Homeಮುಖಪುಟಎನ್‌ಡಿಎ ಸರ್ಕಾರ: ಟಿಡಿಪಿ, ಜೆಡಿಯು ಸ್ಪೀಕರ್‌ ಹುದ್ದೆಗೆ ಬೇಡಿಕೆಯಿಟ್ಟಿದ್ದು ಏಕೆ?

ಎನ್‌ಡಿಎ ಸರ್ಕಾರ: ಟಿಡಿಪಿ, ಜೆಡಿಯು ಸ್ಪೀಕರ್‌ ಹುದ್ದೆಗೆ ಬೇಡಿಕೆಯಿಟ್ಟಿದ್ದು ಏಕೆ?

ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಸ್ಪೀಕರ್‌ಗೆ ನೀಡಲಾದ ಸಾಂವಿಧಾನಿಕ ಅಧಿಕಾರ ಸರ್ಕಾರ ರಚಿಸುವ ಮತ್ತು ಬೀಳಿಸುವ ಸಾಮರ್ಥ್ಯ ನೀಡುತ್ತದೆ

- Advertisement -
- Advertisement -

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೂ, ಚರ್ಚೆಗಳು ಮತ್ತು ಪ್ರಶ್ನೆಗಳು ಅವರ ಸುತ್ತ ಕೇಂದ್ರೀಕೃತವಾಗಿರದೆ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಇಬ್ಬರು ಪಾಲುದಾರರ ಸುತ್ತ ಸುತ್ತುತ್ತಿವೆ.

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜನತಾ ದಳ-ಯುನೈಟೆಡ್ (ಜೆಡಿಯು) ನಾಯಕ ನಿತೀಶ್ ಕುಮಾರ್ ಅವರು ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಹೊರ ಬಂದಾಗಿನಿಂದ ಭಾರೀ ಸುದ್ದಿಯಲ್ಲಿದ್ದಾರೆ.

ಬಿಜೆಪಿ ಬಹುಮತ ಪಡೆಯದಿದ್ದರೂ, ಆಂಧ್ರ ಪ್ರದೇಶ ಮತ್ತು ಬಿಹಾರದ ಈ ಇಬ್ಬರು ನಾಯಕರ ಬೆಂಬಲದಿಂದ ಮೋದಿ ಮೂರನೇ ಬಾರಿ ಪ್ರಧಾನಿ ಹುದ್ದೆಗೇರಿದ್ದಾರೆ. ಈ ನಡುವೆ ಇಬ್ಬರೂ ಕೂಡ ತಮ್ಮ ಪಕ್ಷಕ್ಕೆ ಸ್ವೀಕರ್ ಹುದ್ದೆ ನೀಡುವಂತೆ ಕೇಳಿದ್ದಾರೆ ಎಂದು ವರದಿಯಾಗಿದೆ.

ಪ್ರಸ್ತುತ ಎನ್‌ಡಿಎ ಸರ್ಕಾರಕ್ಕೆ ಬೆನ್ನೆಲುಬಾಗಿರುವ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಸಚಿವ ಸ್ಥಾನಕ್ಕಿಂತ ಸ್ಪೀಕರ್ ಹುದ್ದೆಗೆ ಏಕೆ ಲಾಬಿ ಮಾಡುತ್ತಿದ್ದಾರೆ? ಎಂದು ನಿಮಗನಿಸಬಹುದು. ಈ ಪ್ರಶ್ನೆಗೆ 1985ರಲ್ಲಿ 52ನೇ ತಿದ್ದುಪಡಿಯ ಮೂಲಕ ಪರಿಚಯಿಸಲಾದ ಸಂವಿಧಾನದ 10ನೇ ಶೆಡ್ಯೂಲ್‌ನಲ್ಲಿ ಸೂಚಿಸಲಾದ ಪಕ್ಷಾಂತರ ವಿರೋಧಿ ಕಾನೂನಿನಲ್ಲಿ ಉತ್ತರವಿದೆ.

ಸ್ವಯಂ ಪ್ರೇರಣೆಯಿಂದ ತಮ್ಮ ರಾಜಕೀಯ ಪಕ್ಷದ ಸದಸ್ಯತ್ವವನ್ನು ತೊರೆಯುವ ಅಥವಾ ಪಕ್ಷದ ಸೂಚನೆಗಳಿಗೆ ವಿರುದ್ಧವಾಗಿ ಮತ ಚಲಾಯಿಸುವ ಶಾಸಕರು, ಸಂಸದರು ಅನರ್ಹತೆಗೆ ಅರ್ಹರಾಗುತ್ತಾರೆ. ಆದರೆ, ಪಕ್ಷದ ಮೂರನೇ ಎರಡರಷ್ಟು ಚುನಾಯಿತ ಸಂಸದರು ಅಥವಾ ಶಾಸಕರು ಇನ್ನೊಂದು ಪಕ್ಷಕ್ಕೆ ಹೋದರೆ 10ನೇ ಶೆಡ್ಯೂಲ್ ಅವರನ್ನು ಅನರ್ಹತೆಯಿಂದ ರಕ್ಷಿಸುತ್ತದೆ. ಇಂತಹ ಸನ್ನಿವೇಶದಲ್ಲಿ ಚುನಾಯಿತರನ್ನು ಅನರ್ಹಗೊಳಿಸಬೇಕೇ ಅಥವಾ ಬೇಡವೇ ಎಂಬುವುದನ್ನು ನಿರ್ಧರಿಸುವುದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದಾಗಿದೆ.

ಇದಕ್ಕೆ ಇತ್ತೀಚಿನ ಉದಾಹರಣೆಯೆಂದರೆ, ಮಹಾರಾಷ್ಟ್ರದಲ್ಲಿ ಜನವರಿ 2024ರಲ್ಲಿ ಸ್ಪೀಕರ್ ರಾಹುಲ್ ನಾರ್ವೇಕರ್ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ‘ನೈಜ’ ಶಿವಸೇನೆ ಪಕ್ಷದ ಸ್ಥಾನಮಾನ ನೀಡಿರುವುದು. ಶಿಂಧೆ ನೇತೃತ್ವದ ಶಾಸಕರ ಬಣವು ಜೂನ್ 2022ರಲ್ಲಿ ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ತಿರುಗಿಬಿದ್ದಿತ್ತು. ಈ ವಿಷಯ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಆದರೆ ಫೆಬ್ರವರಿ 2023ರಲ್ಲಿ, ಪಕ್ಷಾಂತರ ವಿರೋಧಿ ಕಾನೂನಿನ ಪ್ರಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳುವುದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿರುವ ಪಿಆರ್‌ಎಸ್‌ ಲೆಜಿಸ್ಲೇಟಿವ್ ರಿಸರ್ಚ್‌ನ ನಾಗರಿಕ ಮತ್ತು ಶಾಸಕಾಂಗ ಸಂಶೋಧನಾ ತೊಡಗುವಿಕೆಗಳ ಮುಖ್ಯಸ್ಥ ಚಕ್ಷು ರಾಯ್, “ಪ್ರಾಥಮಿಕವಾಗಿ ಭಾರತದಲ್ಲಿ ಸ್ಪೀಕರ್‌ ಸ್ಥಾನ ವಿರೋಧಾಭಾಸವಾಗಿದೆ. ಇದು ನಮ್ಮ ಶಾಸನ ರಚನೆ ಸಂಸ್ಥೆಯಾದ ಲೋಕಸಭೆಯ ಹೃದಯ ಭಾಗದಲ್ಲಿರುವ ಅತ್ಯಂತ ಪ್ರತಿಷ್ಠಿತ ಹುದ್ದೆಗಳಲ್ಲಿ ಒಂದಾಗಿದೆ. ಸ್ಪೀಕರ್‌ಗಳು ಪಕ್ಷೇತರರಾಗಿರಬೇಕು. ಸ್ಪೀಕರ್‌ ಹುದ್ದೆಯಲ್ಲಿರುವಾಗ ಪಕ್ಷದ ಸದಸ್ಯತ್ವ ತೊರೆದು ಸಾಂವಿಧಾನಿಕ ಜವಬ್ದಾರಿ ನಿರ್ವಹಿಸುತ್ತಾರೆ. ಹುದ್ದೆಯಿಂದ ಕೆಳಗಿಳಿದ ಬಳಿಕ ಅವರ ರಾಜಕೀಯ ವೃತ್ತಿ ಜೀವನದ ನಿರಂತರತೆಗಾಗಿ ಮತ್ತೆ ತಮ್ಮ ಪಕ್ಷಕ್ಕೆ ಮರಳುತ್ತಾರೆ. ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಸ್ಪೀಕರ್‌ಗೆ ನೀಡಲಾದ ಸಾಂವಿಧಾನಿಕ ಅಧಿಕಾರ ಸರ್ಕಾರ ರಚಿಸುವ ಮತ್ತು ಬೀಳಿಸುವ ಸಾಮರ್ಥ್ಯ ನೀಡುತ್ತದೆ” ಎಂದು ಹೇಳಿದ್ದಾರೆ.

ಲೋಕಸಭೆಯ ಸ್ಪೀಕರ್‌ ಅವರ ಪಕ್ಷಾತೀತತೆಯ ಕೊರತೆಯು ವಿವಾದದ ವಿಷಯವಾಗಿದೆ. ಜಿಎಂಸಿ ಬಾಲಯೋಗಿ (12ನೇ ಮತ್ತು 13ನೇ ಲೋಕಸಭೆ ಸ್ಪೀಕರ್) ಹಲವಾರು ಸಂಸದೀಯ ಸಮಿತಿಗಳ ಅಧ್ಯಕ್ಷರಾಗಿದ್ದರು ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಸ್ಪೀಕರ್ ಹುದ್ದೆಯ ಪಕ್ಷಾತೀತ ಸ್ವರೂಪದ ಹೊರತಾಗಿಯೂ, ಬಾಲಯೋಗಿ ಅವರು ಟಿಡಿಪಿ ನಾಯಕರಾಗಿದ್ದರು, ತಮ್ಮ ಪಕ್ಷದ ಹಿತಾಸಕ್ತಿಗಳನ್ನು ರಕ್ಷಿಸಲು ಉತ್ಸುಕರಾಗಿದ್ದರು.

ಸುಮಾರು 10 ವರ್ಷಗಳ ಹಿಂದೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರು ನಿತೀಶ್ ಅವರ ಜೆಡಿಯು ಜೊತೆಗಿನ ಮಹಾಘಟಬಂಧನ್ (ಮಹಾ ಮೈತ್ರಿ) ಬದ್ಧತೆಯ ಬಗ್ಗೆ ನೀಡಿದ್ದ ಹೇಳಿಕೆ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಈಗ ಸ್ಪೀಕರ್ ಹುದ್ದೆಗೆ ಏಕೆ ಲಾಬಿ ಮಾಡುತ್ತಿರಬಹುದು ಎಂಬುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಸುತ್ತದೆ.

“ನಾವು ನಿಜವಾಗಿಯೂ ಹೆಚ್ಚಿನ ಅಧಿಕಾರಕ್ಕಾಗಿ ಸರ್ಕಾರವನ್ನು ಬೀಳಿಸಲು ಬಯಸಿದ್ದರೆ ಸ್ಪೀಕರ್ ಹುದ್ದೆ ಕೇಳುತ್ತಿದ್ದೆವು” ಎಂದು ಯಾದವ್ ಹೇಳಿದ್ದರು. ಅಂದರೆ, ಇಲ್ಲಿ ಸರ್ಕಾರ ಬೀಳಿಸುವ ಮತ್ತು ರಚಿಸುವ ಅಧಿಕಾರ ಸ್ಪೀಕರ್‌ ಕೈಯ್ಯಲ್ಲಿರುತ್ತದೆ. ಆದ್ದರಿಂದ ಆ ಹುದ್ದೆ ಅಷ್ಟೊಂದು ಮಹತ್ವದ್ದು ಎಂದು ನಮಗೆ ಅರ್ಥವಾಗುತ್ತದೆ.

ಇದನ್ನೂ ಓದಿ : ಮೋದಿ ಸರ್ಕಾರದ 72 ಸಚಿವರಲ್ಲಿ 7 ಮಹಿಳೆಯರಿಗೆ ಅವಕಾಶ; ಇಬ್ಬರಿಗೆ ಮಾತ್ರ ಕ್ಯಾಬಿನೆಟ್ ದರ್ಜೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...