Homeಮುಖಪುಟಪಂಜಾಬ್‌‌‌ ಕಾಂಗ್ರೆಸ್‌ ಅಧ್ಯಕ್ಷರಾಗಿ ‘ಸಿಧು’ ಮುಂದುವರಿಕೆ!

ಪಂಜಾಬ್‌‌‌ ಕಾಂಗ್ರೆಸ್‌ ಅಧ್ಯಕ್ಷರಾಗಿ ‘ಸಿಧು’ ಮುಂದುವರಿಕೆ!

- Advertisement -
- Advertisement -

ಪಂಜಾಬ್‌‌‌ ರಾಜ್ಯ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನವಜೋತ್‌ ಸಿಂಗ್ ಸಿಧು ಅವರ ರಾಜೀನಾಮೆಯನ್ನು ಕಾಂಗ್ರೆಸ್‌ ಸ್ವೀಕರಿಸಿಲ್ಲ. ಅವರು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಮುಂದಿನ ದಿನಗಳಲ್ಲಿ ಪಂಜಾಬ್ ಸರ್ಕಾರದ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಸಮಾಲೋಚನಾ ಸಮಿತಿಯೊಂದನ್ನು ಪಕ್ಷವು ಸ್ಥಾಪಿಸುವ ಸಾಧ್ಯತೆಯಿದೆ ಎಂದು ಐಎಎನ್ಎಸ್ ವರದಿ ಮಾಡಿದೆ. ಮೂವರು ಸದಸ್ಯರಿರುವ ಈ ಸಮಿತಿಯಲ್ಲಿ ಪಂಜಾಬ್ ಕಾಂಗ್ರೆಸ್ ವೀಕ್ಷಕ ಹರೀಶ್ ಚೌಧರಿ, ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿಲ್ ಸಿಂಗ್ ಚನ್ನಿ ಮತ್ತು ನವಜೋತ್‌ ಸಿಧು ಇರಲಿದ್ದಾರೆ ಎನ್ನಲಾಗಿದೆ. ಈ ಕುರಿತು ಪಕ್ಷವು ಶೀಘ್ರದಲ್ಲೇ ನಿರ್ಧರಿಸುತ್ತದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರಿದ ಮಾಡಿದೆ.

ಇದನ್ನೂ ಓದಿ: ಕಾಂಗ್ರೆಸ್ ಬಿಡುತ್ತೇನೆ..ಆದರೆ ಬಿಜೆಪಿ ಸೇರುವುದಿಲ್ಲ-ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

ವರದಿಗಳ ಪ್ರಕಾರ, ಗುರುವಾರದಂದು ಸಿಧು ಅವರು ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿಯನ್ನು ಭೇಟಿ ಮಾಡಿ ಸಂಧಾನ ಮಾತುಕತೆ ನಡೆಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಭವನದಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಈ ಸಭೆ ನಡೆದಿದ್ದು, ನಂತರ ಈ ನಿರ್ಧಾರಕ್ಕೆ ಬರಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಸೋಮವಾರ ರಾಜೀನಾಮೆ ನೀಡಿದ್ದರು. ಅವರು ಮುಖ್ಯಮಂತ್ರಿಯ ಸಚಿವ ಸಂಪುಟದ ಆಯ್ಕೆ, ರಾಜ್ಯ ಪೊಲೀಸ್ ಮುಖ್ಯಸ್ಥರು ಮತ್ತು ಅಡ್ವಕೇಟ್ ಜನರಲ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದು ಭಾವನಾತ್ಮಕ ಆಕ್ರೋಶ ಎಂದು ಸಿಧು ಅವರ ಸಲಹೆಗಾರ ಗುರುವಾರ ಹೇಳಿದ್ದಾರೆ. “ಕಾಂಗ್ರೆಸ್ ನಾಯಕತ್ವ ನವಜೋತ್ ಸಿಧುವನ್ನು ಅರ್ಥಮಾಡಿಕೊಂಡಿದೆ ಮತ್ತು ಸಿದ್ದು ಕೂಡಾ ಕಾಂಗ್ರೆಸ್ ನಾಯಕತ್ವವನ್ನು ಮೀರಿಲ್ಲ. ಕಾಂಗ್ರೆಸ್ ಮತ್ತು ಅದರ ನಾಯಕತ್ವದ ಬಗ್ಗೆ ಕಾಳಜಿ ಇಲ್ಲದ ಅಮರೀಂದರ್ ಸಿಂಗ್ ರೀತಿ ಅವರಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: RSS ಬೆಂಬಲಿತ ಶಾಲೆಗಳು ಕೋಮು ದ್ವೇಷವನ್ನು ಬೆಳೆಸುತ್ತವೆ: ದಿಗ್ವಿಜಯ್ ಸಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...