Homeಮುಖಪುಟಬೆಂಗಳೂರು ಗಲಭೆಗೆ ಕಾರಣನಾಗಿದ್ದ ಆರೋಪಿ ನವೀನ್‌ನ ಮೊಬೈಲ್ ಪತ್ತೆ!

ಬೆಂಗಳೂರು ಗಲಭೆಗೆ ಕಾರಣನಾಗಿದ್ದ ಆರೋಪಿ ನವೀನ್‌ನ ಮೊಬೈಲ್ ಪತ್ತೆ!

ಪ್ರವಾದಿ ಮಹಮ್ಮದರ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ಎಂಬಾತ ಗಲಭೆಯ ವಿಷಯ ತಿಳಿಯುತ್ತಿದ್ದಂತೆ ಮನೆಯಿಂದ ಪರಾರಿಯಾಗಿದ್ದ. ಆಗ ಆತ ತನ್ನ ಮೊಬೈಲ್ ಕಳೆದು ಹೋಗಿದೆ ಎಂದು ಪೋಲೀಸರಿಗೆ ತಿಳಿಸಿದ್ದ.

- Advertisement -
- Advertisement -

ಪ್ರವಾದಿಗಳ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿ, ಬೆಂಗಳೂರು ಗಲಭೆಗೆ ಕಾರಣನಾಗಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ನವೀನ್‌ನ ಮೊಬೈಲ್ ಫೋನ್ ಸಿಕ್ಕಿದೆ ಎಂದು ಪೋಲೀಸರು ತಿಳಿಸಿದ್ದಾರೆ.

ಪ್ರವಾದಿ ಮಹಮ್ಮದರ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ಎಂಬಾತ ಗಲಭೆಯ ವಿಷಯ ತಿಳಿಯುತ್ತಿದ್ದಂತೆ ಮನೆಯಿಂದ ಪರಾರಿಯಾಗಿದ್ದ. ಆಗ ಆತ ತನ್ನ ಮೊಬೈಲ್ ಕಳೆದು ಹೋಗಿದೆ ಎಂದು ಪೋಲೀಸರಿಗೆ ತಿಳಿಸಿದ್ದ. ಶನಿವಾರ ಆ ಮೊಬೈಲ್ ಪೋಲೀಸರಿಗೆ ಸಿಕ್ಕಿದೆ.

ನವೀನ್ ಈ ಮೊಬೈಲ್‌ನಿಂದ ಮನೆಯಲ್ಲೇ ಕುಳಿತು ಫೇಸ್‌ಬುಕ್‌ಗೆ ಪೋಸ್ಟ್‌ಗಳನ್ನು ಹಾಕುತ್ತಿದ್ದ ಎಂದು ತಿಳಿದು ಬಂದಿದೆ. ಹಾಗಾಗಿ ಇದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಹಾಗೆಯೇ ಆತ ಮಾಡಿರುವ ಪೋಸ್ಟ್ ಗಳು ಡಿಲೀಟ್ ಆಗಿರುವ ಕಾರಣ ಅದನ್ನು ಮರು ಪಡೆಯುವ ಸಲುವಾಗಿ ಪೋಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿ ನವೀನ್ ನನ್ನು ಆಗಸ್ಟ್ 11, ಮಂಗಳವಾರ ರಾತ್ರಿಯೇ ಬಂಧಿಸಲಾಗಿತ್ತು. ಶನಿವಾರ ಆತನ ಮನೆಗೆ ಕರೆದೊಯ್ದು ಮಹಜರು ಮಾಡಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರ ಕನ್ನಡ “ಲೋಕ” ಲಡಾಯಿ; ಕೇಸರಿಪಡೆಯ ಕಲಹ ಕಾಂಗ್ರೆಸ್‌ಗೆ ವರವಾದೀತೆ?

0
ಉತ್ತರ ಕನ್ನಡದ ಅಷ್ಟೂ ಎಂಟು ವಿಧಾನಸಭಾ ಕ್ಷೇತ್ರಗಳ ಜತೆ ಬೆಳಗಾವಿ ಜಿಲ್ಲೆಯ ಖಾನಾಪುರ ಮತ್ತು ಕಿತ್ತೂರು ಸೇರಿಸಿ ರಚಿಸಲಾಗಿರುವ "ಉತ್ತರ ಕನ್ನಡ ಲೋಕಸಭಾ ಕ್ಷೇತ್ರ" ವಿಭಿನ್ನತೆ, ವೈವಿಧ್ಯತೆಗಳ ವಿಶಿಷ್ಟ ಸೀಮೆ. ಭೋರ್ಗರೆವ ಅರಬ್ಬೀ...