Homeಮುಖಪುಟ‘ನಾಝಿ ಆಡಳಿತ ಬೇಟೆಯಾಡುತ್ತಿದೆ’ - ಕೇಂದ್ರದ ವಿರುದ್ದ ತೇಜಸ್ವಿ ಯಾದವ್‌ ತೀವ್ರ ವಾಗ್ದಾಳಿ

‘ನಾಝಿ ಆಡಳಿತ ಬೇಟೆಯಾಡುತ್ತಿದೆ’ – ಕೇಂದ್ರದ ವಿರುದ್ದ ತೇಜಸ್ವಿ ಯಾದವ್‌ ತೀವ್ರ ವಾಗ್ದಾಳಿ

- Advertisement -
- Advertisement -

ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಮತ್ತು ನಟಿ ತಾಪ್ಸಿ ಪನ್ನು ಅವರ ನಿವಾಸಗಳ ಮೇಲೆ ಕೇಂದ್ರ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಕೇಂದ್ರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರವನ್ನು ನಾಜಿ ಸರ್ಕಾರ ಎಂದು ಬಣ್ಣಿಸಿದ ತೇಜಸ್ವಿ, ಅನುರಾಗ್ ಕಶ್ಯಪ್ ಮತ್ತು ತಾಪ್ಸಿ ಪನ್ನು ಅವರ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯನ್ನು ವಿರೋಧಿಸುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.

“ಮೊದಲು, ಅವರು ರಾಜಕೀಯ ವಿರೋಧಿಗಳನ್ನು ಹಣಿಯಲು ಆದಾಯ ತೆರಿಗೆ ಇಲಾಖೆ, ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳನ್ನು ಬಳಸಿ ದಾಳಿ ನಡೆಸಿದರು. ನಿಜ ಹೇಳಬೇಕೆಂದರೆ ನಾಜಿ ಆಡಳಿತವು ಈಗ ಸಾಮಾಜಿಕ ಹೋರಾಟಗಾರರು, ಪತ್ರಕರ್ತರು ಮತ್ತು ಕಲಾವಿದರನ್ನು ಬೇಟೆಯಾಡುತ್ತಿದೆ. ಇದು ಆಕ್ಷೇಪಾರ್ಹ” ಎಂದು ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೇಂದ್ರದ ವಿರುದ್ದ ಧ್ವನಿ ಎತ್ತುತ್ತಿದ್ದ ನಟಿ ತಾಪ್ಸಿ ಪನ್ನು ಆಸ್ತಿಗಳ ಮೇಲೆ ಐಟಿ ದಾಳಿ

ಆದಾಯ ತೆರಿಗೆ ಇಲಾಖೆಯು ತಾಪ್ಸಿ ಪನ್ನು ಮತ್ತು ಅನುರಾಗ್ ಕಶ್ಯಪ್‌ಗೆ ಸಂಬಂಧಿಸಿದ ಸುಮಾರು 20 ಸ್ಥಳಗಳಲ್ಲಿ ದಾಳಿ ನಡೆಸಿದೆ. ನಿರ್ಮಾಪಕ ಮತ್ತು ಉದ್ಯಮಿ ಮಧು ವರ್ಮಾ ಮಂಟೇನಾ ಅವರ ಮನೆಯ ಮೇಲೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಮುಂಬೈ ಮತ್ತು ಪುಣೆಯಲ್ಲಿ ಈ ದಾಳಿ ನಡೆದಿದ್ದು, ತೆರಿಗೆ ವಂಚನೆ ಆರೋಪದ ಮೇಲೆ ತನಿಖೆ ನಡೆಸುತ್ತಿದೆ.

ಅನುರಾಗ್ ಕಶ್ಯಪ್ ಮತ್ತು ತಾಪ್ಸಿ ಪನ್ನು ಅವರು ರಾಜಕೀಯ ವಿಷಯಗಳ ಬಗ್ಗೆ ನಿರಂತರವಾಗಿ ಪ್ರತಿಕ್ರಿಯಿಸುವವರಾಗಿದ್ದಾರೆ. ಅಷ್ಟೇ ಅಲ್ಲದೆ ಅವರು ಸಂಘ ಪರಿವಾರವನ್ನು ಕೂಡಾ ಆಗಾಗ್ಗೆ ಟೀಕೆ ಮಾಡುತ್ತಲೆ ಇದ್ದಾರೆ. ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ತಾಪ್ಸಿ ಪನ್ನು ಇತ್ತೀಚೆಗೆ ನೀಡಿರುವ ಹೇಳಿಕೆಯಿಂದ ಕೇಂದ್ರವು ಆಕ್ರೋಶಗೊಂಡಿದೆ ಎನ್ನಲಾಗಿದೆ.

ಇದನ್ನೂ ಓದಿ: ’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...