Homeಕರ್ನಾಟಕನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

ನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

- Advertisement -
- Advertisement -

ಬೆಂಗಳೂರು: ಕರ್ನಾಟಕದ ನಕ್ಸಲರನ್ನು ಮುಖ್ಯವಾಹಿನಿಗೆ ತರುವಲ್ಲಿ ಮತ್ತು ರಾಜ್ಯವನ್ನು ‘ನಕ್ಸಲ್‌ ಮುಕ್ತ’ವನ್ನಾಗಿಸಲು ಮಹತ್ತರ ಪಾತ್ರ ವಹಿಸಿದ ಕರ್ನಾಟಕದ ನಕ್ಸಲ್‌ ನಿಗ್ರಹ ಪಡೆ ಮತ್ತು ಗುಪ್ತಚರ ಘಟಕದ 22 ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕವನ್ನು ಘೋಷಿಸಲಾಗಿದ್ದು, ಇದನ್ನು ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೇದಿಕೆಯು, ಇವರೆಲ್ಲರನ್ನೂ  ಮತ್ತು  ಪ್ರಧಾನವಾಗಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯ ಗುಪ್ತವಾರ್ತೆಯ ನಿರ್ದೇಶಕ ಹೇಮಂತ್‌ ಎಂ ನಿಂಬಾಳ್ಕರ್‌ ಹಾಗೂ ಉಪನಿರ್ದೇಶಕ ಹರಿರಾಮ್‌ ಶಂಕರ್‌ ಅವರನ್ನು, ʼಶಾಂತಿಗಾಗಿ ನಾಗರಿಕರ ವೇದಿಕೆʼ ಅಭಿನಂದಿಸುತ್ತದೆ. ಇವರಿಬ್ಬರೂ ಈ ಕಾರ್ಯಾಚರಣೆಯ ಪ್ರಾರಂಭದಿಂದಲೂ ಹೆಚ್ಚುವರಿ ಅಸಕ್ತಿ ವಹಿಸಿ, ನಮ್ಮ ವೇದಿಕೆ ಜತೆ ಸಹಕರಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ನಕ್ಸಲರನ್ನು ಘನತೆಯಿಂದ ನಡೆಸಿಕೊಳ್ಳುವ ಕುರಿತು, ಅವರನ್ನು ಕಾಡಿನಿಂದ ಮಾತ್ರವಲ್ಲ, ಜೈಲಿನಿಂದ ಹೊರತರುವಲ್ಲಿ ವಹಿಸಬೇಕಾದ ಮುತುವರ್ಜಿಗಳ ಕುರಿತು ಹಾಗೂ ಮುಖ್ಯವಾಹಿನಿಗೆ ಬಂದ ಮೇಲೆ ನೀಡಬೇಕಾದ ಅಗತ್ಯ ನೆರವಿನ ಕುರಿತು ನಾವು ಮುಂದಿಟ್ಟ ಎಲ್ಲಾ ಬೇಡಿಕೆಗಳಿಗಳನ್ನೂ ಪೂರೈಸುವ ಭರವಸೆ ನೀಡಿದ್ದರಿಂದಲೇ ಈ ಕೆಲಸವು ಸಾಂಗವಾಗಿ ನೆರವೇರಲು ಸಹಾಯವಾಯಿತು. ಇದರಲ್ಲಿ  ನಕ್ಸಲ್‌ ಪುನರ್‌ವಸತಿ ಸಮಿತಿಯ ಸದಸ್ಯರು ನೀಡಿದ ಸಹಕಾರವನ್ನೂ ಕೂಡ ನಮ್ಮ ವೇದಿಕೆ ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದಿದೆ.

ಶಾಂತಿಗಾಗಿ ನಾಗರಿಕರ ವೇದಿಕ ಬಹಳ ಕಾಲದಿಂದಲೂ “ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬೇಕೇ ಹೊರತು ಬಂದೂಕಿನಿಂದ ಅಲ್ಲ” ಎಂದು ನಕ್ಸಲರಿಗೂ ಮತ್ತು ಪ್ರಭುತ್ವಕ್ಕೂ ಮನವಿಮಾಡಿಕೊಂಡೇ ಬಂದಿದೆ. ಇಬ್ಬರೂ ಈ ಮನವಿಯ ಔಚಿತ್ಯವನ್ನು ಮನಗಂಡು ಮುಂದೆ ಬಂದ್ದರಿಂದಲೇ ಈ ಕಾರ್ಯವು ಸಫಲವಾಯಿತು. ಅಲ್ಲದೆ ಸರ್ಕಾರವು ನಾಗರಿಕರ ಜತೆ ನಡೆಸುವ ಅನುಸಂಧಾನಗಳು ಪ್ರಜಾತಂತ್ರದ ಹಿರಿಮೆಯನ್ನು ಎತ್ತಿಹಿಡಿಯುತ್ತವೆ ಎಂಬುದನ್ನು ಈ ಘಟನೆ ಎತ್ತಿತೋರಿಸುತ್ತದೆ. ಇದನ್ನು ಸ್ವಾಗತಿಸುತ್ತಾ, ಇದಕ್ಕೆ ಕಾರಣರಾದ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಪೊಲೀಸು ಅಧಿಕಾರಿಗಳನ್ನು ನಾವು ಮತ್ತೊಮ್ಮೆ ಅಭಿನಂದಿಸುತ್ತೇವೆ ಎಂದು ವೇದಿಕೆಯ ನಗರಗೆರೆ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವುದು ಎಂದರೆ ಅವರನ್ನು ಕಾಡಿನಿಂದ ಜೈಲಿಗೆ ಕರೆತರುವುಷ್ಟೇ ಅಲ್ಲ, ಸಮಾಜದಲ್ಲಿ ಅವರು ಗೌರವಾನ್ವಿತವಾಗಿ ಬದುಕಲು ಬೇಕಾದ ಎಲ್ಲ ಸೌಕರ್ಯವನ್ನೂ ಒದಗಿಸಿ ನಾಡಿಗೆ ಕರೆತರುವುದು ಕೂಡ. ಇದು ಪ್ರಜಾತಂತ್ರ ಸರ್ಕಾರದ ಕರ್ತವ್ಯ ಹಾಗೂ ಅದು ಜಾರಿಯಾಗುವ ಹಾಗೆ ನೋಡಿಕೊಳ್ಳುವುದು ನಾಗರಿಕ ಸಮಾಜದ ಜವಾಬ್ದಾರಿ ಎಂದು ನಾವು ಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ ಕೆಲವು ಸ್ವಾಗತಾರ್ಹ ಹೆಜ್ಜೆಗಳನ್ನು ಇಟ್ಟಿದೆ. ಉದಾಹರಣೆಗೆ ಈ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಆಲಿಸಲೆಂದೇ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದೆ; ಆರ್ಥಿಕ ನೆರವನ್ನು ಕೂಡಲೇ ಬಿಡುಗಡೆ ಮಾಡಿದೆ. ಈ ಹಿಂದೆ ಬಂದಿದ್ದವರ ಸರಿಯಾದ ಪುನರ್ವಸತಿಗೆ ಬೇಕಾದ ಕ್ರಮವಹಿಸಲು ಮುಂದಾಗಿದೆ. ಇದು ಸಹ ಅಭಿನಂದನಾರ್ಹ ವಿಚಾರ.  ಆದರೂ ಇನ್ನೂ ಹಲವಾರು ಕೆಲಸಗಳು ಆಗಬೇಕಿದೆ. ವಿಶೇಷ ನ್ಯಾಯಾಲಯ ಕೂಡಲೇ ಕಾರ್ಯರೂಪಕ್ಕೆ ಬಂದು, ಕನಿಷ್ಟ ಎಲ್ಲರೂ ಬೇಲ್‌ ಮೇಲೆ ಹೊರಬರುವಂತಾಗಬೇಕು, ಮತ್ತು ಅಗತ್ಯ ಕಾನೂನು ಮತ್ತು ವೈದ್ಯಕೀಯ ನೆರವು ಒದಗಿಸಬೇಕು. ಸಾರಾಂಶದಲ್ಲಿ ಹೇಳಬೇಕೆಂದರೆ ಆಗಿರುವ ಕೆಲಸ ಅಭಿನಂದನಾರ್ಹವಾದದ್ದೇ  ಆದರೂ ಆಗಬೇಕಿರುವ ಕೆಲಸಗಳು ಕೂಡ ಸಾಕಷ್ಟು ಇವೆ. ಇವುಗಳನ್ನು ಕೂಡ ಸರ್ಕಾರ ಮತ್ತು ಪೊಲೀಸು ಇಲಾಖೆ ತುರ್ತಿನ ಮೇಲೆ ಕೈಗೆತ್ತಿ ಕೊಳ್ಳುತ್ತದೆ ಎಂಬ ಭರವಸೆ ನಮಗಿದೆ ಎಂದು ವೇದಿಕೆಯ ಮತ್ತೋರ್ವ ಸದಸ್ಯೆ ತಾರಾ ರಾವ್ ಹೇಳಿದ್ದಾರೆ.

ಈ ಕಾರ್ಯಾಚರಣೆ ಮೂಲಕ ಕರ್ನಾಟಕ ರಾಜ್ಯವು ಇಡೀ ದೇಶಕ್ಕೆ ಒಂದು ಶಾಂತಿಯುತ ಹಾಗೂ ಪ್ರಜಾತಾಂತ್ರಿಕ ಮಾದರಿಯನ್ನು ಕಟ್ಟಿಕೊಟ್ಟಿದೆ. ಜನರ ಸಮಸ್ಯೆಗಳನ್ನು ಬಗೆಹರಿಸದೆ, ಅವರ ಬದಕಿನ ಹಕ್ಕನ್ನು ಕಸಿಯಲು ಹೋದರೆ [ನ್ಯಾಷನಲ್‌ ಪಾರ್ಕ್‌ ವಿಚಾರದಲ್ಲಿ ಆದಂತೆ] ಜನರು ಸಶಸ್ತ್ರ ಸಂಘರ್ಷದಂತಹ ತೀಕ್ಷ್ಣ ರೂಪಗಳ ಮೊರೆಹೋಗುತ್ತಾರೆ. ಈ ರೀತಿಯ ವಿದ್ಯಮಾನಗಳು ಮತ್ತೆ ಮರುಕಳಿಸಬಾರದೆಂದರೆ ಜನಪರ ಎಂದು ಕರೆದುಕೊಳ್ಳುವ ಸರ್ಕಾರಗಳು ಜನರನ್ನು ಮೂಲೆಗೊತ್ತದೆ, ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂಬ ಪಾಠವನ್ನೂ ಈ ಪ್ರಕ್ರಿಯೆ ನೀಡಿದೆ. ಸರ್ಕಾರ ಮತ್ತು ಪೋಲೀಸ್‌ ಯಂತ್ರಾಂಗ ಈ ಪಾಠದತ್ತವೂ ಗಮನಹರಿಸಬೇಕು ಮತ್ತು ನಕ್ಸಲ್‌ ಪ್ರಭಾವಿತ ಪ್ರದೇಶದ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕು ಎಂದು ಒತ್ತಾಯಿಸುತ್ತೇವೆ ಎಂದು ಹೇಳಿಕೆಯಲ್ಲಿ ವೇದಿಕೆಯ ವಿ.ಎಸ್. ಶ್ರೀಧರ್ ಮಾಹಿತಿ ನೀಡಿದ್ದಾರೆ.

‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...