Homeಮುಖಪುಟದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ: ಅಗ್ರಸ್ಥಾನದಲ್ಲಿರುವ ಯುಪಿ

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ: ಅಗ್ರಸ್ಥಾನದಲ್ಲಿರುವ ಯುಪಿ

- Advertisement -
- Advertisement -

ಎಸ್ಸಿ-ಎಸ್ಟಿ ಸಮುದಾಯದ ಜನರ ಮೇಲೆ ದೇಶದಲ್ಲಿ ದೌರ್ಜನ್ಯಗಳು ಹೆಚ್ಚಳವಾಗುತ್ತಿದೆ. ಬಿಜೆಪಿಯು ಮಾಡೆಲ್‌ ರಾಜ್ಯ ಎಂದು ಕರೆಯುತ್ತಿದ್ದ ಯೋಗಿ ಆದಿತ್ಯನಾಥ್‌ ಆಡಳಿತದ ಉತ್ತರಪ್ರದೇಶವು ಅಗ್ರ ಸ್ಥಾನದಲ್ಲಿದೆ ಎಂದು NCRB ವರದಿಯು ಬಹಿರಂಗಪಡಿಸಿದೆ.

2022ರಲ್ಲಿ ಭಾರತದಲ್ಲಿ ದಲಿತರ ಮೇಲೆ ಜಾತಿ ಆಧಾರಿತ ದೌರ್ಜನ್ಯಗಳು ಹೆಚ್ಚಳವಾಗಿದೆ ಎಂದು NCRB ವರದಿಯು ಬಹಿರಂಗಪಡಿಸಿದೆ. 2022ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ (NCRB) ವರದಿಯ ಪ್ರಕಾರ ‘ಕ್ರೈಮ್ ಇನ್ ಇಂಡಿಯಾ’ ವರದಿಯು ಭಾರತದಲ್ಲಿ ದಲಿತರು ಜಾತಿ ಆಧಾರಿತ ದೌರ್ಜನ್ಯಗಳಿಗೆ ಗುರಿಯಾಗುತ್ತಿದ್ದಾರೆ. 2022ರಲ್ಲಿ ಪರಿಶಿಷ್ಟ ಜಾತಿಗಳ (ಎಸ್‌ಸಿ) ವಿರುದ್ಧದ ದೌರ್ಜನ್ಯದ ವಿರುದ್ಧ 57,582 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ಕ್ಕಿಂತ 13.1% ಹೆಚ್ಚಳವಾಗಿದೆ. 2021ರಲ್ಲಿ 50,900 ಪ್ರಕರಣಗಳು ದಾಖಲಾಗಿತ್ತು. ಅಪರಾಧದ ಪ್ರಮಾಣವು 2021ರಲ್ಲಿ 25.3ರಿಂದ 2022ರಲ್ಲಿ 28.6ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧ್ಕಕೆ ಸಂಬಂಧಿಸಿ ಒಟ್ಟು 10,064 ಪ್ರಕರಣಗಳು ದಾಖಲಾಗಿವೆ. ಇದು 2021ಕ್ಕಿಂತ 14.3% ಹೆಚ್ಚಳವಾಗಿದೆ. 2021ರಲ್ಲಿ 8,802 ಪ್ರಕರಣಗಳು ದಾಖಲಾಗಿದ್ದವು. ಅಪರಾಧ ಪ್ರಮಾಣವು 2021ರಲ್ಲಿ 8.4ರಿಂದ 2022ರಲ್ಲಿ 9.6ಕ್ಕೆ ಏರಿಕೆಯಾಗಿದೆ. ಇದಲ್ಲದೆ 2022ರಲ್ಲಿ ಬುಡಕಟ್ಟು ಮಹಿಳೆಯರ ಮೇಲೆ 1,347 ಅತ್ಯಾಚಾರ ಪ್ರಕರಣಗಳು ಮತ್ತು 1022 ಹಲ್ಲೆ ಪ್ರಕರಣಗಳು ವರದಿಯಾಗಿವೆ ಎಂದು ವರದಿ ಬಹಿರಂಗಪಡಿಸಿದೆ.

ಎಸ್ಸಿ ಸಮುದಾಯದ ಜನರ ವಿರುದ್ಧದ ದೌರ್ಜನ್ಯ ಪ್ರಕರಣ ಅತಿ ಹೆಚ್ಚು ಉತ್ತರಪ್ರದೇಶದಲ್ಲಿ ದಾಖಲಾಗಿದೆ. ಅಂದರೆ  15,368 ಪ್ರಕರಣಗಳು ದಾಖಲಾಗಿದೆ. ರಾಜಸ್ಥಾನದಲ್ಲಿ 8,752 ಪ್ರಕರಣಗಳು, ಮಧ್ಯಪ್ರದೇಶದಲ್ಲಿ 7,733 ಪ್ರಕರಣಗಳು ಮತ್ತು ಬಿಹಾರದಲ್ಲಿ 6,509 ಪ್ರಕರಣಗಳು ದಾಖಲಾಗಿದೆ.

ಯುಪಿಯಲ್ಲಿ ಎಸ್‌ಸಿಗಳ ವಿರುದ್ಧದ ಅಪರಾಧಗಳ ಪ್ರಕರಣಗಳ ಸಂಖ್ಯೆ 2021ರಲ್ಲಿ 13,146ರಿಂದ 2022ರಲ್ಲಿ 15,368ಕ್ಕೆ ಏರಿದೆ. ಈ ಅಂಕಿ ಅಂಶಗಳು ಯೋಗಿ ಆಡಳಿತದ ಉತ್ತರಪ್ರದೇಶದಲ್ಲಿ ಎಸ್ಸಿ ಸಮುದಾಯಗಳ ಮೇಲಿನ ದೌರ್ಜನ್ಯ 16% ಹೆಚ್ಚಾಗಿದೆ ಎಂಬುವುದನ್ನು ಸೂಚಿಸಿದೆ.

ದಕ್ಷಿಣ ಭಾರತದ ರಾಜ್ಯಗಳ ಪೈಕಿ ಆಂಧ್ರಪ್ರದೇಶ 2,315 ಪ್ರಕರಣಗಳೊಂದಿಗೆ ಎಸ್‌ಸಿ ಜನರ ವಿರುದ್ಧ ಎಸಗಿದ ಪ್ರಕರಣಗಳಲ್ಲಿ ಅಗ್ರಸ್ಥಾನದಲ್ಲಿದೆ. ತೆಲಂಗಾಣದಲ್ಲಿ ಎಸ್‌ಸಿಗಳ ವಿರುದ್ಧದ ದೌರ್ಜನ್ಯಕ್ಕೆ ಸಂಬಂಧಿಸಿ 1,787 ಅಪರಾಧಗಳು ದಾಖಲಾಗಿದ್ದರೆ, ತಮಿಳುನಾಡಿನಲ್ಲಿ 1,761 ಮತ್ತು ಕರ್ನಾಟಕದಲ್ಲಿ 1,977 ಪ್ರಕರಣಗಳಿವೆ. ಕೇರಳವು ಎಸ್‌ಸಿಗಳ ವಿರುದ್ಧ ಅತಿ ಕಡಿಮೆ ಅಪರಾಧಗಳನ್ನು ಅಂದರೆ 1,050 ಪ್ರಕರಣಗಳು ದಾಖಲು ಮಾಡಿದೆ. ತಮಿಳುನಾಡಿನಲ್ಲಿ 2021ಕ್ಕೆ ಹೋಲಿಕೆ ಮಾಡಿದರೆ 2022ರಲ್ಲಿ ಎಸ್ಸಿ ಸಮುದಾಯದ ಮೇಲಿನ ದೌರ್ಜನ್ಯ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸಮುದಾಯದ ಜನರ ವಿರುದ್ಧದ ಅತಿ ಹೆಚ್ಚು ಅಪರಾಧಗಳು ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದಲ್ಲಿ 545 ಪ್ರಕರಣಗಳು ದಾಖಲಾಗಿದ್ದು ಮತ್ತು ಕಡಿಮೆ ಪ್ರಕರಣ ಅಂದರೆ 67 ಪ್ರಕರಣಗಳು ತಮಿಳುನಾಡಿನಲ್ಲಿ ದಾಖಲಾಗಿದೆ. ಕರ್ನಾಟಕದಲ್ಲಿ ಎಸ್ಟಿಗಳ ವಿರುದ್ಧದ 438  ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದರೆ, ಆಂಧ್ರಪ್ರದೇಶದಲ್ಲಿ ಎಸ್ಟಿಗಳ ವಿರುದ್ಧದ ದೌರ್ಜನ್ಯಕ್ಕೆ ಸಂಬಂಧಿಸಿ 396 ಪ್ರಕರಣಗಳು, ಕೇರಳದಲ್ಲಿ 172 ಪ್ರಕರಣಗಳು ದಾಖಲಾಗಿವೆ. ಎಸ್ಟಿಗಳ ವಿರುದ್ಧದ ದೌರ್ಜನ್ಯಗಳಿಗೆ ಸಂಬಂಧಿಸಿ ಕರ್ನಾಟಕವು 2021ರಲ್ಲಿ 361 ಪ್ರಕರಣಗಳನ್ನು ದಾಖಲಿಸಿದ್ದು, 2022ರಲ್ಲಿ 438 ಪ್ರಕರಣಗಳು ದಾಖಲಾಗಿತ್ತು. ಈ ಅಂಕಿ ಅಂಶಗಳು ಪ್ರಕರಣಗಳಲ್ಲಿ 21.3% ಹೆಚ್ಚಳವನ್ನು ಸೂಚಿಸುತ್ತದೆ.

ಇದನ್ನು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’: ಕೇಂದ್ರದ ಉತ್ತರದಲ್ಲಿ ಸ್ಪಷ್ಟನೆ ಇಲ್ಲ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...