Homeಮುಖಪುಟಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

- Advertisement -
- Advertisement -

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ.

ಡಿಸೆಂಬರ್ 2ರಂದು ಹೊರಡಿಸಿದ ತನ್ನ ಆದೇಶದಲ್ಲಿ, ಸುದ್ದಿ ನಿಯಂತ್ರಣ ಸಂಸ್ಥೆಯು ಬಂಧನದ ವರದಿ ಮಾಡುವಾಗ ಸುದ್ದಿ ನಿರೂಪಕ ‘ಒಂದು ನಿರ್ದಿಷ್ಟ ಸಮುದಾಯಕ್ಕೆ ಸಂಬಂಧಿಸಿದಂತೆ ಪೂರ್ವಾಗ್ರಹ ಪೀಡಿತ ವಿಷಯವನ್ನು ಹೇಳಿದ್ದಾರೆ. ಪೂರ್ವನಿರ್ಧರಿತ ಕಾರ್ಯಸೂಚಿಯೊಂದಿಗೆ ವರದಿ ಮಾಡಿದ್ದಾರೆ ಎಂದು ಹೇಳಿದೆ.

ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಎಂಬ ಮಾನವ ಹಕ್ಕುಗಳ ಸಂಘಟನೆಯ ದೂರಿನ ಮೇರೆಗೆ ಎನ್‌ಬಿಡಿಎಸ್‌ಎ ಕ್ರಮ ಕೈಗೊಂಡಿದೆ.

ಹಾಡಿನ ಮೂಲಕ ರಾಜ್ಯದ ಜನಾಂಗೀಯ ಸಮುದಾಯಗಳ ವಿರುದ್ಧ ದ್ವೇಷವನ್ನು ಪ್ರಚೋದಿಸಿದ್ದಾರೆ ಎಂಬ ಆರೋಪದ ಮೇಲೆ ಹುಸೇನ್ ಅವರನ್ನು ಆಗಸ್ಟ್ 31, 2024ರಂದು ಅಸ್ಸಾಂ ಪೊಲೀಸರು ಬಂಧಿಸಿದ್ದರು.

ಹಾಡಿನಲ್ಲಿ ಹುಸೇನ್ ಅವರು, “ಅಸ್ಸಾಂ ನಿಮ್ಮಪ್ಪನ ಆಸ್ತಿಯಾ? ಅದಕ್ಕೆ ಅವರನ್ನು (ಮಿಯಾ ಮುಸ್ಲಿಮರು) ಹೊರಗಟ್ಟಲು ನೋಡುತ್ತಿದ್ದೀರಾ? ಎಂದು ಸರ್ಕಾರವನ್ನು ಕೇಳಿದ್ದರು.

“ಎಲ್ಲಾ ಸಮುದಾಯದವರೂ ತಪ್ಪು ಮಾಡುತ್ತಾರೆ. ಆದರೆ ಕೇವಲ ‘ಮಿಯಾ’ಗಳ ಮೇಲೆಯೇ (ಅಂದರೆ ಅಸ್ಸಾಮಿನಲ್ಲಿ ವಾಸಿಸುತ್ತಿರುವ ಬಂಗಾಳಿ ಮೂಲದ ಮುಸ್ಲಿಮರ ಮೇಲೆಯೇ) ದಾಳಿ ಮಾಡಲಾಗುತ್ತಿದೆ. ಆಗಾಗ ಅವರು ‘ಅಕ್ರಮ ವಲಸಿಗರು’ ಎಂದು ಸುಳ್ಳಾರೋಪ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಹುಸೇನ್ ಬಂಧನದ ನಂತರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಬಿಹು ಹಾಡುಗಳನ್ನು ಬದಲಾಯಿಸುವ ಪ್ರಯತ್ನಗಳನ್ನು ರಾಜ್ಯದ ಜನರು ಸಹಿಸುವುದಿಲ್ಲ ಎಂದು ಹೇಳಿದ್ದರು.

“ಕೆಲವರು ‘ಮಿಯಾ ಬಿಹು’ವನ್ನು ಜನಪ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅಂತಹ ಒಬ್ಬ ಗಾಯಕ ಅಲ್ತಾಫ್ ಹುಸೇನ್ ಅವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ” ಎಂದಿದ್ದರು.

ಸೆಪ್ಟೆಂಬರ್ 2, 2024 ರಂದು ಟೈಮ್ಸ್ ನೌ ನವಭಾರತ್ ಪ್ರಸಾರ ಮಾಡಿದ ಹುಸೇನ್ ಬಂಧನದ ವರದಿಯಲ್ಲಿ ಪ್ರತಿಭಟನಾ ಹಾಡನ್ನು ಒಂದು ಸಮುದಾಯದ ವಿರುದ್ದ ದ್ವೇಷ ಹರಡಲು ಬಳಸಿಕೊಳ್ಳಲಾಗಿದೆ ಎಂದು ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಎನ್‌ಬಿಡಿಎಸ್‌ಎಗೆ ನೀಡಿದ ದೂರಿನಲ್ಲಿ ತಿಳಿಸಿತ್ತು.

ಚಾನೆಲ್‌ನ ನಿರೂಪಕ ಪರಸ್ಪರ ಸಂಬಂಧವಿಲ್ಲದ ಹಲವು ಘಟನೆಗಳನ್ನು ಒಟ್ಟಾಗಿ ಜೋಡಿಸಿ, ಅವೆಲ್ಲವೂ ಒಂದು ದೊಡ್ಡ ಷಡ್ಯಂತ್ರದ ಭಾಗ ಎಂಬಂತೆ ತೋರಿಸಿದ್ದಾರೆ ಎಂದು ಹೇಳಿತ್ತು.

ನಿರೂಪಕ ಹುಸೇನ್ ಅವರ ಹಾಡನ್ನು ಹಿಂದೂ ಸಂಸ್ಕೃತಿಯ ವಿರುದ್ಧ ನಡೆಯುತ್ತಿರುವ ದೇಶವ್ಯಾಪಿ ಷಡ್ಯಂತ್ರದ ಒಂದು ಭಾಗ ಎಂದು ತೋರಿಸಿದ್ದಾರೆ. ಅದಕ್ಕಾಗಿ ಅಸ್ಸಾಂ, ಕೇರಳ ಮತ್ತು ಕಾಶ್ಮೀರದಲ್ಲಿ ನಡೆದ ಬೇರೆ ಬೇರೆ ಘಟನೆಗಳನ್ನು ಜೋಡಿಸಿದ್ದಾರೆ. ಇಡೀ ದೇಶದಲ್ಲಿ ಹಿಂದೂಗಳ ಮೇಲೆ ಒಂದು ಯುದ್ಧದಂತೆ ದಾಳಿ ನಡೆಯುತ್ತಿದೆ ಎಂಬ ಸಂಪೂರ್ಣ ಕೃತಕವಾದ, ಭಯ ಹುಟ್ಟಿಸುವ ಕಥೆಯನ್ನು ನಿರ್ಮಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

‘ಮಿಯಾ’ ಎಂಬ ಪದವನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರೊಂದಿಗೆ ಸಮೀಕರಿಸಿ, ನಿರೂಪಕ ಇಡೀ ಸಮುದಾಯವನ್ನು ತಪ್ಪಾಗಿ ಬಿಂಬಿಸಿದ್ದಾರೆ ಎಂದು ಆರೋಪಿಸಿತ್ತು.

ಚಾನೆಲ್ ತನ್ನ ವಿರುದ್ದದ ಎಲ್ಲಾ ಆರೋಪಗಳನ್ನು ನಿರಾಕರಿಸಿತ್ತು. ತಾನು ಬಂಧನ ಮತ್ತು ಮುಖ್ಯಮಂತ್ರಿಯ ಹೇಳಿಕೆಗಳನ್ನು ಮಾತ್ರ ವರದಿ ಮಾಡಿದ್ದೇನೆ. ವರದಿಯಲ್ಲಿ ಹೇಳಿದ ವಿಷಯಗಳೆಲ್ಲವೂ ವಾಸ್ತವಿಕ ಎಂದು ವಾದಿಸಿತ್ತು.

ಹುಸೇನ್ ಅವರ ಬಂಧನ ಸುದ್ದಿಯನ್ನು ವರದಿ ಮಾಡುವುದು ‘ಸುದ್ದಿ ಪ್ರಸಾರಕರ ಹಕ್ಕಿನ ಭಾಗ’ ಎಂಬುವುದನ್ನು ಎನ್‌ಬಿಡಿಎಸ್‌ಎ ಒಪ್ಪಿಕೊಂಡಿದೆ. ಆದರೆ, ಸುದ್ದಿ ನಿರೂಪಕ ಹುಸೇನ್ ಅವರ ಹಾಡನ್ನು ಒಂದು ದೈಹಿಕ ಹಲ್ಲೆ ಅಥವಾ ಬಲಾತ್ಕಾರದ ಘಟನೆಯೊಂದಿಗೆ ಜೋಡಿಸಿದ್ದಾರೆ. ಆ ಘಟನೆಗೂ ಹಾಡಿಗೂ ಸಂಬಂಧವೇ ಇಲ್ಲ ಎಂದು ಹೇಳಿದೆ.

ನಿರೂಪಕ ನಿಷ್ಪಕ್ಷಪಾತವಾಗಿ ಸುದ್ದಿ ಮಾಡಲು ಬಂದವರಲ್ಲ; ಬದಲಿಗೆ ತಾನು ಮೊದಲೇ ರೂಪಿಸಿಟ್ಟಿದ್ದ ದ್ವೇಷದ ಕಥೆಗೆ ಈ ಘಟನೆಯನ್ನು ಒಂದು ಸಾಧನವನ್ನಾಗಿ ಮಾತ್ರ ಬಳಸಿಕೊಂಡಿದ್ದಾರೆ. ಈ ರೀತಿಯ ವರದಿಯು ಸುದ್ದಿ ಪ್ರಸಾರದ ನೈತಿಕ ನಿಯಮ ಸಂಹಿತೆ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ.

ಪ್ರಸಾರ ಮಾಡಲಾದ ಕಾರ್ಯಕ್ರಮದ ಆಕ್ಷೇಪಾರ್ಹವಾದ ಎಲ್ಲಾ ಭಾಗಗಳನ್ನು (ವಿಡಿಯೋ, ಟೈಟಲ್, ನಿರೂಪಕರ ಹೇಳಿಕೆ ಇತ್ಯಾದಿ) ತಕ್ಷಣ ತೆಗೆದುಹಾಕಬೇಕು. ನಂತರ ತಿದ್ದುಪಡಿ ಮಾಡಿದ ಕಾರ್ಯಕ್ರಮದ ಆವೃತ್ತಿಯನ್ನು ಏಳು ದಿನಗಳ ಒಳಗೆ ಸಂಸ್ಥೆಗೆ ಸಲ್ಲಿಸಬೇಕು ಎಂದು ಎನ್‌ಬಿಡಿಎಸ್‌ಎ ಟೈಮ್ಸ್ ನೌ ನವಭಾರತ್ ಚಾನೆಲ್‌ಗೆ ಆದೇಶಿಸಿದೆ. ಇದನ್ನು ಮಾಡದಿದ್ದರೆ ಮುಂದಿನ ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...