Homeಮುಖಪುಟನವಜೋತ್ ಸಿಧುರನ್ನು ’ಪಂಜಾಬ್‌ ರಾಜಕೀಯದ ರಾಖಿ ಸಾವಂತ್’ ಎಂದ ಆಪ್

ನವಜೋತ್ ಸಿಧುರನ್ನು ’ಪಂಜಾಬ್‌ ರಾಜಕೀಯದ ರಾಖಿ ಸಾವಂತ್’ ಎಂದ ಆಪ್

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳ ವಿಚಾರದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿರುವ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಧು ಅವರನ್ನು ’ಪಂಜಾಬ್‌ ರಾಜಕೀಯದ ರಾಖಿ ಸಾವಂತ್’ ಎಂದು ಎಎಪಿಯ ರಾಘವ್ ಚಡ್ಡಾ ಕರೆದಿದ್ದಾರೆ.

ವಿವಾದಿತ  ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ನೀಡುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಖಾಸಗಿ ಮಂಡಿಗಳಿಗೆ ಒಪ್ಪಿಗೆ ನೀಡಿದ್ದನ್ನು ಡಿನೋಟಿಫೈ ಮಾಡಿದ್ದಿರಾ ಅಥವಾ ನಿಮ್ಮ ಮುಖವಾಡ ಇನ್ನೂ ಹಾಗೆಯೇ ಮುಂದುವರೆಯುತ್ತಿದೆ ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಧು ವಿಡಿಯೊವೊಂದರಲ್ಲಿ ಪ್ರಶ್ನೆ ಮಾಡಿದ್ದರು.

ಅರವಿಂದ್ ಕೇಜ್ರೀವಾಲ್ ಕೃಷಿ ಕಾನೂನುಗಳನ್ನು ವಿರೋಧಿಸುತ್ತಾ, ಅವುಗಳನ್ನು ಬೆಂಬಲಿಸುತ್ತಿದ್ದಾರೆ. ಎರಡು ಮುಖವಾಡ ಧರಿಸಿದ್ದಾರೆ ಎಂದು ನವಜೋತ್ ಸಿಂಗ್ ಸಿಧು ಆರೋಪಿಸಿದ್ದರು. ಇದನ್ನು ರೀ ಟ್ವೀಟ್ ಮಾಡಿ ಉತ್ತರ ನೀಡಿರುವ ರಾಘವ್ ಚಡ್ಡಾ, ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಹೋಲಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: 4 ರಾಜ್ಯಗಳಿಂದ ವರದಿ ಕೇಳಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

“ಪಂಜಾಬ್ ರಾಜಕೀಯದ ರಾಖಿ ಸಾವಂತ್ ನವಜೋತ್ ಸಿಂಗ್ ಸಿಧು. ಕ್ಯಾಪ್ಟನ್ (ಮುಖ್ಯಮಂತ್ರಿ ಅಮರಿಂದರ್ ಸಿಂಗ್) ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಗದರಿಸಿದ್ದಾರೆ. ಆದ್ದರಿಂದ ಇಂದು ಬದಲಾವಣೆಗಾಗಿ, ಅವರು ಅರವಿಂದ ಕೇಜ್ರಿವಾಲ್ ಹಿಂದೆ ಬಿದ್ದಿದ್ದಾರೆ” ಎಂದಿದ್ದಾರೆ.

ಮುಂದುವರೆದು, “ನಾಳೆಯವರೆಗೆ ಕಾಯಿರಿ, ಅವರು ಕ್ಯಾಪ್ಟನ್ ವಿರುದ್ಧ ವೀರಾವೇಶದಿಂದ ಮತ್ತೆ ಹೇಳಿಕೆ ನೀಡುವುದನ್ನು ಪುನರಾರಂಭಿಸುತ್ತಾರೆ” ಎಂದು ರಾಘವ್ ಚಡ್ಡಾ ಟ್ವೀಟ್ ಮಾಡಿದ್ದಾರೆ.

ರಾಜಕೀಯ ನಾಯಕರ ಹೇಳಿಕೆಗಳಲ್ಲಿ ನಟಿ ರಾಖಿ ಸಾವಂತ್ ಹೆಸರು ಬಳಸಿರುವುದಕ್ಕೆ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಷ್ಟು ಕೀಳು ಮಟ್ಟದಲ್ಲಿ ಟ್ವೀಟ್ ಮಾಡುವ ಮೂಲಕ ಮಹಿಳೆಯರಿಗೆ ಅವಮಾನ ಮಾಡಲಾಗಿದೆ ಎಂದು ಕಿಡಿ ಕಾರಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೇಜ್ರಿವಾಲ್ ಮತ್ತು ಅವರ ಸರ್ಕಾರವು ಕೇಂದ್ರದ ಮೂರು ವಿವಾದಿತ ಕಾನೂನುಗಳಲ್ಲಿ ಒಂದನ್ನು ಪರಿಗಣಿಸಿ, ಇತರ ಎರಡು ಕಾನೂನುಗಳು “ಪರೀಕ್ಷೆಯಲ್ಲಿದೆ” ಎಂದು ಹೇಳಿ ಭಾರೀ ಟೀಕೆಗೆ ಒಳಗಾಗಿತ್ತು. ನಂತರ ರೈತರು ನಡೆಸಿದ ದೆಹಲಿ ಚಲೋ, ಅನಿರ್ಧಿಷ್ಠಾವಧಿ ಪ್ರತಿಭಟನೆಗೂ ಆಪ್ ಸರ್ಕಾರ ಬಹಿರಂಗವಾಗಿಯೇ ಬೆಂಬಲ ವ್ಯಕ್ತಪಡಿಸಿದೆ.

ಪಂಜಾಬ್ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಎರಡು ಕೂಡ ರೈತ ಪ್ರತಿಭಟನೆಯನ್ನು ಬೆಂಬಲಿಸುತ್ತಾ ಪರಸ್ಪರ ಆರೋಪ-ಪ್ರತ್ಯಾರೋಪ ನಡೆಸುತ್ತಿವೆ.


ಇದನ್ನೂ ಓದಿ: ವಿಪಕ್ಷ ನಾಯಕರು ನಮ್ಮ ಕೆಲಸವನ್ನು ಹೊಗಳುತ್ತಿದ್ದಾರೆ-ಸಿಧು ಹೇಳಿಕೆಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...