Homeಮುಖಪುಟಗುಂಪು ಥಳಿತ/ಹತ್ಯೆಯ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ. ಜಾರ್ಖಂಡ್ ಘಟನೆಗೆ ಖಂಡನೆ

ಗುಂಪು ಥಳಿತ/ಹತ್ಯೆಯ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ. ಜಾರ್ಖಂಡ್ ಘಟನೆಗೆ ಖಂಡನೆ

- Advertisement -
- Advertisement -

ವಾರದ ಹಿಂದೆ ಜಾರ್ಖಂಡ್ ರಾಜ್ಯದಲ್ಲಿ ಮುಸ್ಲಿಂ ಯುವಕನನ್ನು, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿ, ಕ್ರೂರವಾಗಿ ಥಳಿಸಿ ಹತ್ಯೆಗೈದಿದ್ದನ್ನು ವಿರೋಧಿಸಿ ಇಂದು ಸಂಜೆ ನೂರಾರು ಜನರು, ಪುರುಷರು ಮತ್ತು ಮಹಿಳೆಯರು ಭಾರತದ ರಾಷ್ಟ್ರ ರಾಜಧಾನಿಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಅದಕ್ಕೂ ಮೊದಲು ಮೇಣದ ದೀಪ ಮೆರವಣಿಯ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಹಸು, ಗೋಮಾಂಸ ಅಥವಾ ಕಳ್ಳತನದ ಹೆಸರಿನಲ್ಲಿ ಹಲ್ಲೆ ಮಾಡುವ ಪ್ರವೃತ್ತಿಯ ವಿರುದ್ಧ ಘೋಷಣೆಗಳನ್ನು ಎತ್ತಿದ ಪ್ರತಿಭಟನಾಕಾರರು, ಈ ಭೀತಿಯ ಬಗ್ಗೆ ಶೀಘ್ರವಾಗಿ ಪರಿಶೀಲನೆ ನಡೆಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ದೆಹಲಿಯ ಸಂಸತ್ ಭವನದ ಬಳಿಯ ಜಂತರ್ ಮಂತರ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆ ಮತ್ತು ಕ್ಯಾಂಡಲ್ ಮೆರವಣಿಗೆಯಲ್ಲಿ ಹಲವಾರು ಪ್ರಖ್ಯಾತ ಜನರು ಭಾಗವಹಿಸಿದ್ದರು.

ದೆಹಲಿ ವಿಶ್ವವಿದ್ಯಾಲಯದ ಪ್ರೊ.ಅಪೂರ್ವಾನಂದ ರವರು ಮಾತನಾಡಿ “ಇದು  ಗುಂಪು ಹತ್ಯೆಯ ಪ್ರಶ್ನೆಯಷ್ಟೇ ಅಲ್ಲ. ಮುಸ್ಲಿಮರ ವಿರುದ್ಧ ದ್ವೇಷವನ್ನು ಯೋಜಿತ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಇಂದು ಅಧಿಕಾರದಲ್ಲಿ ಕುಳಿತವರು ಇದನ್ನು ಪ್ರಚೋದಿಸುತ್ತಿದ್ದಾರೆ… ಮುಸ್ಲಿಂ ಸಂಸದರು ಪ್ರಮಾಣ ವಚನ ಸ್ವೀಕರಿಸುವಾಗ ಸಂಸತ್ತಿನಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಎದ್ದ ರೀತಿ, ಆ ದೃಶ್ಯವು ಗುಂಪು ಹತ್ಯೆಗಿಂತ ಕಡಿಮೆಯಿಲ್ಲ. ಈ ಸ್ಥಳವು ಸಂಸತ್ತಾಗಿರುವುದು ಅದೃಷ್ಟ, ಇಲ್ಲದಿದ್ದರೆ ಮುಸ್ಲಿಂ ಸಂಸದರ ಮೇಲೆ ‘ಜೈ ಶ್ರೀ ರಾಮ್’ ಅಂತ ಹೇಳಿ ಹಲ್ಲೆ ಮಾಡುವುದನ್ನು ನೀವು ಹೇಗೆ ತಡೆಯುತ್ತೀರಿ?” ಎಲ್ಲಾ ಜನರು, ವಿಶೇಷವಾಗಿ ಹಿಂದೂಗಳು ಇದರ ವಿರುದ್ಧ ಹೊರಬರಬೇಕು ಎಂದು ಅವರು ಹೇಳಿದರು.

“ಜೈ ಶ್ರೀ ರಾಮ್” ಎಂಬ ಘೋಷಣೆ ಮುಸ್ಲಿಮರ ಮೇಲೆ ಆಕ್ರಮಣ ಮಾಡಲು ಹೊಸ ಅಸ್ತ್ರವಾಗಿದೆ ಎಂಬುದು ಸ್ಪಷ್ಟವಾಗಿದೆ. ಮತ್ತು ಇದನ್ನು ಸರ್ಕಾರ ಮತ್ತು ದೇಶದ ಆಡಳಿತಗಾರರು ಪ್ರಚೋದಿಸುತ್ತಿದ್ದಾರೆ. ದೇಶದ ಜನರು ವಿಶೇಷವಾಗಿ ಹಿಂದೂಗಳು ಇದನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅವರು ಅದರ ವಿರುದ್ಧ ಬಹಿರಂಗವಾಗಿ ಮಾತನಾಡಬೇಕು, ಇಲ್ಲದಿದ್ದರೆ ಭಾರತವು ತೀವ್ರ ಹಿಂಸಾಚಾರದ ಸುಳಿಯಲ್ಲಿ ಸಿಲುಕಲಿದ್ದು ಅದರಿಂದ ಹೊರಬುರವ ದಾರಿ ಕಾಣುತ್ತಿಲ್ಲ ಎಂದಿದ್ದಾರೆ”

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಡಳಿತದ ಕಳೆದ ಐದು ವರ್ಷಗಳಲ್ಲಿ ನಡೆದ ಗುಂಪು ಹತ್ಯೆ ಘಟನೆಗಳ ಬಗ್ಗೆ ಮಾತನಾಡಿದ್ದು ಕಡಿಮೆ. ಇಂದು ಸಹ ಜಾರ್ಖಂಡ್ ಲಿಂಚಿಂಗ್ ಪ್ರಕರಣದ ಕುರಿತು ರಾಜ್ಯಸಭೆಯಲ್ಲಿ ಮಾತನಾಡುವಾಗ, ಈ ಘಟನೆ ಎಲ್ಲರಿಗೂ ನೋವಿನ ಸಂಗತಿಯಾಗಿದೆ . ಆದರೆ ಅದಕ್ಕಾಗಿ ಇಡೀ ಜಾರ್ಖಂಡ್ ರಾಜ್ಯದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಪ್ರತಿಪಕ್ಷಗಳನ್ನು ಗುರಿಯಾಗಿಸಿ ಮಾತನಾಡಿದ್ದಾರೆ.

“ಜಾರ್ಖಂಡ್ ನಲ್ಲಿನ ಲಿಂಚಿಂಗ್ ನನಗೆ ನೋವುಂಟು ಮಾಡಿದೆ. ಇದು ಇತರರಿಗೂ ದುಃಖ ತಂದಿದೆ. ಆದರೆ, ರಾಜ್ಯಸಭೆಯಲ್ಲಿ ಕೆಲವರು ಜಾರ್ಖಂಡ್ ಅನ್ನು ಹಲ್ಲೆ ಮಾಡುವ ರಾಜ್ಯವೆಂದು ಕರೆಯುತ್ತಿದ್ದಾರೆ. ಇದು ನ್ಯಾಯೋಚಿತವೇ? ಅವರು ರಾಜ್ಯವನ್ನು ಏಕೆ ಅವಮಾನಿಸುತ್ತಿದ್ದಾರೆ? ಜಾರ್ಖಂಡ್ ರಾಜ್ಯವನ್ನು ಅವಮಾನಿಸುವ ಹಕ್ಕು ನಮ್ಮಲ್ಲಿ ಯಾರಿಗೂ ಇಲ್ಲ ”ಎಂದು ಪ್ರಧಾನಿ ಕೇಳಿದ್ದಾರೆ.

ಆದಾಗ್ಯೂ, ಜಾರ್ಖಂಡ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ ಕೇವಲ ಹತ್ತಕ್ಕೂ ಹೆಚ್ಚು ಜನರು ಗುಂಪು ಹತ್ಯೆ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಸತ್ಯಗಳು ತೋರಿಸುತ್ತವೆ ಮತ್ತು ಸದ್ಯದಲ್ಲಿಯೇ ಜಾರ್ಖಂಡ್ ನಲ್ಲಿ ಚುನಾವಣೆ ನಡೆಯಲಿದ್ದು ಅದನ್ನು ಗುರಿಯಾಗಿಸಿ ಪ್ರಧಾನಿ ಮಾತನಾಡುತ್ತಿದ್ದಾರೆ, ಅವರಿಗೆ ಜನರ ಸಾವಿಗಿಂತ ಚುನಾವಣೆಯ ದೃಷ್ಟಿಯೇ  ಮುಖ್ಯವಾಗಿರುವುದು ದುರಂತ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

ಜಾರ್ಖಂಡ್ ನಲ್ಲಿ  ಈ ಯುವಕನನ್ನು ಕ್ರೂರವಾಗಿ ಥಳಿಸಿ ಹತ್ಯೆ ಮಾಡಿರುವುದು ಮಾನವೀಯತೆಗೆ ದೊಡ್ಡ ಕಳಂಕವಾಗಿದೆ. ಸಾಯುತ್ತಿರುವ ಈ ಹುಡುಗನನ್ನು 4 ದಿನಗಳ ಕಾಲ ಬಂಧನದಲ್ಲಿರಿಸಿದ್ದ ಪೊಲೀಸರ ಕ್ರೌರ್ಯ ಆಘಾತಕಾರಿ, ಬಿಜೆಪಿ ಆಡಳಿತದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಪ್ರಬಲ ಧ್ವನಿಗಳು ಮೌನವಾಗಿವೆ ”ಎಂದು ರಾಹುಲ್ ಗಾಂಧಿ #IndiaAgainstLynchTerror ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಯುವ ಸಾಮಾಜಿಕ ಕಾರ್ಯಕರ್ತ ವಾಲಿ ರಹಮನಿ “ನಾಗರಿಕ ಸಮಾಜವು ಸಮಾಜದ ಸಮತೋಲನ ಅಂಶವಾಗಿದೆ. ಸಮಾಜದಲ್ಲಿ ಏನಾದರೂ ತಪ್ಪು ನಡೆಯುತ್ತಿದ್ದರೆ, ನಾಗರಿಕ ಸಮಾಜ ಹೊರಬಂದು ಅದರ ವಿರುದ್ಧ ಮಾತನಾಡಬೇಕು. ಅವರು ಜನಸಮೂಹ ಹತ್ಯೆ ವಿರುದ್ಧ ಮಾತನಾಡಬೇಕು ಮತ್ತು ಹಿಂದೂಸ್ತಾನ್ ಅನ್ನು ಲಿಂಚಿಸ್ತಾನ್ ಆಗಿ ಪರಿವರ್ತಿಸದಂತೆ ತಡೆಯಬೇಕು. ”

ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ಮತ್ತು ನದೀಮ್ ಖಾನ್ ಸೇರಿದಂತೆ ಹಲವಾರು ಯುವ ಮುಖಂಡರು ಮತ್ತು ಯುವ ಸಾಮಾಜಿಕ ಕಾರ್ಯಕರ್ತರು ಪ್ರತಿಭಟನಾ ಪ್ರದರ್ಶನದಲ್ಲಿ ಮಾತನಾಡಿದರು. ದೇಶಾದ್ಯಂತ ನಡೆದ ಪ್ರತಿಭಟನೆಯ ಕೆಲವು ಫೋಟೋಗಳು ಇಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...