HomeಮುಖಪುಟNDA, INDIA ಯಾವುದೇ ಒಕ್ಕೂಟಕ್ಕೂ ನಾವು ಸೇರಿಲ್ಲ, ಆ ಇಚ್ಛೆಯೂ ನಮಗಿಲ್ಲ: ಕೆಸಿಆರ್

NDA, INDIA ಯಾವುದೇ ಒಕ್ಕೂಟಕ್ಕೂ ನಾವು ಸೇರಿಲ್ಲ, ಆ ಇಚ್ಛೆಯೂ ನಮಗಿಲ್ಲ: ಕೆಸಿಆರ್

- Advertisement -
- Advertisement -

ಆಡಳಿತರೂಢ ಎನ್‌ಡಿಎ  ಮತ್ತು ವಿರೋಧ ಪಕ್ಷಗಳ INDIA ಒಕ್ಕೂಟ ಈ ಎರಡರಲ್ಲಿಯೂ ನಾವಿಲ್ಲ, ಯಾವುದಕ್ಕೂ ಸೇರುವ ಇಚ್ಛೆಯೂ ನಮಗೆ ಇಲ್ಲ ಎಂದು ಭಾರತೀಯ ರಾಷ್ಟ್ರೀಯ ಪಕ್ಷದ (ಬಿಎ‌ಎಸ್) ವರಿಷ್ಠ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಸ್ಪಷ್ಟಣೆ ನೀಡಿದ್ದಾರೆ.

ಈ ವಿಚಾರವಾಗಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿರುವ ಅವರು, ”ಎನ್‌ಡಿಎ ಮತ್ತು INDIA ಯಾವುದೇ ಒಕ್ಕೂಟಕ್ಕೂ, ನಾವು ಸೇರಿಲ್ಲ ಯಾವುದಕ್ಕೂ ಸೇರುವ ಇಚ್ಛೆಯೂ ನಮಗೆ ಇಲ್ಲ. ಹಾಗಂತ ನಾವು ಏಕಾಂಗಿ ಅಲ್ಲ ನಮಗೂ ಗೆಳೆಯರ ಬಳಗ ಇದೆ. ಇಂಡಿಯಾ ಎಂಬ ಹೊಸ ಒಕ್ಕೂಟದಲ್ಲಿ ಏನಿದೆ ವಿಶೇಷ? 50 ವರ್ಷ ಅಧಿಕಾರದಲ್ಲಿದ್ದ ಅವರು ಯಾವುದೇ ಬದಲಾವಣೆ ತರಲಿಲ್ಲ” ಎಂದು ಹೇಳಿದ್ದಾರೆ.

ಇತ್ತೀಚೆಗೆ, ಬೆಂಗಳೂರಿನಲ್ಲಿ ಸಭೆ ಸೇರಿದ ಪ್ರತಿಪಕ್ಷಗಳ ನಾಯಕರು 2024ರ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ವಿರುದ್ಧ ಒಗಟ್ಟಿನ ಹೋರಾಟ ಸಂಘಟಿಸಲು INDIA ಎಂಬ ಒಕ್ಕೂಟ ಘೋಷಣೆ ಮಾಡಿದವು. ಈ ಪ್ರತಿಪಕ್ಷ ನಾಯಕರ ಸಭೆಯಿಂದಲೂ ಬಿಆ‌ಎಸ್‌ ಪಕ್ಷ ದೂರ ಉಳಿದಿತ್ತು.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅಣತಿಯಂತೆ ಬಿಆರ್ ಎಸ್‌ ಕೆಲಸ ಮಾಡುತ್ತದೆ ಬಿಆ‌ರ್‌ಎಸ್‌ ಬಿಜೆಪಿಯ ಬಿ ಟೀಮ್ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು.

ದೆಹಲಿಯಲ್ಲಿ ಇತ್ತೀಚೆಗೆ ಎನ್‌ಡಿಎ ಒಕ್ಕಟದ ಪಕ್ಷಗಳಿಗೆ ಆಹ್ವಾನ ನೀಡಿ ಸಭೆ ಕರೆಯಲಾಗಿತ್ತು. ಆದರೆ ಬಿಆರ್‌ಎಸ್‌ಗೆ ಯಾವುದೇ ಆಹ್ವಾನ ನೀಡಲಾಗಿರಲಿಲ್ಲ ಮತ್ತು ಎನ್‌ಡಿಎ ಸೇರುವ ಬಗ್ಗೆ ಕೆ ಚಂದ್ರಶೇಖರ ರಾವ್ ಒಲವು ತೋರಿರಲಿಲ್ಲ.

ದೆಹಲಿ ಸೇವಾ ಮಸೂದೆ ವಿರುದ್ಧ ಮತ ಚಲಾಯಿಸುವಂತೆ ವಿಪ್ ಜಾರಿ ಮಾಡಿರುವ ಬಿಆರ್‌ಎಸ್

ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯು ಸೋಮವಾರ ತನ್ನ ಎಲ್ಲಾ ರಾಜ್ಯಸಭಾ ಸಂಸದರಿಗೆ ಸದನದಲ್ಲಿ ಹಾಜರಾಗುವಂತೆ ಮತ್ತು ದೆಹಲಿ ಸೇವೆಗಳ ಸುಗ್ರೀವಾಜ್ಞೆ ಮಸೂದೆಯ ವಿರುದ್ಧ ಮತ ಚಲಾಯಿಸುವಂತೆ ವಿಪ್ ಜಾರಿಗೊಳಿಸಿದೆ.

”ಬಿಆರ್‌ಎಸ್ (ರಾಜ್ಯಸಭೆ)ನ ಎಲ್ಲಾ ಸಂಸದರು ದೆಹಲಿ ಸೇವೆಗಳ ಸುಗ್ರೀವಾಜ್ಞೆ ಮಸೂದೆಯನ್ನು ಸದನದ ಮುಂದೆ ಯಾವುದೇ ಸಮಯದಲ್ಲಿ ತರಬಹುದು ಹಾಗಾಗಿ ಪಕ್ಷದ ಎಲ್ಲ ಸದಸ್ಯರು ಅದರ ವಿರುದ್ಧ ಮತ ಚಲಾಯಿಸಲು ವಿನಂತಿಸಲಾಗಿದೆ” ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಮೇಲ್ಮನೆಯಲ್ಲಿ ಬಿಆರ್‌ಎಸ್ ಏಳು ಸಂಸದರನ್ನು ಹೊಂದಿದೆ. ”ಜುಲೈ 31ರಿಂದ ಆಗಸ್ಟ್ 4ರವರೆಗೆ ಮತ್ತು ಮಸೂದೆಯ ಮೇಲಿನ ಮತದಾನ ಮುಗಿಯುವವರೆಗೆ ಅವರೆಲ್ಲರೂ ಸದನದಲ್ಲಿ ಹಾಜರಿರಬೇಕು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದೆಹಲಿಯ NCT ಸರ್ಕಾರ (ತಿದ್ದುಪಡಿ) ಸುಗ್ರೀವಾಜ್ಞೆಯು ದೆಹಲಿ ಸರ್ಕಾರದಿಂದ ಸೇವೆಗಳ ಮೇಲಿನ ನಿಯಂತ್ರಣವನ್ನು ತೆಗೆದುಹಾಕುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: INDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...