Homeಮುಖಪುಟಹರ್ಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಆಯ್ಕೆ

ಹರ್ಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಆಯ್ಕೆ

- Advertisement -
- Advertisement -

ಹರ್ಯಾಣದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಮನೋಹರ್‌ ಲಾಲ್‌ ಖಟ್ಟರ್‌ ರಾಜೀನಾಮೆ ಬೆನ್ನಲ್ಲಿ ಹರ್ಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಆಯ್ಕೆಯಾಗಿದ್ದಾರೆ.

ಒಬಿಸಿ ಅಥವಾ ಇತರೆ ಹಿಂದುಳಿದ ವರ್ಗಗಳ ಸಮುದಾಯದ ಪ್ರಭಾವಿ ವ್ಯಕ್ತಿಯಾಗಿರುವ ನಯಾಬ್ ಸೈನಿ  ಬಿಜೆಪಿಯ ಲೋಕಸಭಾ ಸಂಸದರಾಗಿದ್ದಾರೆ ಮತ್ತು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪಕ್ಷದ ರಾಜ್ಯ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು. ಸಂಜೆ 5 ಗಂಟೆಗೆ ಸೈನಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ.

ಹರ್ಯಾಣದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಅವರ ಸಂಪುಟ ಸಹೊದ್ಯೋಗಿಗಳು ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದರು. ಸಿಎಂ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಎಲ್ಲರೂ ರಾಜೀನಾಮೆ ನೀಡಿದ್ದು, ರಾಜ್ಯಪಾಲರು ಅಂಗೀಕರಿಸಿದ್ದಾರೆ ಎಂದು ಬಿಜೆಪಿ ನಾಯಕ ಕನ್ವರ್ ಪಾಲ್ ಗುಜ್ಜರ್ ಮಾಧ್ಯಮಗಳಿಗೆ ತಿಳಿಸಿದ್ದರು.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮನೋಹರ್ ಲಾಲ್‌ ಖಟ್ಟರ್, ಹರಿಯಾಣದ ಕರ್ನಾಲ್ ಲೋಕಸಭೆ ಕ್ಷೇತ್ರದಿಂದ ಈ ಬಾರಿ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಒಟ್ಟು 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿ 40 ಸ್ಥಾನಗಳನ್ನು ಹೊಂದಿದೆ. ಜೆಜೆಪಿಯ ದುಶ್ಯಂತ್ ಚೌಟಾಲ ಅವರೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಬಿಜೆಪಿ ಸರ್ಕಾರ ರಚಿಸಿತ್ತು.

ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯ ನಂತರ ನಯಾಬ್ ಸಿಂಗ್ ಸೈನಿ ಸಿಎಂ ಆಗಿ ಆಯ್ಕೆಯಾಗಿದ್ದಾರೆ, ಕೃಷಿ ಸಚಿವ ಅರ್ಜುನ್ ಮುಂಡಾ ಮತ್ತು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಈ ಬಗ್ಗೆ ಮಾತನಾಡಿದ್ದು, ಏಪ್ರಿಲ್/ಮೇನಲ್ಲಿ ಲೋಕಸಭೆ ಚುನಾವಣೆ ಮತ್ತು ನಂತರ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಶಾಸಕರು ಹೊಸ ನೇತೃತ್ವವನ್ನು ಬಯಸಿದ್ದಾರೆ ಎಂದು ಹೇಳಿದ್ದಾರೆ. ಶಾಸಕರಿಂದ ನಕಾರಾತ್ಮಕ ಪ್ರತಿಕ್ರಿಯೆ ಬಂದ ಹಿನ್ನೆಲೆ ಖಟ್ಟರ್ ರಾಜೀನಾಮೆ ನೀಡುವಂತೆ ಹೈಕಮಾಂಡ್‌ ಆಗ್ರಹಿಸಿದೆ ಎಂದು ಕೂಡ ಹೇಳಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ವಿಷಯದಲ್ಲಿ ಆಡಳಿತಾರೂಢ ಬಿಜೆಪಿ-ಜೆಜೆಪಿ ಮೈತ್ರಿ ಮುರಿದುಬಿದ್ದಿದೆ ಎಂದು ಭಾರೀ ಊಹಾಪೋಹಗಳ ಮಧ್ಯೆ ಖಟ್ಟರ್ ರಾಜೀನಾಮೆ ನೀಡಿದ್ದರು. ಮಾಜಿ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲ ಅವರ JJP ರಾಜ್ಯದ 10 ಸ್ಥಾನಗಳಲ್ಲಿ ಎರಡು ಸ್ಥಾನಗಳನ್ನು ಬಯಸಿತ್ತು, ಆದರೆ ಬಿಜೆಪಿ ಒಂದು ಸ್ಥಾನವನ್ನು ಬಿಟ್ಟುಕೊಟ್ಟಿತ್ತು.

ಇದನ್ನು ಓದಿ: ಸಿಎಎ ಜಾರಿಗೆ ತಡೆ ಕೋರಿ ಸುಪ್ರೀಂಕೋರ್ಟ್‌ ಮೊರೆ ಹೋದ ಮುಸ್ಲಿಂ ಲೀಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

0
ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರು ಮತಗಟ್ಟೆಯಲ್ಲಿ ವಿವಿಪ್ಯಾಟ್‌ ಯಂತ್ರವನ್ನು ನೆಲಕ್ಕೆ ಎಸೆದು ಒಡೆದು ಹಾಕಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ. ಇದೇ ರೀತಿ 7 ಮತಗಟ್ಟೆಗಳಲ್ಲಿ ಶಾಸಕ ಇವಿಎಂ ಯಂತ್ರವನ್ನು...