Homeಮುಖಪುಟಎನ್‌ಸಿಪಿ V/s ಎನ್‌ಸಿಪಿ: ಫೆ.15ರೊಳಗೆ ಶಾಸಕರ ಅನರ್ಹತೆ ನಿರ್ಧರಿಸಿ; ಮಹಾ ಸ್ಪೀಕರ್‌ಗೆ ಸುಪ್ರೀಂ ಸೂಚನೆ

ಎನ್‌ಸಿಪಿ V/s ಎನ್‌ಸಿಪಿ: ಫೆ.15ರೊಳಗೆ ಶಾಸಕರ ಅನರ್ಹತೆ ನಿರ್ಧರಿಸಿ; ಮಹಾ ಸ್ಪೀಕರ್‌ಗೆ ಸುಪ್ರೀಂ ಸೂಚನೆ

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗುಂಪಿಗೆ ಸೇರಿದ ಎನ್‌ಸಿಪಿ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶರದ್ ಪವಾರ್ ಬಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸುಪ್ರೀಂ ಕೋರ್ಟ್ ಫೆಬ್ರವರಿ 15ರವರೆಗೆ ಸಮಯ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದ ಮುಂದೆ, ಸ್ಪೀಕರ್ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅನರ್ಹತೆ ಅರ್ಜಿಗಳ ಕುರಿತು ಆದೇಶಗಳನ್ನು ಹೊರಡಿಸಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಮನವಿ ಸಲ್ಲಿಸಿದರು.

ಇದಕ್ಕೂ ಮೊದಲು, ಏಕನಾಥ್ ಶಿಂಧೆ ನೇತೃತ್ವದ ರಾಜ್ಯ ಸರ್ಕಾರದ ಭಾಗವಾಗಿ ಪಕ್ಷ ಬದಲಿಸಿದ ಎನ್‌ಸಿಪಿ ಶಾಸಕರಿಗೆ ಸಂಬಂಧಿಸಿದ ಅನರ್ಹತೆ ಅರ್ಜಿಗಳನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ ಸ್ಪೀಕರ್‌ಗೆ ಜನವರಿ 31 ರವರೆಗೆ ಕಾಲಾವಕಾಶ ನೀಡಿತ್ತು.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಶರದ್ ಪವಾರ್ ಬಣದ ಜಯಂತ್ ಪಾಟೀಲ್ ಅವರು ಅಜಿತ್ ಪವಾರ್ ಮತ್ತು ಅವರಿಗೆ ನಿಷ್ಠರಾಗಿರುವ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ತ್ವರಿತವಾಗಿ ತೀರ್ಮಾನಿಸುವಂತೆ ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದ್ದಾರೆ.

‘ಜನವರಿ 30 ರಂದು ಸಾಕ್ಷ್ಯಾಧಾರಗಳ ಕ್ರಾಸ್ ಎಕ್ಸಾಮಿನೇಷನ್ ಮುಗಿಯುತ್ತದೆ ಮತ್ತು ಅಂತಿಮ ವಿಚಾರಣೆಯು ಜನವರಿ 31 ರಂದು ಮುಕ್ತಾಯಗೊಳ್ಳುತ್ತದೆ. ತೀರ್ಪುಗಳನ್ನು ಪ್ರಕಟಿಸಲು ನಾವು ಮೂರು ವಾರಗಳ ಕಾಲ ಕೇಳುತ್ತಿದ್ದೇವೆ. ಇದು ವಾಸ್ತವಿಕ ಸಮಯ ಎಂದು ನಾವು ಕೇಳುತ್ತಿದ್ದೇವೆ’ ಎಂದು ಮೆಹ್ತಾ ಸುಪ್ರೀಂ ಪೀಠದ ಮುಂದೆ ಮನವಿ ಸಲ್ಲಿಸಿದರು.

ಮೂರು ವಾರಗಳ ವಿಸ್ತರಣೆಯನ್ನು ವಿರೋಧಿಸಿದ ಜಯಂತ್ ಪಾಟೀಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ನಾರ್ವೇಕರ್ ತೀರ್ಪು ಬರೆಯಲು ಒಂದು ವಾರ ಹೆಚ್ಚುವರಿ ಸಮಯ ಸಾಕು ಎಂದು ಹೇಳಿದರು.

ವಾದ ಆಲಿಸಿದ ನಂತರ, ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಶರದ್ ಪವಾರ್ ಪಾಳಯವು 40 ಶಾಸಕರು ಮತ್ತು 5 ಎಂಎಲ್‌ಸಿಗಳ ವಿರುದ್ಧ ಸಲ್ಲಿಸಿರುವ ಅನರ್ಹತೆ ಅರ್ಜಿಗಳ ತೀರ್ಪು ನೀಡಲು ಫೆಬ್ರವರಿ 15 ರವರೆಗೆ ಸ್ಪೀಕರ್‌ಗೆ ಸಮಯ ನೀಡುವುದಾಗಿ ಪೀಠ ಹೇಳಿದೆ.

ಶರದ್ ಪವಾರ್ ಸಹೋದರ ಸಂಬಂಧಿಯಾಗಿರುವ ಅಜಿತ್ ಪವಾರ್ ಪಕ್ಷವನ್ನು ವಿಭಜಿಸಿದ ನಂತರ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಉಪಮುಖ್ಯಮಂತ್ರಿಯಾಗಿ ಸೇರ್ಪಡೆಯಾದರು. ಮೇ 2022 ರಲ್ಲಿ ಶಿವಸೇನೆಯಲ್ಲಿನ ವಿಭಜನೆಯ ನಂತರ ಆಗಿನ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಿದ ನಂತರ ಮತ್ತು ಏಕನಾಥ್ ಶಿಂಧೆ ಅವರು ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

ಅಜಿತ್ ಬೆಂಬಲಿಗ ಶಾಸಕರ ವಿರುದ್ಧ ಪಾಟೀಲ್ ಅವರು ಸೆಪ್ಟೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಕಳೆದ ಮೂರು ತಿಂಗಳಿನಿಂದ ನಾರ್ವೇಕರ್ ಅನರ್ಹತೆ ಅರ್ಜಿಗಳ ಮೇಲೆ ಕುಳಿತಿದ್ದಾರೆ ಎಂದು ವಿಷಾದಿಸಿದರು. ಬಂಡಾಯ ಶಾಸಕರ ಅನರ್ಹತೆಗೆ ಶರದ್ ಪವಾರ್ ಪಾಳಯ ಮೂರು ಅರ್ಜಿಗಳನ್ನು ಸಲ್ಲಿಸಿದೆ.

ಮೊದಲ ಅರ್ಜಿಯನ್ನು ಅಜಿತ್ ಪವಾರ್ ಸೇರಿದಂತೆ ಒಂಬತ್ತು ಶಾಸಕರ ವಿರುದ್ಧ ಸಲ್ಲಿಸಲಾಯಿತು; ಎರಡನೇ ಅರ್ಜಿ 20 ಶಾಸಕರ ವಿರುದ್ಧ; ಮತ್ತು 11 ಶಾಸಕರ ವಿರುದ್ಧ ಮೂರನೇ ಅರ್ಜಿ ಸಲ್ಲಿಸಲಾಗಿದೆ.

ಅಜಿತ್ ಪವಾರ್ ಬಣವು ಹತ್ತು ಎನ್‌ಸಿಪಿ ಶಾಸಕರು ಮತ್ತು ಮೂವರು ಎಂಎಲ್‌ಸಿಗಳ ವಿರುದ್ಧ ಅನರ್ಹತೆ ಅರ್ಜಿಯನ್ನು ಸಲ್ಲಿಸಿದೆ. ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಬಳಸಲು ಅನುಮತಿ ಕೋರಿ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಅರ್ಜಿ ಸಲ್ಲಿಸಿದೆ. ಸದ್ಯದಲ್ಲೇ ಪ್ರಕರಣದ ತೀರ್ಪು ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ; ‘ಕಾಂತರಾಜು ಆಯೋಗದ ವರದಿ ಸ್ವೀಕರಿಸುತ್ತೇನೆ…’; ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...