Homeಮುಖಪುಟಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ...

ಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ ಎನ್‌ಬಿಡಿಎಸ್ಎ ಸೂಚನೆ

- Advertisement -
- Advertisement -

‘ಮೌಢ್ಯ ಬಿತ್ತುವ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ’ ತರುವ ಕಾರಣಕ್ಕೆ ಬಾಗೇಶ್ವರ್ ಬಾಬಾ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ಧೀರೇಂದ್ರ ಕೃಷ್ಣ ಶಾಸ್ತ್ರಿಯ ಸಂದರ್ಶನ ತೆಗೆದು ಹಾಕುವಂತೆ ಸುದ್ದಿವಾಹಿನಿ ನ್ಯೂಸ್ 18 ಇಂಡಿಯಾಗೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಬುಧವಾರ (ನ.6) ಸೂಚಿಸಿದೆ.

ಕಳೆದ ವರ್ಷ ಜುಲೈ 10 ರಂದು ಪ್ರಸಾರವಾದ ಸಂದರ್ಶನವನ್ನು ಎಲ್ಲಾ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಂದ ಒಂದು ವಾರದೊಳಗೆ ತೆಗೆದು ಹಾಕುವಂತೆ ಎನ್‌ಬಿಡಿಎಸ್‌ಎ ಸೂಚನೆ ನೀಡಿದೆ.

ಈ ಹಿಂದೆ ಸುದ್ದಿ ವಾಹಿನಿಗಳ ವಿರುದ್ಧ ಹಲವು ದೂರುಗಳನ್ನು ಸಲ್ಲಿಸಿರುವ ಪುಣೆ ಮೂಲದ ಟೆಕ್ಕಿ ಮತ್ತು ಹೋರಾಟಗಾರ ಇಂದ್ರಜೀತ್ ಘೋರ್ಪಡೆ ಅವರು ವಿಡಿಯೋ ವಿರುದ್ಧ ದೂರು ನೀಡಿದ್ದರು. ದೂರನ್ನು ಆಲಿಸಿದ ಎನ್‌ಬಿಡಿಎಸ್‌ಎ ​​ಈ ನಿರ್ಧಾರ ಕೈಗೊಂಡಿದೆ.

ದೂರಿನಲ್ಲಿ ನ್ಯೂಸ್‌ 18 ಮ್ಯಾನೇಜಿಂಗ್ ಎಡಿಟರ್ ಕಿಶೋರ್ ಅಜ್ವಾನಿ ಜೊತೆಗಿನ ಶಾಸ್ತ್ರಿ ಅವರ ಸಂದರ್ಶನವು ಹಿಂದೂ ರಾಷ್ಟ್ರದ ಕಲ್ಪನೆ, ಲವ್ ಜಿಹಾದ್ ಪಿತೂರಿ ಸಿದ್ಧಾಂತ ಮತ್ತು ಮೂಢನಂಬಿಕೆಯನ್ನು ಪ್ರಚಾರ ಮಾಡಿದೆ. ಅಲ್ಲದೆ, “ನಾನು ವಜ್ರ ಹುಡುಕುತ್ತೇನೆ, ಚುನಾವಣಾ ಸಮೀಕ್ಷೆಗಳನ್ನು ಊಹಿಸುತ್ತೇನೆ ಮತ್ತು ಅಲೌಕಿಕ ಶಕ್ತಿಗಳ ಮೂಲಕ ಜನರನ್ನು ಗುಣಪಡಿಸುತ್ತೇನೆ” ಎಂದು ಹೇಳುವ ಮೂಲಕ ಧೀರೇಂದ್ರ ಶಾಸ್ತ್ರಿ ಮೌಢ್ಯ ಬಿತ್ತಿದ್ದಾರೆ” ಎಂದು ಆರೋಪಿಸಲಾಗಿತ್ತು.

ಧೀರೇಂದ್ರ ಶಾಸ್ತ್ರಿಯ ಹೇಳಿಕೆಗಳಿಗೆ ತಾನು ಜವಾಬ್ದಾರನಲ್ಲ ಎಂದು ಸುದ್ದಿವಾಹಿನಿ ಹೇಳಿದೆ. ಆದರೆ, ಎನ್‌ಬಿಡಿಎಸ್‌ಎ ಮಾರ್ಗಸೂಚಿ ಮತ್ತು ಬಾಂಬೆ ಹೈಕೋರ್ಟ್ ತೀರ್ಪಿನ ಪ್ರಕಾರ ಕಾರ್ಯಕ್ರಮ ಆಹ್ವಾನಿತರು ನೀಡುವ ಹೇಳಿಕೆಗಳಿಗೆ ಸುದ್ದಿವಾಹಿನಿಗಳು ಜವಾಬ್ದಾರಿಯಾಗಿರುತ್ತದೆ. ಆದ್ದರಿಂದ ಕೋಮು ದಳ್ಳುರಿಗೆ ಕಾರಣವಾಗುವ ಹೇಳಿಕೆ ನೀಡುವಂತಹವರನ್ನು ಆಹ್ವಾನಿಸುವುದನ್ನು ತಪ್ಪಿಸಬೇಕು. ಪ್ರಸಾರಕರೇ ಇಂತಹ ಹೇಳಿಕೆಗಳಿಗೆ ಜವಾಬ್ದಾರಿ ಎಂಬುವುದನ್ನು ಸಾರಲು ಪ್ರಸಾರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿತ್ತು.

ಸಂದರ್ಶನದಲ್ಲಿ ಮೌಢ್ಯವನ್ನು ಉತ್ತೇಜಿಸುವಂತಹ ಹಲವು ನಿಲುವುಗಳನ್ನು ಧೀರೇಂದ್ರ ಶಾಸ್ತ್ರಿ ಮಾಡಿದ್ದು, ಹಿಂದೂ ರಾಷ್ಟ್ರ ಮತ್ತು ಧರ್ಮದ ಬಗ್ಗೆ ಹಲವಾರು ಹೇಳಿಕೆಗಳನ್ನು ನೀಡಲಾಗಿದೆ. ಇದು ಸ್ವಭಾವತಃ ವಿಭಜನಕಾರಿಯಾಗಿದ್ದು, ಭಾರತದಲ್ಲಿ ವಾಸಿಸಲು “ಸೀತಾ ರಾಮ್” ಎಂದು ಹೇಳುವುದು ಕಡ್ಡಾಯ. ಅಲ್ಲದೆ, ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿಯರನ್ನು ಸಿಲುಕಿಸಿ ನಂತರ ಅವರನ್ನು ಕೊಲ್ಲುವಂತೆ ಇಸ್ಲಾಂ ಧರ್ಮ ಹೇಳುತ್ತದೆ ಎಂಬುವುದಾಗಿ ಅವರು ಹೇಳಿದ್ದರು ಎಂದು ಎನ್‌ಬಿಡಿಎಸ್‌ಎ ಅಧ್ಯಕ್ಷ (ನಿವೃತ್ತ) ನ್ಯಾಯಮೂರ್ತಿ ಎ ಕೆ ಸಿಕ್ರಿ ತಿಳಿಸಿದ್ದಾರೆ.

ಅಂತಹ ವ್ಯಕ್ತಿಯನ್ನು ಸಂದರ್ಶನಕ್ಕೆ ಆಹ್ವಾನಿಸಿದ್ದೇಕೆ? ಎಂದು ಎನ್‌ಬಿಡಿಎಸ್‌ಎ ನ್ಯೂಸ್‌ 18 ಅನ್ನು ಪ್ರಶ್ನಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯೂಸ್‌ 18, ಶಾಸ್ತ್ರಿ ಅವರು ತಿಂಗಳುಗಳ ಕಾಲ ಪ್ರಮುಖ ಸುದ್ದಿ ವ್ಯಕ್ತಿಯಾಗಿದ್ದರು. ಬಿಹಾರದ ರಾಜಕಾರಣಿ ತೇಜ್ ಪ್ರತಾಪ್ ಯಾದವ್ ಅವರಿಂದ ಬೆದರಿಕೆ ಎದುರಿಸಿದ್ದರು. ಅವರ ಪ್ರಸಾರಕ್ಕೆ ಗಮನಾರ್ಹ ಸುದ್ದಿ ಮೌಲ್ಯವನ್ನು ಒದಗಿಸಿದ್ದರು. ಕಾರ್ಯಕ್ರಮ ನಿರೂಪಕರು ಕೋಮುವಾದಿ ಹೇಳಿಕೆಗಳನ್ನು ತಡೆಯಲು ಯತ್ನಿಸಿದ್ದರು ಎಂದು ಸಮಜಾಯಿಸಿ ನೀಡಿತ್ತು.

ಇದನ್ನೂ ಓದಿ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...