Homeಮುಖಪುಟಮೋದಿ 3.0: ರಾಜ್ಯ ಖಾತೆ ತಿರಸ್ಕರಿಸಿದ ಅಜಿತ್‌ ಬಣ; ಎನ್‌ಡಿಎಯಲ್ಲಿ ಭುಗಿಲೆದ್ದ ಅಸಮಾಧಾನ

ಮೋದಿ 3.0: ರಾಜ್ಯ ಖಾತೆ ತಿರಸ್ಕರಿಸಿದ ಅಜಿತ್‌ ಬಣ; ಎನ್‌ಡಿಎಯಲ್ಲಿ ಭುಗಿಲೆದ್ದ ಅಸಮಾಧಾನ

- Advertisement -
- Advertisement -

ನರೇಂದ್ರ ಮೋದಿ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಮೋದಿ 3.0 ಸರಕಾರದಲ್ಲಿ ಮೊದಲ ಅಸಮಾಧಾನ ಭುಗಿಲೆದ್ದಿದ್ದು, ಎನ್‌ಸಿಪಿ ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರನ್ನು ಕ್ಯಾಬಿನೆಟ್ ಸಚಿವರನ್ನಾಗಿ ಸೇರಿಸಿಕೊಳ್ಳದ ಕಾರಣ ಎನ್‌ಡಿಎ ಮಿತ್ರಪಕ್ಷ ಎನ್‌ಸಿಪಿ ಅಸಮಾಧಾನಗೊಂಡಿದೆ.

ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರಿಗೆ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನ ನೀಡಬೇಕೆಂಬ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಬೇಡಿಕೆಯನ್ನು ಎನ್‌ಡಿಎ ನಾಯಕತ್ವ ಭಾನುವಾರ ತಿರಸ್ಕರಿಸಿದೆ. ಅಜಿತ್ ಪವಾರ್ ಮತ್ತು ಪಟೇಲ್ ಎನ್‌ಡಿಎ ತೀರ್ಮಾನವನ್ನು ಒಪ್ಪಿಕೊಂಡಿದ್ದರೂ, ಅವರು ಸಾಧ್ಯವಾದಷ್ಟು ಬೇಗ ಈ ಕುರಿತು ಪರಿಹಾರ ಕ್ರಮ ಕೈಗೊಳ್ಳುವ ನಿರೀಕ್ಷೆಯಲ್ಲಿದ್ದಾರೆ.

ಶನಿವಾರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆ ನಡೆಸಿ, ಸಣ್ಣ ಪಕ್ಷಗಳಿಗೆ ಒಂದೇ ರಾಜ್ಯ ಸಚಿವ ಸ್ಥಾನವಿದೆ ಎಂದು ಹೇಳಿದ್ದರು. ಈ ಸಂದೇಶವನ್ನು ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿಗೂ ನೀಡಿದ್ದರು.

ಹಿರಿತನದ ಆಧಾರದಲ್ಲಿ ಪಟೇಲ್‌ಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಬಹುದೆಂದು ಎನ್‌ಸಿಪಿ ನಿರೀಕ್ಷಿಸಿತ್ತು. ಸ್ವತಂತ್ರ ಖಾತೆಯ ರಾಜ್ಯ ಸಚಿವ ಸ್ಥಾನ ನೀಡಲಾಗಿದೆ. ನಾನು ಈ ಹಿಂದೆ ಕೇಂದ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವನಾಗಿದ್ದೆ, ಆದ್ದರಿಂದ ಇದು ನನಗೆ ಹಿನ್ನಡೆಯಾಗುತ್ತದೆ. ನಾವು ಈ ಬಗ್ಗೆ ಬಿಜೆಪಿ ನಾಯಕತ್ವಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸ್ವಲ್ಪ ದಿನಗಳ ಕಾಲ ಕಾದು ನೋಡುವಂತೆ ಹೇಳಿದ್ದಾರೆ ಎಂದು ಪಟೇಲ್‌ ಹೇಳಿದ್ದಾರೆ.

ರಾಜ್ಯ ಎನ್‌ಸಿಪಿ ಅಧ್ಯಕ್ಷ ಸುನೀಲ್ ತಟ್ಕರೆ ಅವರೊಂದಿಗೆ ದೆಹಲಿಯಲ್ಲಿ ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ ಅಜಿತ್‌ ಪವಾರ್, ಪಟೇಲ್ ಅವರು ಹಿರಿಯ ನಾಯಕರಾಗಿದ್ದು, ಈ ಹಿಂದೆಯೇ ಕ್ಯಾಬಿನೆಟ್‌ ಹುದ್ದೆಯನ್ನು ಅಲಂಕರಿಸಿದ್ದಾರೆ. ಎನ್‌ಸಿಪಿಗೆ ಕ್ಯಾಬಿನೆಟ್ ಸ್ಥಾನ ಸಿಗುತ್ತದೆ ಎಂದು ನಾವು ಕಾಯುತ್ತೇವೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಮಹರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಭಾರೀ ಹಿನ್ನಡೆಯಾಗಿದೆ. ಎನ್‌ಡಿಎ ಮೈತ್ರಿ ಪಕ್ಷ ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಕೇವಲ ಒಂದು ಸ್ಥಾನವನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದೆ. 2022ರ ಜೂನ್ ನಲ್ಲಿ ಶರದ್ ಪವಾರ್ ನೇತೃತ್ವದ ಎನ್ ಸಿಪಿಯಿಂದ ಹೊರ ನಡೆದ ಅಜಿತ್ ಪವಾರ್ ಪಕ್ಷದ 54 ಶಾಸಕರ ಪೈಕಿ 40 ಮಂದಿಯನ್ನು ತಮ್ಮ ಜತೆಗೆ ಕರೆದೊಯ್ದಿದ್ದರು. ಬಳಿಕ ಕಾನೂನು ಹೋರಾಟದಲ್ಲಿ ನೈಜ ಎನ್‌ಸಿಪಿ ಎಂದು ಕೋರ್ಟ್‌ನಿಂದ ಮಾನ್ಯತೆ ಪಡೆದಿದ್ದರು.

ಇದನ್ನು ಓದಿ: ಮೋದಿ ಸಂಪುಟ: ಕುಮಾರಸ್ವಾಮಿ, ಶೋಭಾ ಸೇರಿದಂತೆ ರಾಜ್ಯದ 5 ಮಂದಿಗೆ ಸಚಿವ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...