Homeಮುಖಪುಟಮಹಾರಾಷ್ಟ್ರ: ಎನ್‌ಡಿಎ ಬಣದಲ್ಲಿ ಬಿರುಕು

ಮಹಾರಾಷ್ಟ್ರ: ಎನ್‌ಡಿಎ ಬಣದಲ್ಲಿ ಬಿರುಕು

- Advertisement -
- Advertisement -

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಮಹಾರಾಷ್ಟ್ರದಲ್ಲಿ ಐದು ಹಂತಗಳಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ-ಶಿವಸೇನಾ(ಶಿಂಧೆ ಬಣ) ಎನ್‌ಸಿಪಿ(ಅಜಿತ್‌ ಪವಾರ್‌ ಬಣ) ಮಹಾ ಮೈತ್ರಿಕೂಟದ ಸೀಟು ಹಂಚಿಕೆ ಪ್ರಕ್ರಿಯೆ ಕಗ್ಗಂಟಾಗಿದೆ. ಮೂಲಗಳ ಪ್ರಕಾರ, ಬಾರಾಮತಿ, ಮಾಧಾ ಮತ್ತು ಸತಾರಾ ಎಂಬ ಮೂರು ಕ್ಷೇತ್ರಗಳಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಮೈತ್ರಿ ಪಕ್ಷಗಳಲ್ಲಿ ಒಮ್ಮತ ಮೂಡಿ ಬಂದಿಲ್ಲ ಎಂದು ಹೇಳಲಾಗಿದ್ದು, ಎನ್‌ಡಿಎ ಮೈತ್ರಿಯಲ್ಲಿ ಬಿರುಕು ಉಂಟಾಗಿದೆ.

ಮಹಾರಾಷ್ಟ್ರದ ಆಡಳಿತಾರೂಢ ಮೈತ್ರಿಕೂಟದಲ್ಲಿ ಬಿಜೆಪಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಇವೆ. ಬಿಜೆಪಿಯ ಮಹಾರಾಷ್ಟ್ರದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸತಾರಾ ಕ್ಷೇತ್ರದಿಂದ ಬಿಜೆಪಿ ಸಂಸದ ಉದಯರಾಜೇ ಭೋಸಲೆ ಅವರಿಗೆ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಅವರ ಬೆಂಬಲಿಗರು ಅಸಮಾಧಾನಗೊಂಡಿದ್ದಾರೆ. ಸೀಟು ಹಂಚಿಕೆ ಬಿಕ್ಕಟ್ಟಿನಿಂದಾಗಿ ಮಾಧಾ ಮತ್ತು ಸತಾರಾದಲ್ಲಿ ಬಿಜೆಪಿ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.  ಮಾಧಾದಲ್ಲಿ ಹಿರಿಯ ನಾಯಕರಾದ ಬಿಜೆಪಿಯ ವಿಜಯಸಿಂಹ ಮೋಹಿತೆ ಪಾಟೀಲ್ ಮತ್ತು ಎನ್‌ಸಿಪಿಯ ಅಜಿತ್ ಬಣದ ರಾಮರಾಜೆ ನಿಂಬಾಳ್ಕರ್ ಅವರು ಬಿಜೆಪಿಯ ರಂಜಿತ್‌ಸಿನ್ಹ ನಾಯಕ್ ನಿಂಬಾಳ್ಕರ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದರಿಂದ ಅಸಮಾಧಾನಗೊಂಡಿದ್ದಾರೆ.

ಮಾಧಾ ಮತ್ತು ಸತಾರಾ ಕ್ಷೇತ್ರಗಳಲ್ಲಿ ಭಾನುವಾರ ಬಂಡಾಯವೆದ್ದ ನಾಯಕರು ಮತ್ತು ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಲು ಬಿಜೆಪಿ ಹೈಕಮಾಂಡ್‌ ಸಚಿವ ಗಿರೀಶ್ ಮಹಾಜನ್ ಅವರನ್ನು ಕಳುಹಿಸಿದೆ, ಸಚಿವರ ಬೆಂಗಾವಲು ಪಡೆ ವಾಹನವನ್ನು ತಡೆದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸತಾರಾದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಅಲ್ಲಿನ ಪರಿಸ್ಥಿತಿಯನ್ನು ಅವರು ಅವಲೋಕಿಸಿದ್ದಾರೆ. ಮಹಾಮೈತ್ರಿ ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿ ನಡುವೆ ಕೆಲವು ಭಿನ್ನಾಭಿಪ್ರಾಯಗಳಿವೆ ಎಂದು ಮಹಾಜನ್ ಸ್ಪಷ್ಟಪಡಿಸಿದ್ದಾರೆ. ಪ್ರತಿಯೊಬ್ಬರೂ ತಮ್ಮ ಕ್ಷೇತ್ರದಿಂದ ತಮ್ಮ ನಾಯಕನನ್ನು ಕಣಕ್ಕಿಳಿಸಬೇಕು ಎಂದು ಬಯಸುತ್ತಾರೆ. ಆದ್ದರಿಂದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನಾಯಕರೊಂದಿಗೆ ಚರ್ಚಿಸಲು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಲು ನನ್ನನ್ನು ಕಳುಹಿಸಿದ್ದಾರೆ ಎಂದು ಮಹಾಜನ್ ಹೇಳಿದ್ದಾರೆ.

ಬಾರಾಮತಿಯು ಶಿವಸೇನೆ ಮತ್ತು ಎನ್‌ಸಿಪಿ ನಡುವೆ ಸೀಟು ಹಂಚಿಕೆ ಬಿಕ್ಕಟ್ಟಿಗೆ ಕಾರಣವಾದ ಮತ್ತೊಂದು ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್‌ಗೆ ಟಿಕೆಟ್‌ ಘೋಷಣೆ ಸಾಧ್ಯತೆ ಇದ್ದು, ಮಾಜಿ ಸಚಿವ ಮತ್ತು ಶಿಂಧೆ ಸೇನೆಯ ನಾಯಕ ವಿಜಯ್ ಶಿವತಾರೆ ಕ್ಷೇತ್ರದಲ್ಲಿ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸೋಮವಾರ ಶಿವತಾರೆ ಅವರನ್ನು ಭಿನ್ನಾಭಿಪ್ರಾಯ ಶಮನಕ್ಕೆ ಕರೆದಿದ್ದಾರೆ. ಶಿಂಧೆ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ನನ್ನ ಅಂತಿಮ ನಿರ್ಧಾರವನ್ನು ಕೈಗೊಳ್ಳುವುದಾಗಿ ಶಿವತಾರೆ ಹೇಳಿದ್ದಾರೆ.

ಈ ಮಧ್ಯೆ ಮಹಾರಾಷ್ಟ್ರದ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಅವರು ಆಡಳಿತಾರೂಢ ಮೈತ್ರಿಕೂಟವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಿತ್ರಪಕ್ಷಗಳೊಂದಿಗೆ ಒಮ್ಮತವನ್ನು ಸಾಧಿಸುವುದು ಎಷ್ಟು ಕಷ್ಟ ಎಂದು ಅವರು ಅರ್ಥಮಾಡಿಕೊಳ್ಳುತ್ತಾರೆ ಎಂದು ಪಟೋಲೆ ಪ್ರಶ್ನಿಸಿದ್ದಾರೆ.

ಏಕನಾಥ್ ಶಿಂಧೆ ಆಡಳಿತಾರೂಢ ಮೈತ್ರಿಕೂಟದಲ್ಲಿ ಬಿರುಕನ್ನು ತಳ್ಳಿ ಹಾಕಿದ್ದಾರೆ. ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಗಳಿಗಾಗಿ ಜನರು ಸರ್ಕಾರಕ್ಕೆ ಮತ ಹಾಕುತ್ತಾರೆ ಮತ್ತು ಮಹಾರಾಷ್ಟ್ರದಲ್ಲಿ 45ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...