Homeಮುಖಪುಟನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

ನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

- Advertisement -
- Advertisement -

ನವರಾತ್ರಿ ಆಚರಣೆ ಹಿನ್ನಲೆ ಮಾಂಸಾಹಾರಿ ಆಹಾರವನ್ನು ನೀಡುವುದನ್ನು ನಿಲ್ಲಿಸುವ ಸುಪ್ರೀಂ ಕೋರ್ಟ್ ಕ್ಯಾಂಟೀನ್‌ನ ನಿರ್ಧಾರದ ಬಗ್ಗೆ ವಕೀಲರ ಗುಂಪು ಗುರುವಾರ ಅತೃಪ್ತಿ ವ್ಯಕ್ತಪಡಿಸಿದ್ದು, ಈ ಸಂಪ್ರದಾಯವನ್ನು ಮೊದಲ ಬಾರಿಗೆ ಹೇರಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಅದಾಗ್ಯೂ, ವಕೀಲರ ತೀವ್ರ ಪ್ರತಿಭಟನೆಯ ಹಿನ್ನಲೆ ಶನಿವಾರದಿಂದ ಕ್ಯಾಂಟೀನ್‌ನಲ್ಲಿ ಮತ್ತೆ ಮಾಂಸಾಹಾರವನ್ನು ನೀಡಲಾಗುತ್ತಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವರಾತ್ರಿ ಆಚರಣೆ ಉಲ್ಲೇಖಿಸಿ ಮಾಂಸಾಹಾರ ನೀಡದಿರುವ  ಬಗ್ಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(SCBA) ಅಧ್ಯಕ್ಷರಾದ ಕಪಿಲ್ ಸಿಬಲ್ ಮತ್ತು ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್-ಆನ್-ರೆಕಾರ್ಡ್ ಅಸೋಸಿಯೇಷನ್ ​​(SCAORA) ಅಧ್ಯಕ್ಷರಾದ ವಿಪಿನ್ ನಾಯರ್ ಅವರಿಗೆ ಬರೆದ ಪತ್ರದಲ್ಲಿ ವಕೀಲರು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದು, ಇಂತಹ ನಿರ್ಧಾರವು ಅಸಮಂಜಸವಾಗಿದ್ದು, ವಕೀಲ ವೃತ್ತಿಯ “ಬಹುತ್ವದ” ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ನ್ಯಾಯಾಲಯದ ಕ್ಯಾಂಟೀನ್ ಸಾಂಪ್ರದಾಯಿಕವಾಗಿ ವೈವಿಧ್ಯಮಯ ಆಹಾರದ ಆದ್ಯತೆಗಳನ್ನು ಪೂರೈಸುತ್ತಿದೆ. ಕೆಲವರ ಧಾರ್ಮಿಕ ಭಾವನೆಗಳನ್ನು ಪೂರೈಸಲು ಮಾಂಸಾಹಾರಿ ಆಹಾರವನ್ನು ಸ್ಥಗಿತಗೊಳಿಸುವುದು ಸೂಕ್ತವಲ್ಲ ಎಂದು ಅದು ಪತ್ರವೂ ಒತ್ತಿಹೇಳಿತ್ತು. ಇಂತಹ ಕೋರಿಕೆಗಳಿಗೆ ಮನ್ನಣೆ ನೀಡುವುದು ಭವಿಷ್ಯದಲ್ಲಿ ಮತ್ತಷ್ಟು ಹೇರಿಕೆಗೆ ಕಾರಣವಾಗಬಹುದು ಎಂದು ಅದು ಎಚ್ಚರಿಸಿದೆ.

ಇದನ್ನೂಓದಿ: ’24 ಗಂಟೆಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ..’; ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಿರಿಯ ವೈದ್ಯರಿಂದ ಗಡುವು

ಅದಾಗ್ಯೂ, ಕ್ಯಾಂಟೀನ್ ಗುತ್ತಿಗೆದಾರರು ಮಾಂಸಾಹಾರಿ ಆಹಾರವನ್ನು ನೀಡುವುದನ್ನು ನಿಲ್ಲಿಸಲು ಯಾವುದೇ ಸರ್ಕಾರಿ ನಿರ್ದೇಶನವನ್ನು ಪಡೆದಿಲ್ಲ ಎಂದು SCBA ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ. ಕೆಲವು ವಕೀಲರ ಮನವಿ ಮೇರೆಗೆ ಗುತ್ತಿಗೆದಾರರು ಸ್ವತಂತ್ರವಾಗಿ ಈ ನಿರ್ಧಾರ ಕೈಗೊಂಡಿದ್ದರು. ಈ ನಡುವೆ SCBA ಮಧ್ಯಪ್ರವೇಶಿಸಿದ್ದು, ನಾಳೆಯಿಂದ ಮಾಂಸಾಹಾರಿ ಆಹಾರವನ್ನು ನೀಡುವುದನ್ನು ಪುನರಾರಂಭಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದೆ ಎಂದು ವರದಿ ಹೇಳಿದೆ.

ದಸರಾ ಪ್ರಾರಂಭವಾದ ಶುಕ್ರವಾರ ಒಂದು ದಿನ ಮಾತ್ರ ಸುಪ್ರೀಂ ಕೋರ್ಟ್‌ ಕೆಲಸ ನಿರ್ವಹಿಸುತ್ತದೆ. ಇದರ ನಂತರ ನವರಾತ್ರಿ ಅವಧಿ ಮುಗಿದ ನಂತರ ಅಕ್ಟೋಬರ್ 14 ರಂದು ನ್ಯಾಯಾಲಯ ಮತ್ತೆ ತೆರೆಯುತ್ತದೆ. ಅಷ್ಟೆ ಅಲ್ಲದೆ, ವಿವಾದಿತ ಕ್ಯಾಂಟೀನ್ ಸುಪ್ರೀಂಕೋರ್ಟ್‌ನ ವಕೀಲರಿಗೆ ಆಹಾರ ಪೂರೈಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದು, ಅದನ್ನು ಗುತ್ತಿಗೆದಾರರಿಂದ ಖಾಸಗಿಯಾಗಿ ನಿರ್ವಹಿಸಲಾಗುತ್ತಿದೆ.

ವಿವಾದದ ಬಗ್ಗೆ ಮಾತನಾಡಿದ SCBA ಅಧಿಕಾರಿಯೊಬ್ಬರು, ಕ್ಯಾಂಟೀನ್‌ನ ಮೆನು ನಿರ್ಧಾರಗಳನ್ನು ಸಾಮಾನ್ಯವಾಗಿ ಗುತ್ತಿಗೆದಾರರು ಮಾಡುತ್ತಾರೆ. ಅದರಲ್ಲಿ SCBA ಅಥವಾ SCAORA ಯಿಂದ ಯಾವುದೇ ನೇರ ಒಳಗೊಳ್ಳುವಿಕೆ ಇರುವುದಿಲ್ಲ ಎಂದು ಉಲ್ಲೇಖಿಸಿದ್ದಾರೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...