ಡ್ರಗ್ಸ್ ಪ್ರಕರಣದ ಆರೋಪಿಯಾಗಿರುವ ಆರ್ಯನ್ ಖಾನ್‌ರನ್ನು ಭೇಟಿಯಾದ ಕೆಲವೇ ಗಂಟೆಗಳಲ್ಲಿ ಎನ್‌ಸಿಬಿ ಅಧಿಕಾರಿಗಳು ಬಾಲಿವುಡ್ ನಟ ಶಾರುಖ್ ಖಾನ್ ಮನೆಗೆ ಭೇಟಿ ನೀಡಿ ಕೆಲ ಹೊತ್ತು ಚರ್ಚೆ ನಡೆಸಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಈ ಬಗ್ಗೆ ಮಾಧ್ಯಮಗಳಲ್ಲಿ ಶಾರುಖ್ ಖಾನ್ ಮನೆ ಮೇಲೆ ಎನ್‌ಸಿಬಿ ದಾಳಿ ಎಂದು ವರದಿಯಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸಂಸ್ಥೆ, “ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗುತ್ತಿರುವಂತೆ ಇದು ದಾಳಿಯಲ್ಲ, ಕೇವಲ ಕಾಗದ ಪತ್ರದ ಕೆಲಸ” ಎಂದು ಹೇಳಿದೆ.

“ನಟ ಶಾರುಖ್ ಖಾನ್ ಅವರಿಗೆ ನೋಟಿಸ್ ನೀಡಿದ ನಂತರ ತಂಡವು ಪ್ರಕರಣದ ತನಿಖೆಗೆ ಸಂಬಂಧಿಸಿದ ಕೆಲವು ವಿವರಗಳಿಗಾಗಿ ಅವರ ಮನೆಗೆ ಭೇಟಿ ನೀಡಿತ್ತು. ಪೇಪರ್‌ವರ್ಕ್ ಪೂರ್ಣಗೊಳಿಸುವುದಕ್ಕಾಗಿ ಭೇಟಿ ನೀಡಿತ್ತು. ಯಾವುದೇ ಪರಿಶೀಲನೆಗಾಗಿ ಅಲ್ಲ” ಎಂದು ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಹೇಳಿಕೆಯಲ್ಲಿ ತಿಳಿಸಿದ್ದಾರೆ .

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಮಗ ಆರ್ಯನ್ ಖಾನ್‌ರನ್ನು ಭೇಟಿಯಾದ ನಟ ಶಾರುಖ್ ಖಾನ್‌

ಇಂದು ಬೆಳಗ್ಗೆ ಶಾರುಖ್ , ಮುಂಬೈನ ಆರ್ಥರ್ ರೋಡ್ ಜೈಲಿಗೆ ಭೇಟಿ ನೀಡಿ ತಮ್ಮ ಮಗನನ್ನು ಭೇಟಿಯಾಗಿ ಬಂದಿದ್ದರು. ಅಕ್ಟೋಬರ್ 2 ರಂದು ಮುಂಬೈನ ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಯುತಿದ್ದ ವೇಳೆ ದಾಳಿ ನಡೆಸಿದ್ದ ಎನ್‌ಸಿಬಿ ಆರ್ಯನ್ ಖಾನ್‌ರನ್ನು ಬಂಧಿಸಿತ್ತು.

14 ದಿನಗಳಿಂದ ಜೈಲಿನಲ್ಲಿರುವ ಅವರಿಗೆ ಜಾಮೀನು ನೀಡಲು ನಿನ್ನೆ ಮುಂಬೈನ ವಿಶೇಷ ನ್ಯಾಯಾಲಯವು ನಿರಾಕರಿಸಿದೆ. ಹೀಗಾಗಿ, ಅವರು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದು, ಮಂಗಳವಾರ ವಿಚಾರಣೆ ನಡೆಯಲಿದೆ.

ಆರ್ಯನ್‌ಖಾನ್ ಮತ್ತು ಅರ್ಬಾಜ್ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದು, ಮುನ್ಮುನ್ ಅವರನ್ನು ಮುಂಬೈನ ಬೈಕುಲ್ಲಾ ಮಹಿಳಾ ಜೈಲಿನಲ್ಲಿ ಇರಿಸಲಾಗಿದೆ. ಈ ಪ್ರಕರಣದ ಆರೋಪಿ ಆರ್ಯನ್ ಖಾನ್ ಮತ್ತು ಇತರರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8 (ಸಿ), 20 (ಬಿ), 27, 28, 29 ಮತ್ತು 35 ರ ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಆರ್ಯನ್ ಖಾನ್‌ರ ಮೂಲಭೂತ ಹಕ್ಕುಗಳನ್ನು ಉಳಿಸಿ: ಸುಪ್ರೀಂಗೆ ಶಿವಸೇನಾ ಸಚಿವನ ಅರ್ಜಿ

ಇನ್ನು ಡ್ರಗ್ಸ್ ಪ್ರಕರಣದಲ್ಲಿ ಬಂಧಿತ ಆರೋಪಿಯ ವಾಟ್ಸಾಪ್ ಚಾಟ್‌ಗಳಲ್ಲಿ ಹೆಸರು ಕಾಣಿಸಿಕೊಂಡಿದೆ ಎಂದು 22 ವರ್ಷದ ಬಾಲಿವುಡ್ ನಟಿ ಅನನ್ಯ ಪಾಂಡೆಯವರ ಮುಂಬೈ ಮನೆ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ನಡೆಸಿದೆ. ವಿಚಾರಣೆಗೆ ನೋಟಿಸ್ ನೀಡಿದೆ.

Ananya Pandey to debut in Telugu with Vijay Deverakonda's next- The New Indian Express
ಅನನ್ಯ ಪಾಂಡೆ

ಅನನ್ಯ ಪಾಂಡೆ ಮತ್ತು ಆರ್ಯನ್ ಖಾನ್  ಕಾಮನ್ ಫ್ರೆಂಡ್ಸ್ ಸರ್ಕಲ್‌ ಹೊಂದಿದ್ದಾರೆ. ಅನನ್ಯ ಮತ್ತು ಆರ್ಯನ್ ಸಹೋದರಿ ಸುಹಾನಾ ಉತ್ತಮ ಸ್ನೇಹಿತರಾಗಿದ್ದಾರೆ. ಅನನ್ಯ ಪಾಂಡೆ 2019 ರಲ್ಲಿ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದಾರೆ. ಈಕೆ  ಬಾಲಿವುಡ್ ನಟ ಚುಂಕಿ ಪಾಂಡೆ ಮತ್ತು ಭಾವನಾ ಪಾಂಡೆ ಅವರ ಪುತ್ರಿ.

ಅನನ್ಯ ಪಾಂಡೆ 2019ರಲ್ಲಿ ತೆರೆಕಂಡ ‘ಸ್ಟೂಡೆಂಟ್​ ಆಫ್​ ದಿ ಇಯರ್​ 2’ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಟ್ಟವರಿಗೆ ಮೊದಲ ಸಿನಿಮಾದಲ್ಲೇ ಫಿಲ್ಮ್​ ಫೇರ್​ ಪ್ರಶಸ್ತಿ ದಕ್ಕಿತ್ತು. ನಂತರ ಕಾರ್ತಿಕ್ ಆರ್ಯನ್, ಭೂಮಿ ಪಡ್ನೇಕರ್‌ ಜೊತೆಗೆ ‘ಪತಿ ಪತ್ನಿ ಔರ್​ ವೋ’ ಚಿತ್ರದಲ್ಲಿ ನಟಿಸಿದ್ದರು. ‘ಖಾಲಿ ಪೀಲಿ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

LEAVE A REPLY

Please enter your comment!
Please enter your name here