Homeಕರ್ನಾಟಕನಕ್ಸಲ್ ಮುಕ್ತ ಕರ್ನಾಟಕ: ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ಹೋರಾಟಗಾರ ರವೀಂದ್ರ

ನಕ್ಸಲ್ ಮುಕ್ತ ಕರ್ನಾಟಕ: ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ಹೋರಾಟಗಾರ ರವೀಂದ್ರ

- Advertisement -
- Advertisement -

ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆರು ಜನ ಸಶಸ್ತ್ರ ಹೋರಾಟಗಾರರು ಮುಖ್ಯವಾಹಿನಿಗೆ ಮರಳುವ ಮೂಲಕ ಕರ್ನಾಟಕವು ನಕ್ಸಲ್ ಮುಕ್ತವಾಗುವತ್ತ ಹೆಜ್ಜೆ ಇಟ್ಟಿತ್ತು. ಇಂದು, ಆ ತಂಡದ ಕೊನೆಯ ನಾಯಕ ಕೋಟೆಹೊಂಡ ರವೀಂದ್ರ ಮುಖ್ಯವಾಹಿನಿಗೆ ಮರಳುವ ಮೂಲಕ ರಾಜ್ಯ ಅಧಿಕೃತವಾಗಿ ನಕ್ಸಲ್ ಮುಕ್ತವಾಗಿದೆ.

ರಾಜ್ಯದಲ್ಲಿ ಉಳಿದಿದ್ದ ಏಕೈಕ ನಕ್ಸಲ್ ನಾಯಕ ರವೀಂದ್ರ ಅವರು ಇಂದು ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಶರಣಾಗಿದ್ದಾರೆ. ಕಳೆದ 18 ವರ್ಷಗಳಿಂದ ಭೂಗತರಾಗಿದ್ದ ಅವರು ಇಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮುಂದೆ ಶರಣಾಗಿದ್ದಾರೆ. ರವೀಂದ್ರಗೆ ಚಿಕ್ಕಮಗಳೂರು ಜಿಲ್ಲಾಡಳಿತ ₹7 ಲಕ್ಷ ಪ್ಯಾಕೇಜ್ ಘೋಷಣೆ ಮಾಡಿದೆ.

ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಕೋಟೆಹೊಂಡ ನಿವಾಸಿಯಾಗಿರುವ ರವೀಂದ್ರ, ಕಳೆದ‌ 18 ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ನಕ್ಸಲ್‌ರ ನಾಯಕ ವಿಕ್ರಮ್ ಗೌಡ ಎನ್‌ಕೌಂಟರ್ ಬಳಿಕ ರವೀಂದ್ರ ನಾಪತ್ತೆಯಾಗಿದ್ದರು. ಅವರ ಶರಣಾಗತಿಗೆ ನಕ್ಸಲ್ ಶರಣಾಗತಿ ಕಮಿಟಿ ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಸದಸ್ಯರು ಹರಸಾಹಸ ಪಟ್ಟಿದ್ದರು. ಕೊನೆಗೂ ರಾಜ್ಯ ಸರ್ಕಾರದ ನಕ್ಸಲ್ ಶರಣಾಗತಿ ಪ್ಯಾಕೇಜ್ ಗೆ ಒಪ್ಪಿರುವ ರವಿಂದ್ರ ಅವರ ಮೇಲೆ ಒಟ್ಟು 26 ಪ್ರಕರಣಗಳು ದಾಖಲಾಗಿವೆ. ಇವರ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ 14 ಪ್ರಕರಣಗಳು ಸೇರಿ ಕರ್ನಾಟಕದಲ್ಲಿ 17, ಕೇರಳದಲ್ಲಿ 9 ಪ್ರಕರಣಗಳು ದಾಖಲಾಗಿವೆ.

“17 ವರ್ಷಗಳ ಹಿಂದೆ ಮೂಲಭೂತ ಹಕ್ಕುಗಳಿಗಾಗಿ ನಕ್ಸಲ್ ಚಳವಳಿಗೆ ದುಮುಕಿದ್ದೆ. ವಾಸದ ಮನೆ ಸೇರಿದಂತೆ ಮೂಲಭೂತ ಸೌಕರ್ಯ ನೀಡಲು ಸರ್ಕಾರ ವಿಫಲವಾಗಿತ್ತು. ಈಗ ಸ್ವಲ್ಪ ಬದಲಾವಣೆ ಕಂಡು ಬರುತ್ತಿದೆ. ಇದರಿಂದ ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧಾರ ಮಾಡಿದ್ದೇನೆ. ಸರ್ಕಾರಕ್ಕೆ ನನ್ನ ಬೇಡಿಕೆಯ ಕುರಿತು ಪತ್ರ ನೀಡಿದ್ದೇನೆ” ಎಂದು ರವೀಂದ್ರ ಹೇಳಿದ್ದಾರೆ.

“ಆದಿವಾಸಿಗಳಿಗೆ ಹಾಗೂ ಕಾಡಂಚಿನ ಜನರಿಗೆ ಜಮೀನಿನ ಹಕ್ಕು ಪತ್ರ ನೀಡಬೇಕು ಹಾಗೂ ಅವರು ವಾಸಿಸುವ ಪ್ರದೇಶಗಳಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿ ಮಾಡಬೇಕು” ಎಂಬ ಎರಡು ಪ್ರಮುಖ ಬೇಡಿಕೆ ಇಟ್ಟಿದ್ದಾರೆ.

ಈ ಸಂದರ್ಭದಲ್ಲಿ ಶಾಂತಿಗಾಗಿ ನಾಗರೀಕರ ವೇದಿಕೆಯ ನೂರ್ ಶ್ರೀಧರ್, ಕೆಎಲ್ ಅಶೋಕ್, ನಗರಗೆರೆ ರಮೇಶ್, ವಿಎಸ್ ಶ್ರೀಧರ್, ನಕ್ಸಲ್ ಪುನರ್ವಸತಿ ಸಮಿತಿಯಿಂದ ಕೆಪಿ ಶ್ರೀಪಾಲ್ ಹಾಗೂ ಗೌಸ್ ಮೊಹಿಯುದ್ದೀನ್, ಹಾಗಲಗಂಚಿ ವೆಂಕಟೇಶ್ ಮತ್ತು ಇಸಾಬೆಲ್ಲಾ ಇದ್ದರು.

ಶರಣಾಗತಿ ಬಳಿಕ ರವೀಂದ್ರ ಅವರನ್ನು ಡಿವೈಎಸ್‌ಪಿ ವಶಕ್ಕೆ ಒಪ್ಪಿಸಲಾಗಿದೆ; ಶೃಂಗೇರಿ ಪೊಲೀಸ್ ಠಾಣೆಗೆ ಅವರನ್ನು ಒಪ್ಪಿಸುವ ಸಾಧ್ಯತೆ ಇದೆ.

ನಕ್ಸಲ್ ರವೀಂದ್ರ ಶರಣಾಗಿರುವುದು ಉತ್ತಮ ಬೆಳವಣಿಗೆ ಎಂದು ಕಾನೂನು‌ ಸಂಸದೀಯ ವ್ಯವಹಾರ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ. ಮನಸ್ಸು ಪರಿವರ್ತನೆ, ಬದಲಾವಣೆ ಮಾಡಿಕೊಂಡು ಮುಖ್ಯ ವೇದಿಕೆಗೆ ಬರುವುದು ಅಗತ್ಯ. ಸಂವಿಧಾನದ ಅಡಿ ಕೆಲಸ ಮಾಡಬೇಕಿರುವುದು ಅತ್ಯಂತ ಮಹತ್ವದ್ದು. ಆ ಹಿನ್ನೆಯಲ್ಲಿ ಅವರು ಮುಖ್ಯ ವಾಹಿನಿಗೆ ಬಂದಿರುವುದನ್ನು ನಾನು ಸ್ವಾಗತ ಮಾಡುತ್ತೇನೆ ಎಂದಿದ್ದಾರೆ. ರಾಜ್ಯದಲ್ಲಿ ನಕ್ಸಲ್ ಶರಣಾಗತಿ ಆಪರೇಷನ್ ಮುಕ್ತಾಯಗೊಂಡಿದೆ. ನಕ್ಸಲ್ ಶರಣಾಗತಿ ಸಂಬಂಧ ಕಾರ್ಯ ನಿರ್ವಹಿಸಿರುವ 22 ಪೊಲೀಸ್ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ; ಚಿಕ್ಕಮಗಳೂರು| ನಕ್ಸಲ್ ನಾಯಕ ಕೋಟೆಹೊಂಡ ರವೀಂದ್ರ ಇಂದು ಮುಖ್ಯವಾಹಿನಿಗೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...