Homeಮುಖಪುಟಮಹಾರಾಷ್ಟ್ರ: ಹಿಂಸಾಚಾರಕ್ಕೆ ತಿರುಗಿದ ಮೀಸಲಾತಿ ಪರ ಹೋರಾಟ; ಶಾಸಕರ ನಿವಾಸಕ್ಕೆ ಬೆಂಕಿ

ಮಹಾರಾಷ್ಟ್ರ: ಹಿಂಸಾಚಾರಕ್ಕೆ ತಿರುಗಿದ ಮೀಸಲಾತಿ ಪರ ಹೋರಾಟ; ಶಾಸಕರ ನಿವಾಸಕ್ಕೆ ಬೆಂಕಿ

- Advertisement -
- Advertisement -

ಮರಾಠ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಬೀಡ್ ಜಿಲ್ಲೆಯಲ್ಲಿ ಮಹಾರಾಷ್ಟ್ರ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಗೆ ಬೆಂಕಿ ಹಚ್ಚಿ ಧ್ವಂಸ ಮಾಡಲಾಗಿದೆ.

ಅ.25 ರಿಂದ ಮೀಸಲಾತಿಗೆ ಆಗ್ರಹಿಸಿ ಮನೋಜ್ ಜಾರಂಗೆ ಪಾಟೀಲ್ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಸತ್ಯಾಗ್ರಹದ ವಿರುದ್ಧ ಅವಹೇಳನಾಕಾರಿ  ಹೇಳಿಕೆಗಳನ್ನು ನೀಡಿದ್ದರಿಂದ ಶಾಸಕರ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾಗಿದೆ.

ಶರದ್ ಪವಾರ್ ಅವರ ನೇತೃತ್ವದ ಎನ್‌ಸಿಪಿಯಿಂದ ಬೇರ್ಪಟ್ಟ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಶಾಸಕರಾಗಿರುವ ಸೋಲಂಕೆ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ. ಶಾಸಕರ ಮನೆಯ ಹೊರಗೆ ನಿಲ್ಲಿಸಿದ್ದ ವಾಹನಕ್ಕೆ ಪ್ರತಿಭಟನಾಕಾರರು ಕಲ್ಲು ಎಸೆದು ಹಾನಿ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಸೋಲಂಕೆ, ದಾಳಿಯಾದಾಗ ನಾನು ನನ್ನ ಮನೆಯೊಳಗೆ ಇದ್ದೆ. ಅದೃಷ್ಟವಶಾತ್ ನನ್ನ ಕುಟುಂಬದ ಸದಸ್ಯರಿಗೆ ಅಥವಾ ಸಿಬ್ಬಂದಿಗೆ ಗಾಯವಾಗಿಲ್ಲ. ನಾವು ಸುರಕ್ಷಿತವಾಗಿದ್ದೇವೆ ಆದರೆ ಅಪಾರ ಆಸ್ತಿ ನಷ್ಟವಾಗಿದೆ ಎಂದು ಹೇಳಿದ್ದಾರೆ.

ವೈರಲ್‌ ವಿಡಿಯೋದಲ್ಲಿ ಶಾಸಕರ ಮನೆಗೆ ಸಂಪೂರ್ಣವಾಗಿ ಹೊಗೆ ಆವರಿಸಿರುವುದು ಮತ್ತು ಉರಿಯುತ್ತಿರುವ ಕಟ್ಟಡದಿಂದ ಕಪ್ಪು ಹೊಗೆ ಹೊರ ಬರುತ್ತಿರುವುದು ಕಂಡು ಬಂದಿದೆ.

ವ್ಯಾಪಕವಾಗಿ ಪ್ರಸಾರವಾದ ಆಡಿಯೊದಲ್ಲಿ ಮೀಸಲಾತಿಗಾಗಿ ಬೇಡಿಕೆ ಮತ್ತು ಅದನ್ನು ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ 40-ದಿನಗಳ ಗಡುವು ನೀಡುರುವುದನ್ನು ಮಕ್ಕಳ ಆಟವಾಗಿದೆ ಎಂದು ಸೋಲಂಕೆ ಹೇಳುವುದು ಹಾಗೂ ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಸ್ಪರ್ಧಿಸದ ವ್ಯಕ್ತಿ ಇಂದು ಬುದ್ಧಿವಂತ ವ್ಯಕ್ತಿಯಾಗಿದ್ದಾನೆ ಎಂದು ಮೀಸಲಾತಿ ಪರ ನಾಯಕನನ್ನು ಉಲ್ಲೇಖಿಸಿ ಸೋಲಂಕೆ ಹೇಳುವ ಆಡಿಯೋ ವೈರಲ್‌ ಆಗಿತ್ತು.

ಎನ್‌ಸಿಪಿ ಘಟನೆಯನ್ನು ಖಂಡಿಸಿದ್ದು, ಇದನ್ನು ಗೃಹ ಸಚಿವರ ಸಂಪೂರ್ಣ ವೈಫಲ್ಯ ಎಂದು ಕರೆದಿದೆ. ಇದು ಮಹಾರಾಷ್ಟ್ರದ ಟ್ರಿಪಲ್ ಇಂಜಿನ್ ಸರ್ಕಾರದ ವೈಫಲ್ಯ. ಇಂದು ಶಾಸಕರ ಮನೆಗೆ ಬೆಂಕಿ ಹಚ್ಚಲಾಗಿದೆ. ಗೃಹ ಸಚಿವರು ಏನು ಮಾಡುತ್ತಿದ್ದಾರೆ? ಇದು ಅವರ ಜವಾಬ್ದಾರಿ ಎಂದು ಶರದ್ ಪವಾರ್ ಪಕ್ಷದ ಸಂಸದ ಸುಪ್ರಿಯಾ ಸುಳೆ ಹೇಳಿದ್ದಾರೆ.

ಬೆಂಕಿ ಹಚ್ಚಿದ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಈ ಪ್ರತಿಭಟನೆ ಯಾವ ತಿರುವು ಪಡೆದುಕೊಳ್ಳುತ್ತಿದೆ? ಇದು ತಪ್ಪು ದಾರಿಯಲ್ಲಿ ಸಾಗುತ್ತಿದೆ ಎಂಬುದನ್ನು ಮನೋಜ್ ಪಾಟೀಲ್ ಗಮನಿಸಬೇಕು. ಸರ್ಕಾರವು ಈ ಕುರಿತು ಪರಿಶೀಲಿಸಲು ಮಂಡಳಿಯನ್ನು ರಚಿಸಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಶಿವಸೇನೆ, NCP ಶಾಸಕರ ವಿರುದ್ಧದ ಅನರ್ಹತೆ ಅರ್ಜಿ; ಸ್ಪೀಕರ್‌ಗೆ ಗಡುವು ನೀಡಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...