Homeಮುಖಪುಟಪ್ಯಾಲೆಸ್ತೀನ್‌ ಪರ ಪ್ರತಿಭಟನೆ: ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಬಂಧನ

ಪ್ಯಾಲೆಸ್ತೀನ್‌ ಪರ ಪ್ರತಿಭಟನೆ: ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಬಂಧನ

- Advertisement -
- Advertisement -

ಪ್ಯಾಲೆಸ್ತೀನ್‌ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ ಆರೋಪದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಅಚಿಂತ್ಯ ಶಿವಲಿಂಗಂ ಅವರನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ.

ಪ್ರಿನ್ಸ್ ಟನ್ ವಿಶ್ವವಿದ್ಯಾನಿಲಯದ ಆವರಣದಲ್ಲಿ ವಿದ್ಯಾರ್ಥಿಗಳ ನೇತೃತ್ವದ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಭಾರತೀಯ ಮೂಲದ ವಿದ್ಯಾರ್ಥಿನಿ ಅಚಿಂತ್ಯ ಶಿವಲಿಂಗಂ ಅವರನ್ನು ಬಂಧಿಸಲಾಗಿದ್ದು, ಆಕೆಯನ್ನು ಯುಎಸ್‌ನ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಉಚ್ಛಾಟಿಸಲಾಗಿದೆ.

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡದ ವಿರುದ್ಧ ಯುಎಸ್‌ನಾದ್ಯಂತದ ಪ್ರಮುಖ ವಿಶ್ವವಿದ್ಯಾನಿಲಯಗಳಲ್ಲಿ ನಿರಂತರ ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯೆ ಈ ಬೆಳವಣಿಗೆ ನಡೆದಿದೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ ಹುಟ್ಟಿ ಓಹಿಯೋದ ಕೊಲಂಬಸ್‌ನಲ್ಲಿ ಬೆಳೆದ ಶಿವಲಿಂಗಂ ಮತ್ತು ಇನ್ನೋರ್ವ ಸಹ ವಿದ್ಯಾರ್ಥಿ ಹಸನ್ ಸೈಯದ್ ಅವರನ್ನು ಬಂಧಿಸಲಾಗಿದೆ ಎಂದು ಪ್ರಿನ್ಸ್‌ಟನ್ ಅಲುಮ್ನಿ ವೀಕ್ಲಿ ವರದಿ ಮಾಡಿದೆ.

ಗುರುವಾರ ಬೆಳಿಗ್ಗೆ ವಿದ್ಯಾರ್ಥಿಗಳು  ಪ್ರಿನ್ಸ್ ಟನ್ ವಿವಿಯ ಮೆಕ್‍ಗೋಶ್ ಅಂಗಳದಲ್ಲಿ  ವಿವಿ ಅಧಿಕಾರಿಗಳ  ಎಚ್ಚರಿಕೆಯ ಹೊರತಾಗಿಯೂ ಪ್ರತಿಭಟನೆಗೆ ಟೆಂಟ್‌ಗಳನ್ನು ಸ್ಥಾಪಿಸಿದ್ದರು. ಇದಾದ ಕೆಲವೇ ನಿಮಿಷಗಳಲ್ಲಿ  ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಬಳಿಕ ಪ್ರತಿಭಟನಾಕಾರರು ತಮ್ಮ ಡೇರೆಗಳನ್ನು ತೆರವುಗೊಳಿಸಿದರೂ, ಧರಣಿ ಮುಂದುವರಿಸಲಾಗಿದೆ ಎನ್ನಲಾಗಿದೆ.

ಆರಂಭದಲ್ಲಿ ಸುಮಾರು 110 ಜನರ ಗುಂಪು ಪ್ರತಿಭಟನೆಯಲ್ಲಿ ಭಾಗಿಯಾಗಿತ್ತು. ಗುರುವಾರ ಮಧ್ಯಾಹ್ನದ ವೇಳೆಗೆ ಪ್ರತಿಭಟನಾಕಾರರ ಸಂಖ್ಯೆ 300ಕ್ಕೇರಿತ್ತು. ಭಾರತೀಯ ವಿದ್ಯಾರ್ಥಿಯ ಬಂಧನವನ್ನು ದೃಢಪಡಿಸಿರುವ ವಿವಿ ವಕ್ತಾರರಾದ ಜೆನ್ನಿಫರ್ ಮೊರಿಲ್, ಪ್ರತಿಭಟನೆ ನಿಲ್ಲಿಸಿ ಜಾಗ ತೆರವುಗೊಳಿಸುವಂತೆ ಸಾರ್ವಜನಿಕ ಸುರಕ್ಷಾ ವಿಭಾಗ ಪದೇ ಪದೇ ಎಚ್ಚರಿಕೆ ನೀಡಿದ ಬಳಿಕವೂ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಅವರನ್ನು ತಕ್ಷಣಕ್ಕೆ ಕಾಲೇಜಿನಿಂದ ವಜಾಗೊಳಿಸಲಾಗಿದ್ದು, ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಬೇಕಿದೆ. ಬಂಧನದ ವೇಳೆ ಸಾರ್ವಜನಿಕ ಸುರಕ್ಷತಾ ಅಧಿಕಾರಿಗಳು ಯಾವುದೇ ಬಲ ಪ್ರಯೋಗವನ್ನು ನಡೆಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಾರ ನ್ಯೂಯಾರ್ಕ್‌ನ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ 100ಕ್ಕೂ ಹೆಚ್ಚು ಜನರನ್ನು ಬಂಧಿಸಿದ ನಂತರ ಹಾರ್ವರ್ಡ್ ಮತ್ತು ಯೇಲ್ ಸೇರಿದಂತೆ ಯುಎಸ್‌ನಾದ್ಯಂತದ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ. ರಾಯಿಟರ್ಸ್ ಸುದ್ದಿ ಸಂಸ್ಥೆಯ ಲೆಕ್ಕಾಚಾರದ ಪ್ರಕಾರ, ಕಳೆದ ಒಂದು ವಾರದಲ್ಲಿ ಸುಮಾರು 550 ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಗುರುವಾರವೊಂದರಲ್ಲೇ ಕನಿಷ್ಠ 61 ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

ಇದನ್ನು ಓದಿ: ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ನಗದು ವಶ: ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್‌ ವಿರುದ್ಧ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...