Homeಅಂತರಾಷ್ಟ್ರೀಯಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

ಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

- Advertisement -
- Advertisement -

ಉಕ್ರೇನ್‌ನ ಗಡಿಭಾಗದಲ್ಲಿ ತನ್ನ ಸೇನಾ ನಿಯೋಜನೆಯನ್ನ ಹಿಂತೆಗೆದುಕೊಳ್ಳಲು ರಷ್ಯಾ ಸಿದ್ಧವಾಗಿಲ್ಲ. 30 ವರ್ಷಗಳ ನಂತರ ಇದೇ ಮೊದಲ ಬಾರಿಗೆ ರಷ್ಯಾವು ಉಕ್ರೇನ್ನ ಉತ್ತರದ ಗಡಿಭಾಗದಲ್ಲಿ ಮತ್ತು ಬೆಲಾರಸ್‌ನಲ್ಲಿ ತನ್ನ ಸೈನಿಕರು ಮತ್ತು ಸೇನಾ ಶಸ್ತ್ರಾಸ್ತ್ರಗಳ ಪ್ರಮಾಣವನ್ನು ಹೆಚ್ಚಿಸಿದೆ ಎಂದು ನ್ಯಾಟೋ ಸೆಕ್ರೆಟರಿ-ಜನರಲ್ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ರಷ್ಯಾದ ಉದ್ದೇಶಗಳು ಏನಿರಬಹುದು ಎಂಬ ಅನಿಶ್ಚಿತತೆ ಜಾಗತಿಕ ಮಟ್ಟದಲ್ಲಿ ಗೊಂದಲವನ್ನು ಸೃಷ್ಟಿಸಿದೆ. ಈ ನಡುವೆ ಮಾಸ್ಕೋ (ರಷ್ಯಾ ರಾಜಧಾನಿ) ಮತ್ತು ಕೈವ್‌ (ಉಕ್ರೇನ್‌ ರಾಜಧಾನಿ)ನಲ್ಲಿ ಹೆಚ್ಚಿನ ಉನ್ನತ ಮಟ್ಟದ ರಾಜತಾಂತ್ರಿಕತೆಯು ತೆರೆದುಕೊಂಡಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ 

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ದೊಗಾನ್‌ ಅವರು ಉಕ್ರೇನ್ ರಾಜಧಾನಿಯಲ್ಲಿ ಮಾತುಕತೆ ನಡೆಸಲಿದ್ದಾರೆ. ಇದೇ ಸಮಯದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅರ್ಜೆಂಟೀನಾದ ಅಧ್ಯಕ್ಷ ಅಲ್ಬರ್ಟೊ ಫೆರ್ನಾಂಡಿಸ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಲಿದ್ದಾರೆ.

ಉಕ್ರೇನ್‌ನ ಉತ್ತರ ಮತ್ತು ಪೂರ್ವ ಗಡಿಗಳಲ್ಲಿ 1,00,000 ಕ್ಕೂ ಹೆಚ್ಚು ಸೈನಿಕರನ್ನು ರಷ್ಯಾ ನಿಯೋಜಿಸಿದೆ. 2014ರಲ್ಲಿ ಮಾಡಿದಂತೆಯೇ ರಷ್ಯಾ ಮತ್ತೊಮ್ಮೆ ಆಕ್ರಮಣ ಮಾಡಬಹುದು. ಇದರಿಂದಾಗಿ ಉಕ್ರೇನ್‌ನ ಆರ್ಥಿಕತೆ ಅಸ್ಥಿರಗೊಳಿಸಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ. ಆದರೆ, ಉಕ್ರೇನ್‌ ಮೇಲೆ ಆಕ್ರಮಣ ಮಾಡಲು ಯೋಜಿಸಲಾಗಿದೆ ಎಂಬ ಅನುಮಾನಗಳನ್ನು ರಷ್ಯಾದ ಅಧಿಕಾರಿಗಳು ನಿರಾಕರಿಸಿದ್ದಾರೆ.

ಆದರೂ, “ಕಳೆದ ಕೆಲವು ದಿನಗಳಿಂದ ರಷ್ಯಾ ಮಿಲಿಟರಿ ಪಡೆಗಳು ಬೆಲಾರಸ್‌ನಲ್ಲಿ ಬೀಡು ಬಿಡಲಾರಂಭಿಸಿವೆ. ಶೀತಲ ಸಮರದ ನಂತರ ಇದು ರಷ್ಯಾದ ಅತಿದೊಡ್ಡ ನಿಯೋಜನೆಯಾಗಿದೆ” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

ವಿಶೇಷ ಪಡೆಗಳು, ಸುಧಾರಿತ ಫೈಟರ್ ಜೆಟ್‌ಗಳು, ಇಸ್ಕಾಂಡರ್ ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು S-400 ಗ್ರೌಂಡ್‌ ಟು ಏರ್‌ ಕ್ಷಿಪಣಿಗಳು ಸೇರಿದಂತೆ 30,000 ಸೈನಿಕರನ್ನು ರಷ್ಯಾವು ಬೆಲಾರಸ್‌ನಲ್ಲಿ ಸಜ್ಜುಗೊಳಿಸಿದೆ ಎಂದು ಸ್ಟೋಲ್ಟೆನ್‌ಬರ್ಗ್‌ ಹೇಳಿದ್ದಾರೆ.

ಅದೇ ಸಮಯದಲ್ಲಿ, ಉಕ್ರೇನ್ ಕಳೆದ ತಿಂಗಳು ಡ್ರೋನ್ ಮೂಲಕ ದೇಶದ ವಾಯುಪ್ರದೇಶದ ಗಡಿ ಉಲ್ಲಂಘನೆಯನ್ನು ಮಾಡಿದೆ ಎಂದು ಬೆಲಾರಸ್‌ನ ರಕ್ಷಣಾ ಸಚಿವಾಲಯವು ಆರೋಪಿಸಿದೆ. ಬೆಲಾರಸ್‌ನ ಆರೋಪವನ್ನು ತಿರಸ್ಕರಿಸಿರುವ ಉಕ್ರೇನ್, ತಮ್ಮನ್ನು ಮತ್ತಷ್ಟು ಅಸ್ಥಿರಗೊಳಿಸಲು ರಷ್ಯಾದೊಂದಿಗೆ ಬೆಲಾರಸ್ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

“ಉಕ್ರೇನ್‌ಅನ್ನು ಅಸ್ಥಿರಗೊಳಿಸುವ ರಷ್ಯಾದ ಚಟುವಟಿಕೆಗಳನ್ನು ತಡೆಯಲು ನಾವು ಮಿನ್ಸ್ಕ್‌ಗೆ ಕರೆ ನೀಡುತ್ತೇವೆ. ಬೆದರಿಕೆ ಅಸ್ತಿತ್ವದಲ್ಲಿದೆ, ಅಪಾಯಗಳು ಅಸ್ತಿತ್ವದಲ್ಲಿವೆ, ಆದರೆ ಅವರು 2014 ರಿಂದಲೂ ಇದು ಮುಂದುವರೆಯುತ್ತಿದೆ. ಅಂದಿನಿಂದಲೂ ರಷ್ಯಾ ಆಕ್ರಮಣಕಾರಿಯಾಗಿದೆ” ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯದ ವಕ್ತಾರ ಒಲೆಗ್ ನಿಕೊಲೆಂಕೊ ಹೇಳಿದ್ದಾರೆ.

ಇದನ್ನೂ ಓದಿ: ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

ರಷ್ಯಾ ಹೊಸ ಯುದ್ಧವನ್ನು ಬಯಸುವುದಿಲ್ಲ ಎನ್ನುವುದಾರೆ, ರಷ್ಯಾ ರಾಜತಾಂತ್ರಿಕ ಒಪ್ಪಂದಗಳನ್ನು ಮುಂದುವರೆಸಬೇಕು. ಉಕ್ರೇನ್‌ನ ಗಡಿಗಳಲ್ಲಿ ಮತ್ತು ಉಕ್ರೇನ್‌ ಭಾಗದ ಆಕ್ರಮಿತ ಪ್ರದೇಶಗಳಲ್ಲಿ ನಿಯೋಜಿಸಿರುವ ಮಿಲಿಟರಿ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು. ರಾಜತಾಂತ್ರಿಕತೆ ಮಾತ್ರವೇ ಜವಾಬ್ದಾರಿಯುತ ಮಾರ್ಗವಾಗಿದೆ ಎಂದು ಉಕ್ರೇನ್‌ ವಿದೇಶಾಂಗ ಸಚಿವ ಡಿಮಿಟ್ರೋ ಕುಲೇಬಾ ಅವರು ಟ್ವೀಟ್‌ ಮಾಡಿದ್ದಾರೆ.

ರಷ್ಯಾ ಆಕ್ರಮಣ ಮಾಡಿದರೆ ಉಕ್ರೇನ್‌ಗೆ ಸೈನ್ಯವನ್ನು ನಿಯೋಜಿಸುವ ಉದ್ದೇಶವನ್ನು NATO ಹೊಂದಿಲ್ಲ. ಆದರೆ, ಉಕ್ರೇನ್‌ ಸಮೀಪವಿರುವ ನ್ಯಾಟೋದ ಸದಸ್ಯ ರಾಷ್ಟ್ರಗಳ (ಎಸ್ಟೋನಿಯಾ, ಲಾಟ್ವಿಯಾ, ಲಿಥುವೇನಿಯಾ ಮತ್ತು ಪೋಲೆಂಡ್) ರಕ್ಷಣೆಯನ್ನು ಬಲಪಡಿಸಲು ಪ್ರಾರಂಭಿಸಿದೆ. 30 ರಾಷ್ಟ್ರಗಳ ಮಿಲಿಟರಿ ಮೈತ್ರಿಕೂಟವಾದ ನ್ಯಾಟೋ, ಬಲ್ಗೇರಿಯಾ ಮತ್ತು ರೊಮೇನಿಯಾ ಬಳಿಯ ಕಪ್ಪು ಸಮುದ್ರ ಪ್ರದೇಶದಲ್ಲಿ ತನ್ನ ರಕ್ಷಣೆಯನ್ನು ಹೆಚ್ಚಿಸಲು ಯೋಜಿಸುತ್ತಿದೆ.

2,000 ಅಮೆರಿಕಾ ಸೈನಿಕರನ್ನು ಪೋಲೆಂಡ್ ಮತ್ತು ಜರ್ಮನಿಗೆ ಕಳುಹಿಸಲು ಮತ್ತು ಜರ್ಮನಿಯಿಂದ ರೊಮೇನಿಯಾಗೆ 1,000 ಸೈನಿಕರನ್ನು ಸ್ಥಳಾಂತರಿಸಲು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ನಿರ್ಧರಿಸಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸಿರುವ ಸ್ಟೋಲ್ಟೆನ್‌ಬರ್ಗ್, ಇದು ಪೂರ್ವ ದೇಶಗಳ ಬಗ್ಗೆ NATOದ ಸದಸ್ಯ ರಾಷ್ಟ್ರವಾಗಿರುವ ಅಮೆರಿಕಾದ ಬದ್ಧತೆಯನ್ನು ಮಿತ್ರರಾಷ್ಟ್ರಗಳು ಮತ್ತು ಶತ್ರುಗಳಿಗೆ ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.

“ಬಿಕ್ಕಟ್ಟಿಗೆ ರಾಜಕೀಯ ಪರಿಹಾರವನ್ನು ಕಂಡುಹಿಡಿಯಲು ನಾವು ಬದ್ಧರಾಗಿದ್ದೇವೆ. ಆದರೆ, ಕೆಟ್ಟ ಪರಿಸ್ಥಿತಿ ಎದುರಾದರೆ, ಅದನ್ನು ನಿಭಾಯಿಸಲು ನಾವು ಸಿದ್ಧರಾಗಿರಬೇಕು” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...