Homeಮುಖಪುಟರಾಜ್ಯಸಭೆಯಲ್ಲಿ 101ಕ್ಕೆ ಕುಸಿದ ಎನ್‌ಡಿಎ ಸಂಖ್ಯೆ; ಮೇಲ್ಮನೆಯಲ್ಲಿ ಬಹುಮತ ಕಳೆದುಕೊಂಡ ಆಡಳಿತಪಕ್ಷ

ರಾಜ್ಯಸಭೆಯಲ್ಲಿ 101ಕ್ಕೆ ಕುಸಿದ ಎನ್‌ಡಿಎ ಸಂಖ್ಯೆ; ಮೇಲ್ಮನೆಯಲ್ಲಿ ಬಹುಮತ ಕಳೆದುಕೊಂಡ ಆಡಳಿತಪಕ್ಷ

- Advertisement -
- Advertisement -

ನಾಮನಿರ್ದೇಶಿತ ಸದಸ್ಯರಾದ ರಾಕೇಶ್ ಸಿನ್ಹಾ, ರಾಮ್ ಶಕಲ್, ಸೋನಾಲ್ ಮಾನ್ಸಿಂಗ್ ಮತ್ತು ಮಹೇಶ್ ಜೇಠ್ಮಲಾನಿ ತಮ್ಮ ಅವಧಿಯನ್ನು ಪೂರ್ಣಗೊಂಡ ನಂತರ, ರಾಜ್ಯಸಭೆಯಲ್ಲಿ ಬಿಜೆಪಿಯ ಬಲವು ಬಹುಮತಕ್ಕಿಂತ ಕಡಿಮೆಯಾಗಿದೆ.

ನಿವೃತ್ತರಾದ ಎಲ್ಲ ನಾಲ್ವರನ್ನು ಆಡಳಿತ ಪಕ್ಷದ ಸಲಹೆಯ ಮೇರೆಗೆ ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಸದಸ್ಯರಾಗಿ ಆಯ್ಕೆ ಮಾಡಿದ್ದರು; ನಂತರ ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದೊಂದಿಗೆ ಅವರು ಮೈತ್ರಿ ಮಾಡಿಕೊಂಡರು.

ಅವರ ನಿವೃತ್ತಿಯು ಬಿಜೆಪಿಯ ಬಲವನ್ನು 86ಕ್ಕೆ ಮತ್ತು ಪಕ್ಷದ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಬಲವನ್ನು 101ಕ್ಕೆ ಇಳಿಸುತ್ತದೆ. ಇದು 245 ಸದಸ್ಯರ ಸದನದಲ್ಲಿ ಪ್ರಸ್ತುತ ಬಹುಮತದ 113 ಕ್ಕಿಂತ ಕಡಿಮೆಯಾಗಿದೆ.

ರಾಜ್ಯಸಭೆಯ ಪ್ರಸ್ತುತ ಸಂಖ್ಯಾಬಲ 225

ಕಾಂಗ್ರೆಸ್ ನೇತೃತ್ವದ ಇಂಡಿಯಾ ಬಣವು 87, ಅದರಲ್ಲಿ ಕಾಂಗ್ರೆಸ್ 26, ಬಂಗಾಳದ ಆಡಳಿತಾರೂಢ ತೃಣಮೂಲ 13, ದೆಹಲಿ ಮತ್ತು ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಮತ್ತು ಡಿಎಂಕೆ ತಲಾ 10 ಸದಸ್ಯರನ್ನು ಹೊಂದಿದೆ.

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಬಿಆರ್‌ಎಸ್‌ನಂತಹ ಬಿಜೆಪಿ ಅಥವಾ ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದ ಪಕ್ಷಗಳು ನಾಮನಿರ್ದೇಶಿತ ಸಂಸದರು ಮತ್ತು ಸ್ವತಂತ್ರ ಸದಸ್ಯರುದ್ದಾರೆ.

ಸಂಖ್ಯೆ ಕಡಿಮೆಯಿಂದ ಬಿಜೆಪಿ ಮೇಲಿನ ಪರಿಣಾಮವೇನು?

ಇದರರ್ಥ ಸರ್ಕಾರವು ಈಗ ಎನ್‌ಡಿಎಯೇತರ ಪಕ್ಷಗಳ ಮೇಲೆ ಅವಲಂಬಿತವಾಗಿದೆ; ಮೇಲ್ಮನೆಯಲ್ಲಿ ಮಸೂದೆಗಳನ್ನು ಅಂಗೀಕರಿಸಲು ತಮಿಳುನಾಡಿನ ಮಾಜಿ ಮಿತ್ರಪಕ್ಷ ಎಐಎಡಿಎಂಕೆ ಮತ್ತು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ ಪಕ್ಷಗಳ ಮೇಲೆ ಅವಲಂಬಿತವಾಗಬೇಕಿದೆ. ಸದ್ಯಕ್ಕೆ, ಎನ್‌ಡಿಎ ಪಕ್ಷಗಳ ಸಂಸದರ 15 ಮತಗಳನ್ನು ಬಿಜೆಪಿ ಪಡೆದುಕೊಳ್ಳಬಹುದು ಎಂದು ಭಾವಿಸಿದರೆ, ಮಸೂದೆಗಳನ್ನು ಜಾರಿಗೆ ತರಲು ಅದರ ಪರವಾಗಿ ಕನಿಷ್ಠ 13 ಹೆಚ್ಚುವರಿ ಮತಗಳು ಬೇಕಾಗುತ್ತವೆ.

ವೈಎಸ್‌ಆರ್‌ಸಿಪಿ (11) ಮತ್ತು ಎಐಎಡಿಎಂಕೆ (4) ಬಿಜೆಪಿಯ ಎರಡು ಸ್ಪಷ್ಟವಾದ ‘ಮಿತ್ರಪಕ್ಷಗಳು’, ಚುನಾವಣೆಗೆ ತಿಂಗಳುಗಳ ಮೊದಲು ಕಳೆದ ವರ್ಷ ಡಿಸೆಂಬರ್‌ನಲ್ಲಿ ವಿಭಜನೆಯಾದಾಗಿನಿಂದ ಅದರ ಸಂಬಂಧವು ಹದಗೆಟ್ಟಿದೆ.

ಜಗನ್ ಮೋಹನ್ ರೆಡ್ಡಿಯವರ ವೈಎಸ್‌ಆರ್‌ಸಿಪಿಯು ಈ ಹಿಂದೆ ಬಿಜೆಪಿಗೆ ವಿಷಯಾಧಾರಿತ ಬೆಂಬಲವನ್ನು ನೀಡಿದೆ. ಆದ್ದರಿಂದ, ಮೋದಿಯವರ ಪಕ್ಷಕ್ಕೆ ಕನಿಷ್ಠ 11 ಮತಗಳು ಖಚಿತವೆಂದು ತೋರುತ್ತದೆ. ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಬಿಜೆಡಿ ಕೂಡ ಇದೇ ರೀತಿಯ ಬೆಂಬಲವನ್ನು ನೀಡಿತ್ತು. ಆದರೆ, ಮೇ-ಜೂನ್ ರಾಜ್ಯ ಚುನಾವಣೆಯಲ್ಲಿ ಬಿಜೆಪಿಯಿಂದ ಸೋಲಿಸಲ್ಪಟ್ಟಿದ್ದರಿಂದ ಬಿಜೆಪಿಯಿಂದ ದೂರ ಸರಿದಿದೆ.

ಎಐಎಡಿಎಂಕೆ ಬೆಂಬಲ ನೀಡಲು ಇಷ್ಟವಿಲ್ಲದಿದ್ದರೆ ಮತ್ತು ನವೀನ್ ಪಟ್ನಾಯಕ್ ಅವರ ಬಿಜೆಡಿ ತಿರುಗಿ ಬಿದ್ದರೆ, ಬಿಜೆಪಿ ನಾಮನಿರ್ದೇಶಿತ ಸದಸ್ಯರ ಮತಗಳತ್ತ ತಿರುಗುತ್ತದೆ. ರಾಜ್ಯಸಭೆಯಲ್ಲಿ ಒಟ್ಟು 12 ನಾಮನಿರ್ದೇಶಿತ ಸದಸ್ಯರಿದ್ದಾರೆ. ಅವರು ಪಕ್ಷೇತರರಾದರೂಸರ್ಕಾರದಿಂದ ಆಯ್ಕೆಯಾಗಿರುವುದರಿಂದ, ಪ್ರಾಯೋಗಿಕವಾಗಿ ಅವರು ಆಡಳಿತ ಪಕ್ಷವನ್ನು ಬೆಂಬಲಿಸುತ್ತಾರೆ.

ನಾಲ್ವರು ಸಂಸದರನ್ನು ಹೊಂದಿರುವ ಬಿಆರ್‌ಎಸ್‌ನಂತಹ ಅಲಿಪ್ತ ಪಕ್ಷಗಳು ಮತ್ತು ಸ್ವತಂತ್ರರು ಸಹ ಬಿಜೆಪಿ ಜತೆಗೆ ಕೈಜೋಡಿಸಬಹುದು.

ರಾಜ್ಯಸಭೆಯ ಖಾಲಿ ಸ್ಥಾನಗಳೆಷ್ಟು?

ಪ್ರಸ್ತುತ ಒಟ್ಟು 20 ಸ್ಥಾನಗಳು ಖಾಲಿ ಇವೆ, ಇದರಲ್ಲಿ ಚುನಾಯಿತ ಸದಸ್ಯರು ಹೊಂದಿರುವ 11 ಸ್ಥಾನಗಳಿಗೆ ಈ ವರ್ಷ ಚುನಾವಣೆ ನಿರೀಕ್ಷಿಸಲಾಗಿದೆ. ಇವುಗಳಲ್ಲಿ ಮಹಾರಾಷ್ಟ್ರ, ಅಸ್ಸಾಂ ಮತ್ತು ಬಿಹಾರದಲ್ಲಿ ತಲಾ ಎರಡು ಮತ್ತು ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ತ್ರಿಪುರದಲ್ಲಿ ತಲಾ ಒಂದು ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ.

ಬಿಜೆಪಿ ನೇತೃತ್ವದ ಮೈತ್ರಿಕೂಟವು ಅಸ್ಸಾಂ, ಬಿಹಾರ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತ್ರಿಪುರಾದಿಂದ ಏಳು ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಅದು ಮಹಾರಾಷ್ಟ್ರದಲ್ಲಿ ತನ್ನ ಮತಗಳನ್ನುಕ್ರೋಢೀಕರಿಸಲು ಸಾಧ್ಯವಾದರೆ, ಅದು ಅಲ್ಲಿಂದ ಇನ್ನೆರಡು ಸ್ಥಾನಗಳನ್ನು ಗೆಲ್ಲುತ್ತದೆ.

ಇದು ಬಿಜೆಪಿಗೆ ಒಂಬತ್ತು ಹೆಚ್ಚುವರಿ ಸ್ಥಾನಗಳನ್ನು ನೀಡಬಹುದು. ಅದು ಗೆದ್ದರೆ, ನಾಮನಿರ್ದೇಶಿತ ಸದಸ್ಯರ ಮತಗಳು ಮತ್ತು ವೈಎಸ್‌ಆರ್‌ಸಿಪಿಯ ಮತಗಳೊಂದಿಗೆ, ಅದು ಬಹುಮತದ ಅಂಕಿಯನ್ನು ದಾಟಲು ಸಾಧ್ಯವಾಗುತ್ತದೆ.

ಜಮ್ಮು ಮತ್ತು ಕಾಶ್ಮೀರದಿಂದ ನಾಲ್ಕು ಸ್ಥಾನಗಳು ಖಾಲಿಯಿದ್ದು, ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಸೆಪ್ಟೆಂಬರ್ 30 ರೊಳಗೆ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಕಳೆದ ವರ್ಷ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ತೆಲಂಗಾಣ ಕ್ಷೇತ್ರವನ್ನು ಗೆಲ್ಲುವ ಸಾಧ್ಯತೆಯಿದೆ.

ಈ ಚುನಾವಣೆಯು ನಿರ್ಣಾಯಕವಾಗಿದೆ. ಏಕೆಂದರೆ, ಇದು ಪಕ್ಷಕ್ಕೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಸಾಕಷ್ಟು ಮತಗಳನ್ನು ನೀಡುತ್ತದೆ. ನಂತರ ಉಭಯ ಸದನಗಳಲ್ಲಿ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನವನ್ನು ಹಿಡಿಯಲಿದೆ.

ಇದನ್ನೂ ಓದಿ; ‘ರಾಜಕೀಯ ಎಂದಿಗೂ ಅಕ್ಷರಶಃ ಯುದ್ಧಭೂಮಿಯಾಗಬಾರದು..’; ಟ್ರಂಪ್ ಹತ್ಯೆ ಪ್ರಯತ್ನದ ಕುರಿತು ಬಿಡೆನ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...