Homeಆರೋಗ್ಯಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಎನ್‌ಡಿಎಚ್‌ಎಂ ಅಡಿಯಲ್ಲಿ ಜನರಿಂದ ಸಂಗ್ರಹಿಸಲಾದ ಗೌಪ್ಯ ಆರೋಗ್ಯ ದತ್ತಾಂಶವನ್ನು ಕಾಪಾಡಲು, ದತ್ತಾಂಶ ಗೌಪ್ಯತೆ ಸಂರಕ್ಷಣೆಗಾಗಿ ಮಂಡಳಿ ಅನ್ವಯವಾಗುವ ಕಾನೂನು ಮತ್ತು ಕನಿಷ್ಠ ಮಾನದಂಡಗಳನ್ನು ಅನುಸರಿಸಬೇಕು ಎಂದು ಸರ್ಕಾರ ತಿಳಿಸಿದೆ.

- Advertisement -
- Advertisement -

ಕೇಂದ್ರದ ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಅಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಪಡೆಯಲು ಶೇಕಡಾ 60 ರಷ್ಟು ಜನರು ಒಲವು ತೋರಿದ್ದಾರೆ ಎಂದು ಸರ್ವೆ ತಿಳಿಸಿದೆ. ಆದರೆ ಆರೋಗ್ಯ ಮತ್ತು ವೈದ್ಯಕೀಯ ದಾಖಲೆಗಳನ್ನು ಬಿಟ್ಟು ಸೂಕ್ಷ್ಮವಾದ ವೈಯಕ್ತಿಕ ಡೇಟಾವನ್ನು ಹಂಚಿಕೊಳ್ಳಲು ಬಯಸುವುದಿಲ್ಲ ಎಂದು ಇತ್ತೀಚಿನ ಸಮೀಕ್ಷೆಯೊಂದು ತಿಳಿಸಿದೆ.

ಮಹತ್ವಾಕಾಂಕ್ಷೆಯ ಎನ್‌ಡಿಎಚ್‌ಎಂ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಘೋಷಿಸಿದ್ದರು.

ಸಮುದಾಯ ಸಾಮಾಜಿಕ ಮಾಧ್ಯಮ ವೇದಿಕೆಯಾದ ಲೋಕಲ್ ಸರ್ಕಲ್ಸ್ ಈ ಸಮೀಕ್ಷೆಯನ್ನು ನಡೆಸಿದ್ದು, ಇದರಲ್ಲಿ ಡಿಜಿಟಲ್ ಹೆಲ್ತ್ ಐಡಿ ರಚಿಸಬೇಕೆ ಎಂಬ ಪ್ರಶ್ನೆಗೆ ಸುಮಾರು 9,000 ಜನರು ಪ್ರತಿಕ್ರಿಯಿಸಿದ್ದಾರೆ. ಇದರ ಪ್ರಕಾರ ಶೇಕಡಾ 59 ರಷ್ಟು ಜನರು ಡಿಜಿಟಲ್ ಹೆಲ್ತ್ ಮಿಷನ್ ಕಾರ್ಯಕ್ರಮದಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಪಡೆಯಲು ಬಯಸಿದ್ದಾರೆ. ಶೇಕಡಾ 23 ಪ್ರತಿಶತದಷ್ಟು ಜನರು ಆರೋಗ್ಯ ID ಯನ್ನು ರಚಿಸಲು ಬೆಂಬಲಿಸಿದ್ದಾರೆ. ಶೇಕಡಾ 18 ರಷ್ಟು ಜನರು ಇದನ್ನು ರಚಿಸಬಾರದು ಎಂದಿದ್ದಾರೆ.

ಇದನ್ನೂ ಓದಿ: ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ಎಲ್ಲಾ ಭಾರತೀಯರಿಗಾಗಿ ಡಿಜಿಟಲ್ ಹೆಲ್ತ್ ಐಡಿಗಳನ್ನು ರಚಿಸಲು ಪ್ರಸ್ತಾಪಿಸಿರುವ ರಾಷ್ಟ್ರೀಯ ಆರೋಗ್ಯ ದತ್ತಾಂಶ ನಿರ್ವಹಣಾ ನೀತಿಗೆ ಸಂಬಂಧಿಸಿ ಲೋಕಲ್ ಸರ್ಕಲ್ಸ್ ನೀಡಿದ್ದ ನಾಲ್ಕು ಪ್ರಶ್ನೆಗಳಿಗೆ ಸುಮಾರು 34,000 ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ.

ಇನ್ನು ಡಿಜಿಟಲ್ ಹೆಲ್ತ್ ಐಡಿ ಡೇಟಾವನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸಬೇಕು ಎಂಬ ಪ್ರಶ್ನೆಗೆ ಸುಮಾರು 8,600 ಪ್ರತಿಕ್ರಿಯೆಗಳು ಬಂದಿದ್ದು,  ಇದರಲ್ಲಿ ಶೇಕಡಾ 57 ರಷ್ಟು ಜನರು ಡೇಟಾ ಸಂಗ್ರಹಣೆಯನ್ನು ಆರೋಗ್ಯ ಮಾಹಿತಿಗಾಗಿ ಮಾತ್ರ ಮಾಡಬೇಕು ಮತ್ತು ಅದು ಕೇಂದ್ರ ಮಟ್ಟದಲ್ಲಿ ಮಾಡಬೇಕು ಎಂದು ಹೇಳಿದ್ದಾರೆ.

ಸಮೀಕ್ಷೆಯ ಫಲಿತಾಂಶಗಳನ್ನು ಕೇಂದ್ರದ ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಅಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಮಾಡುವವರಿಗೆ ಸಲ್ಲಿಸಲಾಗುವುದು. ಇದರಿಂದ ಜನರ ಅಭಿಪ್ರಾಯ ಸರ್ಕಾರಕ್ಕೆ ತಲುಪಲಿದೆ ಎನ್ನುತ್ತಾರೆ ಲೋಕಲ್ ಸರ್ಕಲ್ಸ್‌ನ ಜನರಲ್ ಮ್ಯಾನೇಜರ್ ಅಕ್ಷಯ್ ಗುಪ್ತಾ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ : ಪ್ರೊ.ಪಾರ್ಥೋಸಾರಥಿ ರಾಯ್ ಗೆ NIA ನೋಟೀಸ್

ವ್ಯಕ್ತಿಯ ವೈಯಕ್ತಿಕ ಡೇಟಾವನ್ನು ಆತನ ಒಪ್ಪಿಗೆಯ ಮೇರೆಗೆ ಮಾತ್ರ ಸಂಗ್ರಹಿಸಬಹುದು. ಎನ್‌ಡಿಎಚ್‌ಎಂ ಅಡಿಯಲ್ಲಿ ಜನರಿಂದ ಸಂಗ್ರಹಿಸಲಾದ ಗೌಪ್ಯ ಆರೋಗ್ಯ ದತ್ತಾಂಶವನ್ನು ಕಾಪಾಡಲು, ದತ್ತಾಂಶ ಗೌಪ್ಯತೆ ಸಂರಕ್ಷಣೆಗಾಗಿ ಮಂಡಳಿ ಅನ್ವಯವಾಗುವ ಕಾನೂನು ಮತ್ತು ಕನಿಷ್ಠ ಮಾನದಂಡಗಳನ್ನು ಅನುಸರಿಸಬೇಕು ಎಂದು ಸರ್ಕಾರ ತಿಳಿಸಿದೆ.

ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ), ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ ಅನುಷ್ಠಾನದ ಜವಾಬ್ದಾರಿಯನ್ನು ಹೊಂದಿದೆ. ಜೊತೆಗೆ ದೇಶದಲ್ಲಿ ಎನ್‌ಡಿಎಚ್‌ಎಂ ವಿನ್ಯಾಸಗೊಳಿಸಲು ಅದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದೆ.

ಸರ್ಕಾರದ ಪ್ರಸ್ತಾವನೆ ಪ್ರಕಾರ, ಎನ್‌ಡಿಎಚ್‌ಎಂಗಾಗಿ ದಾಖಲಾದ ಪ್ರತಿಯೊಬ್ಬರೂ ಆರೋಗ್ಯ ಐಡಿಯನ್ನು ಉಚಿತವಾಗಿ ಪಡೆಯುತ್ತಾರೆ ಮತ್ತು ತಮ್ಮ ವೈಯಕ್ತಿಕ ಡೇಟಾದ ಮೇಲೆ ಸಂಪೂರ್ಣ ನಿಯಂತ್ರಣವನ್ನು ಹೊಂದಿರುತ್ತಾರೆ ಎಂದು ತಿಳಿಸಲಾಗಿದೆ.

ಸಾರ್ವಜನಿಕರಿಂದ ಪ್ರತಿಕ್ರಿಯೆಗಳು ಮತ್ತು ಪ್ರತಿಕ್ರಿಯೆಗಳನ್ನು ಕೋರಿ ಈ ದಾಖಲೆಯನ್ನು ಎನ್‌ಡಿಎಚ್‌ಎಂನ ಅಧಿಕೃತ ವೆಬ್‌ಸೈಟ್‌ನಲ್ಲಿ ಇರಿಸಲಾಗಿದೆ. ಸಲಹೆ, ಸೂಚನೆಗಳನ್ನು ನೀಡಲು ಸೆಪ್ಟೆಂಬರ್ 21 ರವರೆಗೆ ಸಮಯ ನೀಡಿದೆ.


ಇದನ್ನೂ ಓದಿ: ಇದಕ್ಕೊಂದು ತಲೆಬರಹ ನೀಡುವಿರಾ? -ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...