ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಎನ್‌ಸಿಪಿ ನಾಯಕ ಶರದ್ ಪವಾರ್ ಸ್ಪರ್ಧಿಸುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ. ಹಲವು ವಿರೋಧ ಪಕ್ಷಗಳ ಬೆಂಬಲದ ನಡುವೆಯೂ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ತಿರಸ್ಕರಿಸುವ ಸಾಧ್ಯತೆಯಿದೆ.
ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ತಮ್ಮ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಭೆಯಲ್ಲಿ 81 ವರ್ಷದ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರು “ನಾನು ರೇಸ್‌ನಲ್ಲಿ ಇಲ್ಲ, ನಾನು ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗುವುದಿಲ್ಲ” ಎಂದಿದ್ದಾರೆ ಎಂದು ವರದಿಯಾಗಿದೆ. ಆದರೆ, ಅಧಿಕೃತವಾಗಿ ಕಾಂಗ್ರೆಸ್‌ಗೆ ತಮ್ಮ ನಿಲುವನ್ನು ತಿಳಿಸಿಲ್ಲ.
“ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆಂದು ನನಗೆ ಅನಿಸುತ್ತಿಲ್ಲ. ಸಾಹೇಬ್ (ಶರದ್ ಪವಾರ್) ಜನರನ್ನು ಭೇಟಿಯಾಗಲು ಇಷ್ಟಪಡುವ ವ್ಯಕ್ತಿ. ಅವರು ರಾಷ್ಟ್ರಪತಿ ಭವನಕ್ಕೆ ತಮ್ಮನ್ನು ತಾವು ಸೀಮಿತಗೊಳಿಸಿಕೊಳ್ಳುವುದಿಲ್ಲ” ಎಂದು ಮಹಾರಾಷ್ಟ್ರ ಸರ್ಕಾರದ ಎನ್‌ಸಿಪಿ ನಾಯಕರೊಬ್ಬರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಇದನ್ನೂ ಓದಿ: ರಾಜಸ್ಥಾನ: ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ
ರಾಷ್ಟ್ರಪತಿ ಹುದ್ದೆಗೆ ಶರದ್ ಪವಾರ್ ಅವರಿಗೆ ಕಾಂಗ್ರೆಸ್ ತನ್ನ ಬೆಂಬಲವನ್ನು ನೀಡಿದೆ ಎಂದು ವರದಿಯಾಗಿದೆ. ಕಳೆದ ಗುರುವಾರ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ಸಂದೇಶದೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶರದ್ ಪವಾರ್ ಅವರನ್ನು ಮುಂಬೈನಲ್ಲಿ ಭೇಟಿಯಾಗಿದ್ದರು. ಈ ಸಲಹೆಗೆ ಎನ್‌ಸಿಪಿ ನಾಯಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರಪತಿ ಚುನಾವಣೆ ಜುಲೈ 18 ರಂದು ನಡೆಯಲಿದೆ. ಇದಾಗಿ ಮೂರು ದಿನಗಳ ನಂತರ ಮತ ಎಣಿಕೆ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಭಾರತದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಶರದ್ ಪವಾರ್ ಅವರು ಅನೇಕ ಮೈತ್ರಿಗಳು ಮತ್ತು ಸಮ್ಮಿಶ್ರ ಸರ್ಕಾರಗಳನ್ನು ಮಾಡಿದ ಮತ್ತು ಮುರಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಬಿಜೆಪಿಯನ್ನು ವಿಫಲಗೊಳಿಸಲು ಸೈದ್ಧಾಂತಿಕ ವಿರೋಧ ಪಕ್ಷಗಳಾದ ಶಿವಸೇನೆ ಮತ್ತು ಕಾಂಗ್ರೆಸ್‌ಗಳನ್ನು ಒಟ್ಟುಗೂಡಿಸಿ ಮಹಾರಾಷ್ಟ್ರದಲ್ಲಿ ಮೈತ್ರಿ ಆಡಳಿತ ಒಕ್ಕೂಟವನ್ನು ರಚಿಸಿದ್ದಾರೆ.
ಇದನ್ನೂ ಓದಿ: Explained: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?


