Homeಮುಖಪುಟಹಿಜಾಬ್ ಪರ ಪ್ಯಾನಲಿಸ್ಟ್‌‌ಗಳನ್ನು ಅಲ್ ಖೈದಾಕ್ಕೆ ಲಿಂಕ್ ಮಾಡಿದ್ದ ನ್ಯೂಸ್‌‌18 ಗೆ 50 ಸಾವಿರ ದಂಡ...

ಹಿಜಾಬ್ ಪರ ಪ್ಯಾನಲಿಸ್ಟ್‌‌ಗಳನ್ನು ಅಲ್ ಖೈದಾಕ್ಕೆ ಲಿಂಕ್ ಮಾಡಿದ್ದ ನ್ಯೂಸ್‌‌18 ಗೆ 50 ಸಾವಿರ ದಂಡ ವಿಧಿಸಿದ NBDSA

- Advertisement -
- Advertisement -

ರಾಜ್ಯದಲ್ಲಿ ಹಿಜಾಬ್ ನಿಷೇಧದ ಬಗ್ಗೆ ತಪ್ಪಾಗಿ ಪ್ರಸಾರ ಮಾಡಿದ್ದಕ್ಕಾಗಿ ಸಿಎನ್‌ಎನ್‌ ನ್ಯೂಸ್ 18 ಗೆ ವಾರ್ತಾ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (NBDSA) ಬುಧವಾರ 50 ಸಾವಿರ ದಂಡ ವಿಧಿಸಿದೆ.

ನಿರೂಪಕ ಅಮನ್ ಚೋಪ್ರಾ ಅವರು ತಮ್ಮ ಕಾರ್ಯಕ್ರಮಕ್ಕೆ ಕೋಮು ಬಣ್ಣವನ್ನು ನೀಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಮತ್ತು ಹಿಜಾಬ್ ಅನ್ನು ಬೆಂಬಲಿಸುವ ಪ್ಯಾನೆಲಿಸ್ಟ್‌ಗಳನ್ನು ಅಲ್-ಖೈದಾಗೆ ಲಿಂಕ್ ಮಾಡಿದ್ದಾರೆ ಎಂದು ಸಂಸ್ಥೆ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭವಿಷ್ಯದಲ್ಲಿ ಇಂತಹ ಉಲ್ಲಂಘನೆಗಳು ಪುನರಾವರ್ತಿತವಾದರೆ, ಸಂಸ್ಥೆಯ ಮುಂದೆ ನಿರೂಪಕ ಅಮನ್ ಚೋಪ್ರಾ ಅವರ ವೈಯಕ್ತಿಕ ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳಬೇಕಾಗಬಹುದು ಎಂದು NBDSA ನ್ಯೂಸ್ 18ಗೆ ಎಚ್ಚರಿಸಿದೆ ಎಂದು ಬಾರ್ ಆಂಡ್‌‌‌ ಬೆಂಚ್‌ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ಹೆಸರಲ್ಲಿ ತಬ್ಲೀಘಿಗಳ ಅವಹೇಳನ: ಇಂದು ರಾತ್ರಿ ಕ್ಷಮೆ ಕೇಳಲಿರುವ ನ್ಯೂಸ್‌ 18 ಕನ್ನಡ!

ವೆಬ್‌ಸೈಟ್ ಸೇರಿದಂತೆ ತಮ್ಮ ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ಆಕ್ಷೇಪಾರ್ಹ ಕಾರ್ಯಕ್ರಮದ ವೀಡಿಯೊವನ್ನು 7 ದಿನಗಳಲ್ಲಿ ತೆಗೆದುಹಾಕುವಂತೆ ಸಂಸ್ಥೆಯು ನ್ಯೂಸ್ 18 ಗೆ ನಿರ್ದೇಶಿಸಿದೆ.

“ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದರ ಪರವಾಗಿದ್ದ ಪ್ಯಾನೆಲಿಸ್ಟ್‌ಗಳನ್ನು ‘ಜವಾಹಿರಿ ಗ್ಯಾಂಗ್ ಸದಸ್ಯ’, ‘ಜವಾಹಿರಿಯ ರಾಯಭಾರಿ’, ‘ಜವಾಹಿರಿ ನಿಮ್ಮ ದೇವರಾಗಿದ್ದು, ನೀವು ಅವರ ಅಭಿಮಾನಿ’ ಎಂದು ಅವರನ್ನು ಜವಾಹಿರಿಗೆ ಲಿಂಕ್‌ ಮಾಡುವ ನಿರೂಪಕನ ಪ್ರವೃತ್ತಿಯನ್ನು NBDSA ಬಲವಾಗಿ ನಿರಾಕರಿಸಿದೆ” ಎಂದು NBDSA ತನ್ನ ಆದೇಶದಲ್ಲಿ ಹೇಳಿದೆ.

“ ‘ಅಲ್‌ಕಾಯಿದಾ ಎಕ್ಸ್‌ಪೋಸ್‌ಡ್‌, ‘ಅಲ್‌ಕಾಯಿದಾ ಗ್ಯಾಂಗ್‌ ಎಕ್ಸ್‌ಪೋಸ್‌ಡ್‌‌’, ‘ಹಿಜಾಬ್‌‌ ಕ ಫಟಾ ಪೋಸ್ಟರ್‌‌’, ‘ನಿಕ್ಲಾ ಅಲ್‌ಕಾಯಿದಾ’, ‘ಹಿಜಾಬ್ ಹಿಂದೆ ಅಲ್‌ ಜವಾಹಿರಿ ಕಂಡು ಬಂದಿದ್ದಾನೆ’, ‘ಹಿಜಾಬ್ ವಿವಾದವನ್ನು ಅಲ್ ಕಾಯಿದಾ ಯೋಜಿಸಿದೆ’ ಎಂಬ ವಾಕ್ಯಗಳನ್ನು ಪ್ರಸಾರ ಮಾಡುವ ಮೂಲಕ ಅಲ್ ಖೈದಾದೊಂದಿಗೆ ಹಿಜಾಬ್ ಅನ್ನು ಬೆಂಬಲಿಸುವ ಪ್ಯಾನೆಲಿಸ್ಟ್‌ಗಳು ಮತ್ತು ವ್ಯಕ್ತಿಗಳನ್ನು ಲಿಂಕ್ ಮಾಡುವ ವಿಚಾರದಲ್ಲಿ ಯಾವುದೆ ಸತ್ಯವಿಲ್ಲ” ಎಂದು NBDSA ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

ನಿರೂಪಕ ಅಮನ್ ಚೋಪ್ರಾ ಅವರು ಲೈವ್‌ ನ್ಯೂಸ್ ಚರ್ಚೆಯನ್ನು ಇಟ್ಟು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ನಿಂದಿಸುತ್ತಿದ್ದಾರೆ. ಈ ಮೂಲಕ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಬಹಿರಂಗವಾಗಿ ದ್ವೇಷ ಪ್ರಚಾರ ಮಾಡುತ್ತಿದ್ದಾರೆ ಎಂದು ಮಾಧ್ಯಮ ವಿಮರ್ಶಕರು ಮತ್ತು ಮುಸ್ಲಿಂ ಹೋರಾಟಗಾರರು ಟೀಕಿಸಿದ್ದರು.

2022 ರಲ್ಲಿ ಉತ್ತರ ಪ್ರದೇಶ ಚುನಾವಣೆಯ ಸಮಯದಲ್ಲಿ, ಚೋಪ್ರಾ ಅವರು ತಮ್ಮ ಪ್ರೈಮ್‌ಟೈಮ್ ಶೋ “ದೇಶ್ ನಹಿ ಜುಕ್ನೆ ದೇಂಗೆ” ಯಲ್ಲಿ ಸುಮಾರು 36 ಮುಸ್ಲಿಂ ವಿರೋಧಿ ಚರ್ಚೆಗಳನ್ನು ನಡೆಸಿದ್ದಾರೆ ಎಂದು ‘ಮಕ್ತೂಬ್ ಸುದ್ದಿ ಮಾಧ್ಯಮ’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...