Homeಕರ್ನಾಟಕನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

ನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

- Advertisement -
- Advertisement -

ದೇಶದಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಇತರೆ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ರಾಷ್ಟ್ರ ಮಟ್ಟದಲ್ಲಿ ನಡೆಸುವ ನೀಟ್ ಪರೀಕ್ಷೆ ಸಂವಿಧಾನ ವಿರೋಧಿಯಾಗಿದ್ದು, ಈ ಪರೀಕ್ಷೆಯ ಮೂಲಕ ವೈದ್ಯಕೀಯ ಶಿಕ್ಷಣವನ್ನು ಕೇಂದ್ರ ಸರ್ಕಾರ ತನ್ನ ಹಿಡಿತದಲ್ಲಿಟ್ಟುಕೊಳ್ಳುವ ಹುನ್ನಾರ ಅಡಗಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್(SFI)ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

“ಈ ಪರೀಕ್ಷೆಯಲ್ಲಿ ಇಂಗ್ಲಿಷ್, ಹಿಂದಿ ಭಾಷೆಯ ಅಭ್ಯರ್ಥಿಗಳೇ ಹೆಚ್ಚು ಪ್ರವೇಶ ಪಡೆಯುತ್ತಿದ್ದಾರೆ. ಈ ನೀಟ್ ಪರೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ತಳಸಮುದಾಯದ ವಿದ್ಯಾರ್ಥಿಗಳು ಲಕ್ಷಾಂತರ ರೂಪಾಯಿ ಸುರಿಯುವ ಶ್ರೀಮಂತ, ಉನ್ನತ ಶೈಕ್ಷಣಿಕ ಸೌಲಭ್ಯವುಳ್ಳ ಅಭ್ಯರ್ಥಿಗಳ ಜೊತೆಗೆ ಪೈಪೋಟಿ ನಡೆಸಿ ಸೀಟು ಗಿಟ್ಟಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಇದರಿಂದ ಸಾಮಾಜಿಕ ನ್ಯಾಯ ಉಲ್ಲಂಘನೆಯಾಗುತ್ತಿದೆ” ಎಂದು ಎಸ್‌ಎಫ್‌ಐ ಹೇಳಿದೆ.

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

“ಕಳೆದ ನಾಲ್ಕು ವರ್ಷಗಳಲ್ಲಿ ತಮಿಳುನಾಡು ಮತ್ತು ಇತರ ರಾಜ್ಯಗಳಲ್ಲಿ ನೀಟ್ ಪರೀಕ್ಷೆಯಿಂದ ಅನ್ಯಾಯಕ್ಕೊಳಗಾದ ಸುಮಾರು 22 ಜನ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಗುರಿಯಾಗಿದ್ದಾರೆ. ಈ ಹಿನ್ನೆಲೆ ತಮಿಳುನಾಡು ರಾಜ್ಯ ಸರ್ಕಾರ ಎ.ಕೆ. ರಾಜನ್‌ರವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದೆ. ಈ ಸಮಿತಿಯು ತನ್ನ ವರದಿಯಲ್ಲಿ ಪರೀಕ್ಷೆಯ ತರಬೇತಿಗಾಗಿ ಪ್ರತಿವರ್ಷ ದೇಶದಲ್ಲಿ ಖಾಸಗಿ ಕೋಚಿಂಗ್ ಸೆಂಟರ್ ಹಾವಳಿ ಸುಮಾರು 16 ಸಾವಿರ ಕೋಟಿಯಷ್ಟು ದೊಡ್ಡ ಮಾಫಿಯಾ ನಡೆಯುತ್ತಿದೆ. ಒಬ್ಬ ವಿದ್ಯಾರ್ಥಿಗೆ ನೀಟ್ ಪರೀಕ್ಷೆಯ ಕೋಚಿಂಗ್ ಗೆ ಒಂದು ಲಕ್ಷದಿಂದ 5 ಲಕ್ಷದವರೆಗೆ ಹಣ ವಸೂಲಿ ನಡೆಯುತ್ತಿದೆ ಎಂದು ಹೇಳಿದೆ” ಎಂದು ಎಸ್‌ಎಫ್‌ಐ ತನ್ನ ಪ್ರತ್ರಿಕಾ ಪ್ರಕಟನೆಯಲ್ಲಿ ಹೇಳಿದೆ.

ಹಣ ಬರಿಸಲು ಸಾಧ್ಯವಿಲ್ಲದ ಬಡಕುಟುಂಬದ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ ಪಡೆಯಲು ವಂಚಿತರಾಗುತ್ತಿದ್ದಾರೆ. ನೀಟ್ ಪರೀಕ್ಷೆಯನ್ನು ರದ್ದುಗೊಳಿಸದಿದ್ದರೆ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕುಗಳು ಕಿತ್ತುಕೊಂಡಂತೆ ಆಗುತ್ತಿದೆ. ಆದ್ದರಿಂದ ತಮಿಳುನಾಡು, ಕೇರಳ ಮುಂತಾದ ರಾಜ್ಯಗಳು ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಒಕ್ಕೂಟ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ವಿದ್ಯಾರ್ಥಿ ಸಂಘಟನೆ ಹೇಳಿದೆ.

ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಕರ್ನಾಟಕ ರಾಜ್ಯದಲ್ಲಿ ಕೂಡಾ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಎ.ಕೆ ರಾಜನ್ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕೆಂದು ಎಸ್ಎಫ್ಐ ರಾಜ್ಯ ಸಮಿತಿ ಒತ್ತಾಯಿಸಿದ್ದು, ಜೊತೆಗೆ ದೇಶದಾದ್ಯಂತ ನೀಟ್ ಪರೀಕ್ಷೆ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಂಡಿದೆ.

ಇದನ್ನೂ ಓದಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...