Homeಮುಖಪುಟಅಜಿತ್‌ಗೆ ಕೈಕೊಟ್ಟ ಎನ್‌ಸಿಪಿ ನಾಯಕರು; ಶರದ್ ಪವಾರ್ ಬಣ ಸೇರುತ್ತಿರುವ ಪ್ರಮುಖರು

ಅಜಿತ್‌ಗೆ ಕೈಕೊಟ್ಟ ಎನ್‌ಸಿಪಿ ನಾಯಕರು; ಶರದ್ ಪವಾರ್ ಬಣ ಸೇರುತ್ತಿರುವ ಪ್ರಮುಖರು

- Advertisement -
- Advertisement -

ತನ್ನ ಚಿಕ್ಕಪ್ಪ ಮತ್ತು ಪಕ್ಷದ ಸಂಸ್ಥಾಪಕ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣಕ್ಕೆ ಹಲವಾರು ಪ್ರಮುಖ ನಾಯಕರು ಸೇರ್ಪಡೆಯಾದ ನಂತರ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಪುಣೆಯಲ್ಲಿ ಪಕ್ಷದ ಸಹೋದ್ಯೋಗಿಗಳೊಂದಿಗೆ ಅತಿಮುಖ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

ಪುಣೆಯ ನಾಲ್ವರು ನಾಯಕರು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣದಲ್ಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ನಿನ್ನೆ ಶರದ್ ಪವಾರ್ ಪಾಳಯಕ್ಕೆ ಸೇರಿದರು. ಇವರಲ್ಲಿ ಎನ್‌ಸಿಪಿಯ ಮಾಜಿ ಪಿಂಪ್ರಿ-ಚಿಂಚ್‌ವಾಡ್ ಮುಖ್ಯಸ್ಥ ಅಜಿತ್ ಗವ್ಹಾನೆ ಮತ್ತು ಸ್ಥಳೀಯ ನಾಯಕರಾದ ರಾಹುಲ್ ಭೋಸ್ಲೆ, ಪಂಕಜ್ ಭಲೇಕರ್ ಮತ್ತು ಯಶ್ ಸಾನೆ ಶರದ್ ಬಣ ಸೇರಿದ್ದಾರೆ.

ಪಿಂಪ್ರಿ-ಚಿಂಚ್‌ವಾಡ್‌ನ 20 ಕ್ಕೂ ಹೆಚ್ಚು ಮಾಜಿ ಕಾರ್ಪೊರೇಟರ್‌ಗಳು, ಮೇಯರ್‌ಗಳು ಮತ್ತು ಘಟಕದ ಮುಖ್ಯಸ್ಥರು ನಿನ್ನೆ ಹಿರಿಯ ಪವಾರ್ ಶಿಬಿರಕ್ಕೆ ಸೇರಿದರು.

ಲೋಕಸಭೆ ಚುನಾವಣೆ ಫಲಿತಾಂಶದ ಒಂದು ತಿಂಗಳ ನಂತರ ಈ ಬದಲಾವಣೆ ಕಂಡುಬಂದಿದೆ. ಇದರಲ್ಲಿ ಶರದ್ ಪವಾರ್ ಬಣ ತಾನು ಸ್ಪರ್ಧಿಸಿದ 10 ಸ್ಥಾನಗಳಲ್ಲಿ 8 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಅದ್ಭುತ ಪ್ರದರ್ಶನವನ್ನು ನೀಡಿತು. ಅಜಿತ್ ಪವಾರ್ ಪಾಳಯವು ಕೇವಲ ಒಂದು ಸ್ಥಾನವನ್ನು ಗೆದ್ದು ಮೂರು ಸ್ಥಾನಗಳನ್ನು ಕಳೆದುಕೊಂಡಿದ್ದರಿಂದ ನಿರಾಶೆಗೊಂಡಿತು. ಒಂದು ಹಂತದಲ್ಲಿ ಫಲಿತಾಂಶಗಳು, ಹಿರಿಯ ಪವಾರ್ ಅವರನ್ನು ಎನ್‌ಸಿಪಿ ಬೆಂಬಲಿಗರು ಹಿಮ್ಮೆಟ್ಟಿಸಲು ಉತ್ಸುಕರಾಗಿದ್ದಾರೆಂದು ತೋರಿಸಿದೆ. ಮಹಾರಾಷ್ಟ್ರದಲ್ಲಿ ವಿಧಾಣಸಭೆ ಚುನಾವಣೆಗೆ ತಿಂಗಳುಗಳು ಬಾಕಿ ಇರುವ ಕಾರಣ ಈ ಬದಲಾವಣೆಯು ಹೆಚ್ಚು ಮಹತ್ವದ್ದಾಗಿದೆ.

1999 ರಲ್ಲಿ ಎನ್‌ಸಿಪಿ ಸ್ಥಾಪಿಸಿದ ಶರದ್ ಪವಾರ್, ಕಳೆದ ವರ್ಷ ಅವರ ಸಹೋದರ ಸಂಬಂಧಿ ಅಜಿತ್ ಪವಾರ್ ಬಂಡಾಯವನ್ನು ಮುನ್ನಡೆಸಿ, ಶಿವಸೇನೆ-ಬಿಜೆಪಿ ಸರ್ಕಾರಕ್ಕೆ ಸೇರುವ ಮೂಲಕ ಉಪಮುಖ್ಯಮಂತ್ರಿಯಾದರು. ಇದರಿಂದ ಹಿನ್ನಡೆ ಅನಿಭವಿಸಿದ ಹಿರಿಯ ರಾಜಕಾರಣಿ ಶರದ್ ಪವಾರ್, ತಮ್ಮ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಕಳೆದುಕೊಂಡರು. ಅನಿವಾರ್ಯವಾಗಿ ಅವರು ಎನ್‌ಸಿಪಿ (ಶರದ್ಚಂದ್ರ ಪವಾರ್) ಹೆಸರಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಯಿತು.

ಎನ್‌ಸಿಪಿ ನಾಯಕರು ಅಜಿತ್ ಬಣ ತೊರೆದಿದ್ದೇಕೆ?

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಗೆ ತಿಂಗಳುಗಳು ಬಾಕಿಯಿದ್ದು, ಪ್ರತಿಯೊಬ್ಬ ನಾಯಕನೂ ಟಿಕೆಟ್ ಪಡೆಯಲು ಹಲವು ಮಾರ್ಗಗಳನ್ನು ಅನ್ವೇಷಿಸುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಶರದ್ ಪವಾರ್ ನೇತೃತ್ವದ ಬಣ ದೊಡ್ಡ ಸಾಧನೆ ಮಾಡುವುದರೊಂದಿಗೆ, ವಿಧಾನಸಭೆ ಚುನಾವಣೆಯಲ್ಲಿ ಅವರು ಅದನ್ನು ಪುನರಾವರ್ತಿಸುತ್ತಾರೆ ಮತ್ತು ಗೆಲ್ಲುವ ಕಡೆ ಇರಬೇಕೆಂದು ಅನೇಕ ನಾಯಕರು ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ಹಲವಾರು ನಾಯಕರು ತಮ್ಮ ಬದಲಾವಣೆಯ ಹಿಂದೆ ಸ್ಥಳೀಯ ಅಂಶಗಳನ್ನು ಉಲ್ಲೇಖಿಸಿದ್ದಾರೆ. “ನೀವು ಪಿಂಪ್ರಿ-ಚಿಂಚ್‌ವಾಡ್ ಅನ್ನು ನೋಡಿದರೆ, ಅಜಿತ್ ದಾದಾ ಮತ್ತು ಪವಾರ್ ಸಾಹಬ್ ಇಬ್ಬರೂ ಅದರ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಆದರೆ, 2017 ರಿಂದ ಬಿಜೆಪಿ ನಗರ ಪಾಲಿಕೆಯನ್ನು ಆಳುತ್ತಿದೆ. ಇಲ್ಲಿ ಅಭಿವೃದ್ಧಿ ಕೆಲಸಗಳು ತಪ್ಪಾದ ರೀತಿಯಲ್ಲಿ ನಡೆದಿವೆ. ಇಲ್ಲಿ ವ್ಯಾಪಕ ಭ್ರಷ್ಟಾಚಾರವಿದೆ” ಎಂದು ಗವ್ಹಾನೆ ತಿಳಿಸಿದ್ದಾರೆ.

ಶರದ್ ಪವಾರ್ ಅವರ ಪುತ್ರಿ, ನಾಲ್ಕು ಬಾರಿ ಲೋಕಸಭೆ ಸಂಸದರಾದರಾಗಿರುವ ಸುಪ್ರಿಯಾ ಸುಳೆ, “ಶರದ್ ಪವಾರ್ ಕಳೆದ 60 ವರ್ಷಗಳಿಂದ ಮಹಾರಾಷ್ಟ್ರ ಮತ್ತು ಕೇಂದ್ರದಲ್ಲಿ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ” ಎಂದು ಹೇಳಿದರು. “ನಮಗೆ ಪವಾರ್ ಸಾಹಬ್ ಅವರ ಸಿದ್ಧಾಂತದಲ್ಲಿ ನಂಬಿಕೆ ಇದೆ ಮತ್ತು ವಿರೋಧ ಪಕ್ಷದಲ್ಲಿರುವ ಅನೇಕ ಜನರು ಸಹ ಅವರ ಕಡೆಗೆ ಹೆಚ್ಚಿನ ಭರವಸೆಯಿಂದ ನೋಡುತ್ತಾರೆ. ಅದಕ್ಕಾಗಿಯೇ ಜನರು ಹಲವರು ಅವರ ಬಣ ಸೇರುತ್ತಿದ್ದಾರೆ” ಎಂದು ಹೇಳಿದರು.

ಅಜಿತ್ ತನ್ನ ಬಣ ಬದಲಾಯಿಸಬಹುದೇ?

ತನ್ನ ಬಣದ ನಾಯಕರು ಶರದ್ ಪವಾರ್ ಅವರ ಪಾಳೆಯಕ್ಕೆ ಬದಲಾಗುತ್ತಿದ್ದಂತೆ, ಅಜಿತ್ ಪವಾರ್ ಕೂಡ ಅಂತಿಮವಾಗಿ ಹಿಂತಿರುಗಲು ಪ್ರಯತ್ನಿಸಬಹುದು ಎಂಬ ಊಹಾಪೋಹವಿದೆ. ಶರದ್ ಪವಾರ್ ಅವರು ಹಿಂತಿರುಗಲು ಬಯಸಿದರೆ ಪಕ್ಷದಲ್ಲಿ ಸ್ಥಾನ ಸಿಗುತ್ತದೆಯೇ ಎಂದು ಇತ್ತೀಚೆಗೆ ಕೇಳಲಾಯಿತು. “ಇಂತಹ ನಿರ್ಧಾರಗಳನ್ನು ವೈಯಕ್ತಿಕ ಮಟ್ಟದಲ್ಲಿ ತೆಗೆದುಕೊಳ್ಳಲಾಗುವುದಿಲ್ಲ, ಬಿಕ್ಕಟ್ಟಿನ ಸಂದರ್ಭದಲ್ಲಿ ನನ್ನೊಂದಿಗೆ ನಿಂತ ನನ್ನ ಸಹೋದ್ಯೋಗಿಗಳನ್ನು ಮೊದಲು ಕೇಳಲಾಗುತ್ತದೆ” ಎಂದು ಶರದ್ ಪವಾರ್ ಹೇಳಿದ್ದರು.

ಚುನಾವಣಾ ಹಿನ್ನಡೆಯಿಂದಾಗಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಅಜಿತ್ ಪವಾರ್ ಅವರ ಸ್ಥಾನಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಅವರು ಈಗ ಉಪಮುಖ್ಯಮಂತ್ರಿಯಾಗಿದ್ದಾರೆ, ಅವರ ಪಕ್ಷವು ಲೋಕಸಭೆ ಸ್ಪರ್ಧೆಯಲ್ಲಿ ಕೇವಲ ಒಂದು ಸ್ಥಾನವನ್ನು ಮಾತ್ರ ಗೆದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಬರುವ ರಾಜ್ಯ ಚುನಾವಣೆಯು 64 ವರ್ಷದ ನಾಯಕನಿಗೆ ದೊಡ್ಡ ಸವಾಲಾಗಿದೆ.

ಇದನ್ನೂ ಓದಿ; ನೀಟ್ ವಿವಾದ: ‘ದೊಡ್ಡ ಪ್ರಮಾಣದಲ್ಲಿ ಪರೀಕ್ಷಾ ಪವಿತ್ರ್ಯತೆ ಕಳೆದುಕೊಂಡರೆ ಮಾತ್ರ ಮರು ಪರೀಕ್ಷೆ” ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...