Homeಮುಖಪುಟಎನ್‌ಡಿಎಗೆ ಬಹುಮತವಿದೆ - ಜಗದೀಪ್ ಧಂಖರ್ ವಿರುದ್ಧ ಅವಿಶ್ವಾಸ ಮಂಡನೆಗೆ ಸಚಿವ ಕಿರಣ್ ರಿಜಿಜು ಆಕ್ರೋಶ

ಎನ್‌ಡಿಎಗೆ ಬಹುಮತವಿದೆ – ಜಗದೀಪ್ ಧಂಖರ್ ವಿರುದ್ಧ ಅವಿಶ್ವಾಸ ಮಂಡನೆಗೆ ಸಚಿವ ಕಿರಣ್ ರಿಜಿಜು ಆಕ್ರೋಶ

- Advertisement -
- Advertisement -

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ರಾಜ್ಯಸಭೆಯ ಸ್ಪೀಕರ್, ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿರು ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಆಕ್ರೋಶ ವ್ಯಕ್ತಪಡಿಸಿದ್ದು, “ವಿಪಕ್ಷಗಳು ಪೀಠದ ಘನತೆಗೆ ಅಗೌರವ” ತೋರಿದ್ದಾರೆ ಎಂದು ಹೇಳಿದ್ದಾರೆ. ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ಅಧ್ಯಕ್ಷರ ಅಧಿಕಾರವನ್ನು ಪದೇ ಪದೇ ಕಡೆಗಣಿಸುತ್ತಿವೆ ಎಂದು ರಿಜಿಜು ಆರೋಪಿಸಿದರು, ಮೇಲ್ಮನೆಯಲ್ಲಿ ಎನ್‌ಡಿಎ ಬಹುಮತವನ್ನು ಹೊಂದಿದೆ ಎಂದು ಪ್ರತಿಪಾದಿಸಿದರು. ಎನ್‌ಡಿಎಗೆ ಬಹುಮತವಿದೆ

“ಕಾಂಗ್ರೆಸ್ ಪಕ್ಷ ಮತ್ತು ಅವರ ಮೈತ್ರಿಕೂಟವು ಸ್ಪೀಕರ್ ನಿರ್ದೇಶನವನ್ನು ಅನುಸರಿಸದೆ ನಿರಂತರವಾಗಿ ತಪ್ಪಾಗಿ ವರ್ತಿಸುತ್ತಿದೆ. ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ವಿನಮ್ರ ಹಿನ್ನೆಲೆಯಿಂದ ಬಂದವರು. ಅವರು ರೈತರು ಮತ್ತು ಜನರ ಕಲ್ಯಾಣಕ್ಕಾಗಿ ನಿರಂತರ ಕೆಲಸ ಮಾಡಿದ್ದಾರೆ. ನಾವು ಅವರನ್ನು ಗೌರವಿಸುತ್ತೇವೆ ಮತ್ತು ಅವರ ರೀತಿಯನ್ನು ಸಂತೋಷಪಡುತ್ತೇವೆ. ಅವರು ಸದನಕ್ಕೆ ಮಾರ್ಗದರ್ಶನ ನೀಡುತ್ತಾರೆ’’ ಸಚಿವ ರಿಜಿಜು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವಿಶ್ವಾಸ ನಿರ್ಣಯ ಮಂಡನೆಯ ನೋಟಿಸ್‌ಗೆ ಸಹಿ ಹಾಕಿದ 60 ಸಂಸದರನ್ನು ರಿಜಿಜು ಅವರು ಖಂಡಿಸಿದ್ದು, ಎನ್‌ಡಿಎ ಬಹುಮತ ಹೊಂದಿದ್ದು, ಸಭಾಪತಿ ಮೇಲೆ ನಮಗೆಲ್ಲ ನಂಬಿಕೆ ಇದೆ ಎಂದು ಅವರು ಹೇಳಿದ್ದಾರೆ. ಎನ್‌ಡಿಎಗೆ ಬಹುಮತವಿದೆ

ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಮಂಗಳವಾರ ರಾಜ್ಯಸಭೆಯಲ್ಲಿ ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿದೆ. ರಾಜ್ಯಸಭಾ ಸ್ಪೀಕರ್ ದಂಖರ್ ಅವರು “ಪಕ್ಷಪಾತ” ನಡೆಸುತ್ತಾರೆ ಎಂದು ವಿಪಕ್ಷಗಳು ನೋಟೀಸ್‌ನಲ್ಲಿ ಉಲ್ಲೇಖಿಸಿವೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ (ಟಿಎಂಸಿ), ಆಮ್ ಆದ್ಮಿ ಪಕ್ಷ (ಎಎಪಿ), ಸಮಾಜವಾದಿ ಪಕ್ಷ (ಎಸ್‌ಪಿ), ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಎಡಪಕ್ಷಗಳು ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸೇರಿದಂತೆ ಪಕ್ಷಗಳ 70 ಕ್ಕೂ ಹೆಚ್ಚು ಸಂಸದರು ಇದಕ್ಕೆ ಸಹಿ ಹಾಕಿದ್ದಾರೆ.

ಸಂಸತ್ತಿನ ಚರ್ಚೆಗಳನ್ನು ಧಂಖರ್ ಅವರು “ಅತ್ಯಂತ ಪಕ್ಷಪಾತಿ”ಯಗಿ ನಿಭಾಯಿಸುತ್ತಿದ್ದಾರೆ. ಹಾಗಾಗಿ ಈ ನಿರ್ಣಯವನ್ನು ಮಂಡಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. “ಇಂಡಿಯಾ ಒಕ್ಕೂಟಕ್ಕೆ ಸೇರಿದ ಎಲ್ಲಾ ಪಕ್ಷಗಳಿಗೆ ರಾಜ್ಯಸಭೆಯ ಅಧ್ಯಕ್ಷರ ವಿರುದ್ಧ ಔಪಚಾರಿಕವಾಗಿ ಅವಿಶ್ವಾಸ ನಿರ್ಣಯವನ್ನು ಸಲ್ಲಿಸುವುದನ್ನು ಬಿಟ್ಟು ಬೇರೆ ಆಯ್ಕೆಗಳಿಲ್ಲ” ಎಂದು ರಮೇಶ್ ಎಕ್ಸ್‌ನಲ್ಲಿ ಹೇಳಿದ್ದಾರೆ.

ಧಂಖರ್ ಅವರು ವಿಶೇಷವಾಗಿ ಕಾಂಗ್ರೆಸ್ ಅಧ್ಯಕ್ಷ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣಗಳಿಗೆ ಆಗಾಗ್ಗೆ ಅಡ್ಡಿಪಡಿಸುತ್ತಿದ್ದಾರೆ ಮತ್ತು ನಿರ್ಣಾಯಕ ವಿಷಯಗಳ ಬಗ್ಗೆ ಸಾಕಷ್ಟು ಚರ್ಚೆಯನ್ನು ನಿರಾಕರಿಸುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಖರ್ಗೆ ಅವರ ಭಾಷಣದ ವೇಳೆ ಮೈಕ್ರೊಫೋನ್ ಆಫ್ ಮಾಡಿದ ನಿದರ್ಶನಗಳು ಸೇರಿದಂತೆ ಸಂಸದೀಯ ನಿಯಮಗಳ ಉಲ್ಲಂಘನೆಯನ್ನು ಅವರು ಆರೋಪಿಸಿದ್ದಾರೆ.

ಅಷ್ಟೆ ಅಲ್ಲದೆ, ಧಂಖರ್ ಅವರು ಸದಸ್ಯರ ವಿರುದ್ಧ ವೈಯಕ್ತಿಕ ಟೀಕೆಗಳನ್ನು ಮಾಡುತ್ತಿದ್ದಾರೆ, ಅಂತಹ ನಡವಳಿಕೆಯು ಸಂಸತ್ತಿನ ಸಂಪ್ರದಾಯಗಳನ್ನು ಉಲ್ಲಂಘಿಸುತ್ತದೆ ಮತ್ತು ವಿವಾದಾತ್ಮಕ ಚರ್ಚೆಗಳ ಸಮಯದಲ್ಲಿ ಆಡಳಿತ ಪಕ್ಷದ ಸದಸ್ಯರ ಬಗ್ಗೆ ಅವರು ಒಲವು ಪ್ರದರ್ಶಿಸುತ್ತಾರೆ ಎಂದು ಅವರು ವಾದಿಸಿದ್ದಾರೆ.

ಇದನ್ನೂ ಓದಿ: ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು

ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು

ಇದನ್ನೂ ಓದಿ: ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು

ಇದನ್ನೂ ಓದಿ: ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...