Homeಮುಖಪುಟರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ

ರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ

- Advertisement -
- Advertisement -

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಇಂದು ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ ನಡೆಸಲು ಮುಂದಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ದೆಹಲಿಯ ರಾಜ್ ಘಾಟ್‌ನಲ್ಲಿ ಮಾಡಿದ ಪ್ರತಿಭಟನೆಯ ಮನವಿಯನ್ನು ಪೊಲೀಸರು ತಿರಸ್ಕರಿಸಿದ್ದಾರೆ. ಆದರೂ ಅವರು ಸತ್ಯಾಗ್ರಹದ ನೇತೃತ್ವ ವಹಿಸಿದ್ದಾರೆ.

ಸುಮಾರು ಒಂದು ದಶಕದಿಂದ ಪ್ರಮುಖ ವಿರೋಧ ಪಕ್ಷದ ವಾಸ್ತವಿಕ ಮುಖ್ಯಸ್ಥರಾಗಿರುವ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ಧಾಳಿ ನಡೆಸುತ್ತಿದ್ದಾರೆ. ಹಾಗಾಗಿ ರಾಹುಲ್ ಗಾಂಧಿ ಅವರನ್ನು ಅನರ್ಹತೆಯಗೊಳಿಸುವ ಮೂಲಕ ಮೌನಗೊಳಿಸುವ ‘ಪಿತೂರಿ’ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ತಮ್ಮ ಅನರ್ಹತೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ನಿನ್ನೆ ಪ್ರಧಾನಿಯವರನ್ನು ತರಾಟೆಗೆ ತೆಗೆದುಕೊಂಡರು. ಲಂಡನ್‌ನಲ್ಲಿ ಮಾಡಿದ ಟೀಕೆ ಮತ್ತು ಮಾನನಷ್ಟ ಮೊಕದ್ದಮೆಯ ವಿಚಾರಣೆಯ ಸಮಯದಲ್ಲಿ ಅವರು ಮಾಡಿದ ಹೇಳಿಕೆಗಳಿಗೆ ಏಕೆ ಕ್ಷಮೆಯಾಚಿಸಲಿಲ್ಲ ಎಂದು ಉತ್ತರಿಸಲು ವೀರ್ ಸಾವರ್ಕರ್ ಉಲ್ಲೇಖವನ್ನು ಬಳಸಿದ್ದಾರೆ.

ಇದನ್ನೂ ಓದಿ: ‘ಕ್ಷಮೆ ಕೇಳಲು ನಾನು ಸಾವರ್ಕರ್‌ ಅಲ್ಲ’: ಅನರ್ಹತೆ ಬಳಿಕ ರಾಹುಲ್‌ ಹೇಳಿಕೆ

”ಪ್ರಧಾನಿ ನನ್ನ ಮುಂದಿನ ಭಾಷಣಕ್ಕೆ ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಲಾಗಿದೆ. ನಾನು ಅವರ ಕಣ್ಣುಗಳಲ್ಲಿ ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನನಗೆ ಸಂಸತ್ತಿನಲ್ಲಿ ಮಾತನಾಡಲು ಅವರು ಅವಕಾಶ ನೀಡುತ್ತಿಲ್ಲ” ಎಂದು ರಾಹುಲ್ ಹೇಳಿದರು.

ಕ್ಷಮೆಯಾಚಿಸಬೇಕೆಂಬ ಬಿಜೆಪಿ ಕರೆಗಳಿಗೆ ಪ್ರತಿಕ್ರಿಯಿಸಿದ ಅವರು, ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ, ನಾನು ಕ್ಷಮೆ ಕೇಳುವುದಿಲ್ಲ ಎಂದು ಗಟ್ಟಿಧ್ವನಿಯಲ್ಲೇ ಉತ್ತರಿಸಿದರು.

2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಹುಲ್‌, ”ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ” ಎಂದು ಪ್ರಶ್ನಿಸಿದ್ದರು. ಈ ವಿಚಾರವಾಗಿ ಗುಜರಾತ್‌ನ ನ್ಯಾಯಾಲಯವು ಮಾನನಷ್ಟದ ಆರೋಪದಲ್ಲಿ ತಪ್ಪಿತಸ್ಥರೆಂದು ಹೇಳಿದೆ. ಎರಡು ವರ್ಷ ಜೈಲು ಶಿಕ್ಷೆ ಪ್ರಕಟಿಸಿ, ಜಾಮೀನು ಮಂಜೂರು ಮಾಡಿತು ಮತ್ತು ಉನ್ನತ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲು 30 ದಿನಗಳ ಕಾಲ ಶಿಕ್ಷೆಯನ್ನು ಅಮಾನತುಗೊಳಿಸಿತು. ಈ ತೀರ್ಪಿನ ವಿರುದ್ಧ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಅವರ ವಕೀಲರು ತಿಳಿಸಿದ್ದಾರೆ.

ಲೋಕಸಭೆ ಸೆಕ್ರೆಟರಿಯೇಟ್ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ಬಳಿಕ ಕೇರಳದ ವಯನಾಡ್‌ನಲ್ಲಿರುವ ಅವರ ಕ್ಷೇತ್ರವು ಖಾಲಿಯಾಗಿದೆ. ಚುನಾವಣಾ ಆಯೋಗವು ಈ ಸ್ಥಾನಕ್ಕಾಗಿ ಉಪಚುನಾವಣೆಯನ್ನು ಘೋಷಿಸಬಹುದು.

ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿ, ಅಲ್ಲಿ ಅವರ ಮೇಲಿನ ಅಪರಾಧವನ್ನು ತಡೆಯದೇ ಹೋದರೆ ಎಂಟು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read