Homeಅಂತರಾಷ್ಟ್ರೀಯಸಿರಿಯಾದಲ್ಲಿರುವ ಎಲ್ಲಾ ಭಾರತೀಯರು ಸುರಕ್ಷಿತ: ಅಧಿಕಾರಿಗಳ ಸ್ಪಷ್ಟನೆ

ಸಿರಿಯಾದಲ್ಲಿರುವ ಎಲ್ಲಾ ಭಾರತೀಯರು ಸುರಕ್ಷಿತ: ಅಧಿಕಾರಿಗಳ ಸ್ಪಷ್ಟನೆ

- Advertisement -
- Advertisement -

ಯುದ್ಧ ಪೀಡಿತ ಸಿರಿಯಾದಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಸುರಕ್ಷಿತವಾಗಿದ್ದಾರೆ ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಮೂಲಗಳನ್ನು ಉಲ್ಲೇಖಿಸಿ ಹಿಂದೂಸ್ಥಾನ್ ಟೈಮ್ಸ್‌ ಸೋಮವಾರ ವರದಿ ಮಾಡಿದೆ. ಸಿರಿಯಾ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರ ಆಡಳಿತವನ್ನು ಬಂಡುಕೋರರು ಉರುಳಿಸಿದ್ದು, ದೇಶದ ರಾಜಧಾನಿ ಡಮಾಸ್ಕಸ್ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.

ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಸುರಕ್ಷಿತವಾಗಿರುವ ಎಲ್ಲಾ ಭಾರತೀಯ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಮೂಲ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಿರಿಯಾದಲ್ಲಿರುವ ಭಾರತೀಯ ಪ್ರಜೆಗಳಿಗೆ ಸಹಾಯ ಮಾಡಲು ರಾಯಭಾರ ಕಚೇರಿಯು ಲಭ್ಯವಿರುತ್ತದೆ” ಎಂದು ರಾಯಭಾರ ಕಚೇರಿಯ ಮೂಲ ತಿಳಿಸಿದೆ. ಶನಿವಾರ ಭಾರತವು ಸುಮಾರು 90 ನಾಗರಿಕರನ್ನು ಸಿರಿಯಾವನ್ನು ತೊರೆಯುವಂತೆ ಒತ್ತಾಯಿಸಿತ್ತು ಮತ್ತು ಹಯಾತ್ ತಹ್ರೀರ್ ಅಲ್-ಶಾಮ್ (HTS) ನೇತೃತ್ವದ ಬಂಡುಕೋರರು ವಶಪಡಿಸಿಕೊಂಡ ಸಿರಿಯಾಕ್ಕೆ ಪ್ರಯಾಣಿಸದಂತೆ ಸಲಹೆ ನೀಡಿತ್ತು.

ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸಿರಿಯಾವನ್ನು ತೊರೆಯಲು ಸಾಧ್ಯವಾಗದ ಭಾರತೀಯ ನಾಗರಿಕರಿಗೆ “ತಮ್ಮ ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಮತ್ತು ಆದಷ್ಟು ಕಡಿಮೆ ಓಡಾಡಿ” ಎಂದು ಕೇಳಿಕೊಂಡಿದೆ.

ಬಂಡುಕೋರರು ಶುಕ್ರವಾರ ಸಿರಿಯಾದ ಮೂರನೇ ಅತಿದೊಡ್ಡ ನಗರವಾದ ಹೋಮ್ಸ್‌ಗೆ ಸಮೀಪವಿರುವ ಪಟ್ಟಣಗಳನ್ನು ಪ್ರವೇಶಿಸಿದ್ದರು ಮತ್ತು ಡಮಾಸ್ಕಸ್ ಕಡೆಗಿನ ಪ್ರಮುಖ ಹೆದ್ದಾರಿಯಲ್ಲಿ ಚಲಿಸಲು ಪ್ರಾರಂಭಿಸಿದ್ದರು. ಕೇವಲ 11 ದಿನಗಳ ಕಾಲ ನಡೆದ ಮಿಂಚಿನ ಕಾರ್ಯಾಚರಣೆಯ ನಂತರ ಬಂಡುಕೋರರು ಡಮಾಸ್ಕಸ್ ಅನ್ನು ವಶಪಡಿಸಿಕೊಂಡಿದ್ದಾರೆ.

ಈ ಮೂಲಕ ಅಸ್ಸಾದ್ ಅವರ 24 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದ್ದಾರೆ. ಬಂಡುಕೋರರು ಸಿರಿಯಾವನ್ನು ವಶಕ್ಕೆ ಪಡೆದ ನಂತರ ಅಸ್ಸಾದ್ ಸಿರಿಯಾದಿಂದ ಪಲಾಯನ ಮಾಡಿದ್ದು, ಅವರು ಯಾವ ಸ್ಥಳದಲ್ಲಿ ಇದ್ದಾರೆ ಎಂಬ ವರದಿ ಇನ್ನೂ ಲಭ್ಯವಾಗಿಲ್ಲ.

ಭಾರತೀಯ ರಾಯಭಾರ ಕಚೇರಿಯ ವೆಬ್‌ಸೈಟ್‌ನ ಪ್ರಕಾರ, ಸಿರಿಯಾವು ಒಂದು ಕಾಲದಲ್ಲಿ ಗಣನೀಯ ಪ್ರಮಾಣದ ಭಾರತೀಯ ಸಮುದಾಯದ ನೆಲೆಯಾಗಿತ್ತು. ಆದರೆ ಅದರ ಗಾತ್ರವು 92 ಕ್ಕೆ ಕುಗ್ಗಿದೆ. ಇದರಲ್ಲಿ 14 ಭಾರತೀಯ ಪ್ರಜೆಗಳು ವಿಶ್ವಸಂಸ್ಥೆಯ ವಿವಿಧ ಸಂಸ್ಥೆಗಳು ಮತ್ತು NGO ಗಳಿಗೆ ಕೆಲಸ ಮಾಡುವವರಾಗಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...