ್ತೆ ತಡೆ ಮಾಡಿ ದಿಗ್ಬಂಧನ ಮಾಡಿದ್ದಾರೆ.

ಹಿಸಾರ್-ಚಂಡೀಗಡ ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಡ್ಡೋಪಟ್ಟಿ ಟೋಲ್ ಪ್ಲಾಜಾದಲ್ಲಿ ರೈತರು ರಸ್ತೆ ದಿಗ್ಭಂಧನ ಮಾಡಿದ್ದಾರೆ. ಅಲ್ಲಿನ ಚೌಧರಿವಾಸ್, ಮಯ್ಯದ್ ಮತ್ತು ಲ್ಯಾಂಡ್ಹಾಲಿ ಟೋಲ್ ಪ್ಲಾಜಾಗಳಲ್ಲಿಯೂ ಸಹ ಚಕ್ಕಾ-ಜಾಮ್ ಮಾಡಲಾಗಿದೆ.

ಪಂಜಾಬ್‌ನ ಪಾಟಿಯಾಲದ ಹಳ್ಳಿಯಾದ ಬರ್ನ್‌ನಲ್ಲಿ ರೈತರು ರಸ್ತೆ ತಡೆ ನಡೆಸಿದ್ದಾರೆ.

ರಾಜಸ್ಥಾನ್‌‌ನ ನೋಹರ್‌‌ನಲ್ಲಿ ರೈತರು ರಸ್ತೆ ತಡೆ ನಡೆಸಿದರು.

AIKMS ಸಂಘಟನೆಯು ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ರಸ್ತೆತಡೆಯನ್ನು ನಡೆಸಿ ರೈತರಿಗೆ ಬೆಂಬಲ ಸೂಚಿಸಿತು.

ಹೈದರಾಬಾದ್‌‌ನಲ್ಲಿ ರೈತರನ್ನು ಬೆಂಬಲಿಸಿ ರಸ್ತೆ ತಡೆಯನ್ನು ಮಾಡಲಾಯಿತು.

ಇದನ್ನೂ ಓದಿ: ರೈತ ಹೋರಾಟ: ಏನಿದು ‘ಚಕ್ಕಾ ಜಾಮ್’ ರಸ್ತೆ ತಡೆ ಪ್ರತಿಭಟನೆ? ಹೇಗಿರುತ್ತದೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Mangaluru| MRPLನಲ್ಲಿ ಭಾರಿ ಸ್ಫೋಟ: 8 ಮಂದಿಗೆ ಗಾಯ, ಕಂಪಿಸಿದ ಜೋಕಟ್ಟೆಯ ಮನೆಗಳು-ಅಂಗನವಾಡಿ

ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಬಳಿ ಇರುವ ಮಂಗಳೂರು ರಿಫೈನರಿ ಅಂಡ್‌ ಪೆಟ್ರೋಕೆಮಿಕಲ್ಸ್‌‌ ಲಿಮಿಟೆಡ್‌ (MRPL) ಸಂಸ್ಥೆಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ (ಸಿಎಚ್‌ಟಿ) ಬುಧವಾರ ಮಧ್ಯಾಹ್ನ 12:15 ರ ಸುಮಾರಿಗೆ ಭಾರಿ...

ಎಸ್‌ಐಆರ್ ಪೂರ್ಣಗೊಂಡ ರಾಜ್ಯಗಳ ಫಾರ್ಮ್-6 ರಲ್ಲಿನ ‘ಸ್ವಘೋಷಣೆ’ ನಿಯಮಕ್ಕೆ ಬ್ರೇಕ್‌; ವಿವಾದದ ಬೆನ್ನಲ್ಲೇ ಚುನಾವಣಾ ಆಯೋಗದ ನಿರ್ಧಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪೂರ್ಣಗೊಂಡಿರುವ ರಾಜ್ಯಗಳಲ್ಲಿ, ಆನ್‌ಲೈನ್ ಮತದಾರರ ನೋಂದಣಿ 'ಫಾರ್ಮ್ 6' ರಲ್ಲಿದ್ದ ಹೆಚ್ಚುವರಿ ಎಸ್‌ಐಆರ್-ಸಂಬಂಧಿತ ಸ್ವಯಂಘೋಷಣಾ ಪತ್ರವನ್ನು ಚುನಾವಣಾ ಆಯೋಗವು ಹಿಂಪಡೆದಿದೆ. ಈ ನಿಯಮವು ಎಸ್‌ಐಆರ್...

‘ಇವಿಎಂ ಬಿಜೆಪಿ ಬಳಸುವ ಸಾಧನ’: ಬ್ಯಾಲೆಟ್ ಪೇಪರ್‌ಗೆ ಮರಳಲು ಖರ್ಗೆ ಒತ್ತಾಯ; ಗ್ಯಾನೇಶ್ ಕುಮಾರ್ ವಿರುದ್ಧ ವಾಗ್ದಾಳಿ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಮತ್ತು ಕೇಂದ್ರದ ಆಡಳಿತಾರೂಢ ಬಿಜೆಪಿ ನಡುವಿನ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ...

‘ಮಹಿಳೆಯರೇ ಪರಿಸ್ಥಿತಿ ಬದಲಿಸುತ್ತಾರೆ’: ಸುರಕ್ಷತೆ ಹೆಸರಿನಲ್ಲಿ ನಿರ್ಬಂಧ, ಅತ್ಯಾಚಾರ, ಲಿಂಗಾಧಾರಿತ ಹಿಂಸೆ ವಿರುದ್ಧ ದೆಹಲಿ ವಿದ್ಯಾರ್ಥಿನಿಯರ ಪ್ರತಿಭಟನೆ

ನವದೆಹಲಿ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಮರುಕಳಿಸುತ್ತಿರುವ ಬೆನ್ನಲ್ಲೇ, ಮಹಿಳೆಯರ ಸುರಕ್ಷತೆಯ ಹೆಸರಿನಲ್ಲಿ ಅವರ ಸ್ವಾತಂತ್ರ್ಯ ಮತ್ತು ಚಲನವಲನದ ಮೇಲೆಯೇ ನಿರ್ಬಂಧ ಹೇರುವ ಕ್ರಮಗಳ ವಿರುದ್ಧ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಬೀದಿಗಿಳಿದು...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಅವರ ಮೂರನೇ ಜಾಮೀನು ಅರ್ಜಿಯನ್ನೂ ತಿರಸ್ಕರಿಸಿದ ದೆಹಲಿ ಹೈಕೋರ್ಟ್‌

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿತರಾಗಿರುವ ವಿದ್ಯಾರ್ಥಿ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು...

Mysore| SIR ವಿರುದ್ಧ ಸರ್ಕಾರ ವಿಶೇಷ ಅಧಿವೇಶನ ನಡೆಸಲಿ: ಪ್ರಕಾಶ್ ರಾಜ್

ಕೇಂದ್ರ ಚುನಾವಣಾ ಆಯೋಗವು ಜಾರಿಗೆ ತಂದಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಿಂದಾಗಿ ರಾಜ್ಯದಲ್ಲಿ ಲಕ್ಷಾಂತರ ಬಡ ಹಾಗೂ ಅರ್ಹ ಮತದಾರರ ಹಕ್ಕು ಕಸಿಯಲಾಗುತ್ತಿದ್ದು, ಈ ಅನ್ಯಾಯದ ವಿರುದ್ಧ ನಾಗರಿಕ ಸಂಘಟನೆಗಳು ಸಂಗ್ರಹಿಸಿರುವ...

SIR: ‘ಫಾರ್ಮ್ 6’ ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ!

ಹೊಸ ಮತದಾರರ ನೋಂದಣಿಗೆ ಕಾಗದಪತ್ರಗಳ ಅಡೆತಡೆ ಒಡ್ಡುತ್ತಿದ್ದ ತನ್ಮೂಲಕ ಹಕ್ಕು ವಂಚಿತಗೊಳಿಸುತ್ತಿದ್ದ ಆರೋಪ ಎದುರಿಸುತ್ತಿದ್ದ ಕೇಂದ್ರ ಚುನಾವಣಾ ಆಯೋಗವು ಸಾರ್ವಜನಿಕ ಮತ್ತು ಕಾನೂನಾತ್ಮಕ ಒತ್ತಡದ ಹಿನ್ನೆಲೆಯಲ್ಲಿ ಭಾಗಶಃ ಹಿಂದೆ ಸರಿದಿದೆ. 'ವಿಶೇಷ ತೀವ್ರ...

ಹೈದರಾಬಾದ್ ವಿವಿ ವಿದ್ಯಾರ್ಥಿ ಸಂಘದ ಚುನಾವಣೆ : ABVPಗೆ ಸೋಲು; ಅಧ್ಯಕ್ಷೆಯಾಗಿ SFIನ ದಿಲ್ಶಾದಾ ರೈಹಾನ್ ಆಯ್ಕೆ

ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA), ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್ (ASA), ದಲಿತ ಸ್ಟೂಡೆಂಟ್ಸ್ ಯೂನಿಯನ್ (DSU), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಮತ್ತು ಟ್ರೈಬಲ್ ಸ್ಟೂಡೆಂಟ್ಸ್ ಫೋರಂ (TSF) ಒಳಗೊಂಡ...

CWC ಸಭೆಯಲ್ಲಿ ನಿತೀಶ್ ಕುಮಾರ್ ವಿಚಾರ ಪ್ರಸ್ತಾಪ: ಸೋನಿಯಾ ಗಾಂಧಿ ಮತ್ತು ದಿಗ್ವಿಜಯ್ ಸಿಂಗ್ ನಡುವೆ ಭಿನ್ನಾಭಿಪ್ರಾಯ

ಜೆಡಿಯು ನಾಯಕ ನಿತೀಶ್ ಕುಮಾರ್ 2024ರಲ್ಲಿ 'ಇಂಡಿಯಾ' (INDIA) ಮೈತ್ರಿಕೂಟದಿಂದ ಹೊರಬಂದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಂತರಿಕ ಸಭೆಯಲ್ಲಿ ನಾಯಕರ ನಡುವೆ ಗಂಭೀರ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ...

‘ಇಸಿಐನೆಟ್’ ಸಾಫ್ಟ್‌ವೇರ್ ಲೋಪ: ಸ್ಥಳೀಯ ಅಧಿಕಾರಿಗಳ ಶಾಸನಬದ್ಧ ಅಧಿಕಾರ ಹರಣ ಆರೋಪಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಮಹಾರಾಷ್ಟ್ರ ಸಿಇಒ ಸುದೀರ್ಘ ಪತ್ರ!

ಕೇಂದ್ರ ಚುನಾವಣಾ ಆಯೋಗವು ದೇಶಾದ್ಯಂತ ಜಾರಿಗೆ ತಂದಿರುವ 'ಇಸಿಐನೆಟ್' (ECINet) ಕೇಂದ್ರೀಕೃತ ಸಾಫ್ಟ್‌ವೇರ್, ಕಾನೂನುಬದ್ಧವಾಗಿ ಸ್ಥಳೀಯ ಮತದಾರ ನೋಂದಣಿ ಅಧಿಕಾರಿಗಳಿಗೆ (ERO) ನೀಡಲಾಗಿರುವ ಶಾಸನಬದ್ಧ ಅಧಿಕಾರಗಳನ್ನು ಕಸಿಯುತ್ತಿದೆ ಎಂಬ ಗಂಭೀರ ಆರೋಪ ಎದುರಾಗಿದೆ....