Homeಮುಖಪುಟಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ ನಿರ್ಧಾರವನ್ನು ತಿರಸ್ಕರಿಸಿದ NCPಯ ಸಮಿತಿ

ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ ನಿರ್ಧಾರವನ್ನು ತಿರಸ್ಕರಿಸಿದ NCPಯ ಸಮಿತಿ

- Advertisement -
- Advertisement -

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಹಿರಿಯ ರಾಜಕಾರಣಿ ಶರದ್ ಪವಾರ್ ಅವರ ನಿರ್ಧಾರವನ್ನು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ 18 ಸದಸ್ಯರ ಸಮಿತಿಯು ತಿರಸ್ಕರಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಈ ಸಮಿತಿಯಲ್ಲಿ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ, ಸೋದರಳಿಯ ಅಜಿತ್ ಪವಾರ್ ಮತ್ತು ಹಿರಿಯ ನಾಯಕರಾದ ಪ್ರಫುಲ್ ಪಟೇಲ್, ಛಗನ್ ಭುಜಬಲ್, ದಿಲೀಪ್ ವಾಲ್ಸೆ-ಪಾಟೀಲ್ ಮತ್ತು ಅನಿಲ್ ದೇಶಮುಖ್ ಸೇರಿದಂತೆ ಇತರರನ್ನು ಇದ್ದಾರೆ.

”[ಶರದ್] ಪವಾರ್ ಸಾಹೇಬ್ ನಮಗೆ ತಿಳಿಸದೆ ನಿರ್ಧಾರ ತೆಗೆದುಕೊಂಡರು. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಎಲ್ಲಾ ಬೇಡಿಕೆಗಳನ್ನು ಪರಿಗಣಿಸಿ ನಾವು ಇಂದು ಸಭೆ ನಡೆಸಿದ್ದೇವೆ ಮತ್ತು ಸಮಿತಿಯು ಪವಾರ್ ಅವರ ರಾಜೀನಾಮೆಯನ್ನು ತಿರಸ್ಕರಿಸುವ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಿದೆ” ಎಂದು ಹಿರಿಯ ನಾಯಕ ಪ್ರಫುಲ್ ಪಟೇಲ್ ಹೇಳಿದರು.

1999ರಲ್ಲಿ ಪಕ್ಷವನ್ನು ರಚಿಸಿದಾಗಿನಿಂದ ಪವಾರ್ ಅವರು ಈ ಹುದ್ದೆಯನ್ನು ಅಲಂಕರಿಸಿದ್ದರು. ಅವರು ಮೇ 2ರಂದು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆದರೇ ಇದೀಗ ಸಮಿತಿಯು ಅವರ ರಾಜೀನಾಮೆಯನ್ನು ತಿರಸ್ಕರಿಸಿದೆ.

”ರಾಜ್ಯಸಭೆಯಲ್ಲಿ ನನಗೆ ಮೂರು ವರ್ಷಗಳ ಅಧಿಕಾರವಿದೆ, ಇನ್ನು ಮುಂದೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಈ ಮೂರು ವರ್ಷಗಳಲ್ಲಿ, ನಾನು ರಾಜ್ಯ ಮತ್ತು ದೇಶಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತೇನೆ. ನಾನು ಯಾವುದೇ ಹೆಚ್ಚುವರಿ ಜವಾಬ್ದಾರಿಗಳನ್ನು ತೆಗೆದುಕೊಳ್ಳುವುದಿಲ್ಲ” ಎಂದು ಪವಾರ್ ತಮ್ಮ ಆತ್ಮಚರಿತ್ರೆ ಲೋಕ ಮೇಜ್ ಸಂಗತಿಯ ಎರಡನೇ ಆವೃತ್ತಿಯ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಘೋಷಿಸಿದ್ದರು.

ಪವಾರ್ ಅವರ ನಿರ್ಧಾರದಿಂದ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಮಹಾರಾಷ್ಟ್ರ ಸೇರಿದಂತೆ ದೇಶದ ಅನೇಕ ಭಾಗಗಳಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂಬೈಗೆ ಬಂದಿದ್ದರು. ಮುಂಬೈನ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪ್ರತಿಭಟನೆಗಳು ನಡೆದವು ಮತ್ತು ಪಕ್ಷದ ಹಲವಾರು ಜಿಲ್ಲಾಧ್ಯಕ್ಷರು ತಮ್ಮ ರಾಜೀನಾಮೆಯನ್ನು ಪ್ರತಿಭಟಿಸಿದರು.

ಇದನ್ನೂ ಓದಿ: NCP ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶರದ್ ಪವಾರ್: ಬೆಂಬಲಿಗರ ಪ್ರತಿಭಟನೆ

ಶುಕ್ರವಾರ, ಪವಾರ್ ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹಲವಾರು ನಾಯಕರು ಮನವಿ ಮಾಡಿದ್ದಾರೆ ಎಂದು ಪಟೇಲ್ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

”ಪಕ್ಷ ಮತ್ತು ದೇಶಕ್ಕೆ ಪವಾರ್ ಅವರಂತಹ ನಾಯಕನ ಅಗತ್ಯವಿದೆ. ಎನ್‌ಸಿಪಿ ನಾಯಕರು ಮಾತ್ರವಲ್ಲದೆ ಪಕ್ಷದ ಇತರ ನಾಯಕರು ಮತ್ತು ಗಣ್ಯ ವ್ಯಕ್ತಿಗಳು ಸಹ ಪಕ್ಷದ ಮುಖ್ಯಸ್ಥರಾಗಿ ಮುಂದುವರಿಯಲು ಅವರನ್ನು ವಿನಂತಿಸಿದ್ದಾರೆ” ಎಂದು ಹೇಳಿದರು.

”ಈಗ ತೆಗೆದುಕೊಂಡ ನಿರ್ಧಾರದಿಂದಾಗಿ ಮಹಾರಾಷ್ಟ್ರದ ಹೊರಗಿನಿಂದ ನಿಮ್ಮ ಅನೇಕ ನಮ್ಮ ಪಕ್ಷದ ನಾಯಕರು ಈ ಸ್ಥಳಕ್ಕೆ ಬಂದಿದ್ದಾರೆ” ಎಂದು ಪವಾರ್ ಹೇಳಿದ್ದಾರೆ.

”ಅವರು ನಾಳೆ ನನ್ನೊಂದಿಗೆ ಮಾತನಾಡಲು ಬಯಸುತ್ತಾರೆ. ನಾವು ನಾಳೆ ಸಂಜೆಯೊಳಗೆ ಭೇಟಿಯಾಗುತ್ತೇವೆ. ಅದಾದ ಬಳಿಕ ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಅಂತಿಮ ನಿರ್ಧಾರವನ್ನು ಪ್ರಕಟಿಸುತ್ತೇವೆ ಎಂದ” ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....