Homeಮುಖಪುಟಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ...

ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

- Advertisement -
- Advertisement -

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ರದ್ದುಗೊಳಿಸಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ದಿನೇಶ್ ಮೆಹ್ತಾ ಮತ್ತು ವಿನೋಕ್ ಕುಮಾರ್ ಅವರ ವಿಭಾಗೀಯ ಪೀಠವು, ನೋಟಿಸ್ ಜಾರಿ ಮಾಡಿದ್ದಕ್ಕಾಗಿ ಆದಾಯ ತೆರಿಗೆ ಇಲಾಖೆಗೆ 2 ಲಕ್ಷ ರೂಪಾಯಿ ದಂಡ ವಿಧಿಸಿದೆ.

“ಇಂತಹ ಪ್ರಕರಣಗಳಲ್ಲಿ ಯಾವುದೇ ಮೊತ್ತದ ದಂಡವು ಸಾಕಾಗುವುದಿಲ್ಲ (ಅಂದರೆ, ಯಾವುದೇ ಹಣದ ಮೊತ್ತವು ಪೂರ್ಣ ಪರಿಹಾರವಾಗಲಾರದು, ಇದು ಬಹಳ ಗಂಭೀರ/ತಪ್ಪು ಕ್ರಮ). ಆದರೂ ಕೂಡ, ಸಾಂಕೇತಿಕವಾಗಿ ಆದಾರಿಯ ತೆರಿಗೆ ಇಲಾಖೆಯು ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ತಲಾ 1 ಲಕ್ಷ ರೂಪಾಯಿ ಪಾವತಿಸಬೇಕು” ಎಂದು ನ್ಯಾಯಾಲಯ ಆದೇಶಿಸಿರುವುದಾಗಿ ವರದಿ ಉಲ್ಲೇಖಿಸಿದೆ.

“ಎರಡೂ ರಿಟ್ ಅರ್ಜಿಗಳನ್ನು ಪುರಸ್ಕರಿಸಲಾಗಿದೆ. ಮಾರ್ಚ್ 31,2016 ರಂದು ಅರ್ಜಿದಾರರಿಗೆ ನೀಡಲಾದ ನೋಟಿಸ್‌ಗಳು ಮತ್ತು ಅದರ ಪರಿಣಾಮವಾಗಿ ಬಂದ ಯಾವುದೇ ಆದೇಶ ಅಥವಾ ಕಾರ್ಯವಿಧಾನಗಳನ್ನು ರದ್ದುಗೊಳಿಸಲಾಗಿದೆ. ಇಂತಹ ಪ್ರಕರಣಗಳಲ್ಲಿ ಯಾವುದೇ ಮೊತ್ತದ ದಂಡವು ಸಾಕಾಗುವುದಿಲ್ಲ. ಆದರೂ, ಪ್ರಕರಣವನ್ನು ಸಂಪೂರ್ಣವಾಗಿ ದಂಡವಿಲ್ಲದೆ ಬಿಡಲಾಗದು. ಹಾಗಾಗಿ, ಸಾಂಕೇತಿಕವಾಗಿ ಆದಾಯ ತೆರಿಗೆ ಇಲಾಖೆಯು ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ತಲಾ 1 ಲಕ್ಷ ರೂಪಾಯಿ (ಒಟ್ಟು 2 ಲಕ್ಷ ರೂ.) ಪಾವತಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

ಇದಲ್ಲದೆ, ನೋಟಿಸ್‌ಗಳಿಗೆ ಅನುಸಾರವಾಗಿ ಪ್ರಾರಂಭಿಸಲಾದ ಎಲ್ಲಾ ನಂತರದ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗಿದೆ ಎಂದಿದೆ ಎಂದು ಬಾರ್‌ & ಬೆಂಚ್ ತಿಳಿಸಿದೆ.

ಈ ನೋಟಿಸ್‌ಗಳು ಮುಖ್ಯವಾಗಿ ಆರ್‌ಆರ್‌ಪಿಆರ್‌ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್‌ಗೆ ನೀಡಲಾದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದ ಆರೋಪಗಳ ಮೇಲೆ ಆಧಾರಿತವಾಗಿದ್ದವು. ಇದರಲ್ಲಿ ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ (ವಿಸಿಪಿಎಲ್‌) ಎಂಬ ಕಂಪನಿಯಿಂದ ಆರ್‌ಆರ್‌ಪಿಆರ್‌ಗೆ ಸುಮಾರು 403.85 ಕೋಟಿ ರೂಪಾಯಿ ಬಡ್ಡಿರಹಿತ ಸಾಲ ನೀಡಲಾಗಿತ್ತು, ಮತ್ತು ಇದರೊಂದಿಗೆ ಎನ್‌ಡಿಟಿವಿಯ ಷೇರುಗಳ ಒತ್ತೆ, ಷೇರು ವರ್ಗಾವಣೆಗಳು ಮತ್ತು ಇತರ ಸಂಕೀರ್ಣ ವಹಿವಾಟುಗಳಿದ್ದವು. ಆದಾಯ ತೆರಿಗೆ ಇಲಾಖೆಯು ಇದನ್ನು ತೆರಿಗೆ ತಪ್ಪಿಸುವಿಕೆ ಅಥವಾ ಆದಾಯ ಮರೆಮಾಚುವಿಕೆ ಎಂದು ಆರೋಪಿಸಿ, 2009-10ರ ಅಸೆಸ್‌ಮೆಂಟ್ ಇಯರ್‌ಗೆ ಸಂಬಂಧಿಸಿದಂತೆ ಮರುಮೌಲ್ಯಮಾಪನ ಮಾಡಲು ಪ್ರಯತ್ನಿಸಿತ್ತು.

ಒಂದು ವರ್ಷಕ್ಕೆ ಎರಡನೇ ಬಾರಿಗೆ ಮರುಮೌಲ್ಯ ಮಾಪನ ಎಂದು ವಾದಿಸಿ, ಆದಾಯ ತೆರಿಗೆ ನೋಟಿಸ್‌ಗಳ ವಿರುದ್ಧ ಪ್ರಣಯ್ ಮತ್ತು ರಾಧಿಕಾ ರಾಯ್ ನವೆಂಬರ್ 2017ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಆದಾಯ ಇಲಾಖೆಯು ಈ ಹಿಂದೆ ಜುಲೈ 2011ರಲ್ಲಿ ಮರು ಮೌಲ್ಯಮಾಪನ ಮಾಡಿತ್ತು. ಆ ಪ್ರಕ್ರಿಯೆಗಳಲ್ಲಿ ಅದೇ ಸಮಸ್ಯೆಗಳನ್ನು ನಿರ್ದಿಷ್ಟವಾಗಿ ಪರಿಶೀಲಿಸಿತ್ತು ಮತ್ತು ಅದು ಮಾರ್ಚ್ 2013ರಲ್ಲಿ ಮರುಮೌಲ್ಯಮಾಪನ ಆದೇಶದೊಂದಿಗೆ ಮುಕ್ತಾಯಗೊಂಡಿತು ಎಂದು ಹೇಳಿದ್ದರು.

ಮೌಲ್ಯಮಾಪನ ಅಧಿಕಾರಿ ಹೇಳಿಂತೆ ಹಿಂದಿನ ಮರು-ಮೌಲ್ಯಮಾಪನ ಕೇವಲ ಸೀಮಿತ ವ್ಯಾಪ್ತಿಯದ್ದು ಎಂಬ ಅಭಿಪ್ರಾಯವನ್ನು ಅವರು ಪ್ರಶ್ನಿಸಿದ್ದರು. ಒಮ್ಮೆ ಮರುಮೌಲ್ಯಮಾಪನ ಪ್ರಾರಂಭವಾದ ನಂತರ, ಸಂಪೂರ್ಣ ಕಡಿಮೆ ಅಂದಾಜು ಮಾಡಲಾದ ಆದಾಯವನ್ನು ಪರಿಶೀಲಿಸಬಹುದು ಎಂದು ವಾದಿಸಿದ್ದರು. ಅದೇ ವಿಷಯವನ್ನು ಮತ್ತೆ ತೆರೆಯುವುದು ‘ಅಭಿಪ್ರಾಯದ ಬದಲಾವಣೆ’, ಇದು ಕಾನೂನಿನ ಅಡಿಯಲ್ಲಿ ಸ್ವೀಕಾರಾರ್ಹವಲ್ಲ ಎಂದಿದ್ದರು.

ಆರ್‌ಆರ್‌ಪಿಆರ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಇದೇ ರೀತಿಯ ಮರುಮೌಲ್ಯಮಾಪನ ಪ್ರಕ್ರಿಯೆಗಳು ಈಗಾಗಲೇ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿವೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಅಲ್ಲಿ ಅಂತಿಮ ಆದೇಶಗಳ ಮೇಲಿನ ತಡೆಯಾಜ್ಞೆ ಜಾರಿಯಲ್ಲಿದೆ. ಸೆಪ್ಟೆಂಬರ್ 2024 ರಲ್ಲಿ ಹೈಕೋರ್ಟ್‌ನ ಪ್ರತ್ಯೇಕ ಪೀಠವು ಆರ್‌ಆರ್‌ಪಿಆರ್‌ಗೆ ನೀಡಲಾದ ನೋಟಿಸ್ ಅನ್ನು ರದ್ದುಗೊಳಿಸಿದೆ ಎಂದು ಹೇಳಲಾಗಿತ್ತು.

ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಪರ ವಕೀಲರಾದ ವಿಯುಷ್ಟಿ ರಾವತ್, ದೇವಾಂಶ್ ಜೈನ್ ಮತ್ತು ಸಾರ್ಥಕ್ ಅಬ್ರೋಲ್ ಅವರೊಂದಿಗೆ ಹಿರಿಯ ವಕೀಲ ಸಚಿತ್ ಜಾಲಿ ವಾದ ಮಂಡಿಸಿದ್ದರು.

ಆದಾಯ ತೆರಿಗೆ ಇಲಾಖೆಯನ್ನು ವಕೀಲರಾದ ಎನ್.ಪಿ. ಸಾಹ್ನಿ, ಇಂದ್ರಜ್ ಸಿಂಗ್ ರೈ, ಸಂಜೀವ್ ಮೆನನ್, ರಾಹುಲ್ ಸಿಂಗ್ ಮತ್ತು ಗೌರವ್ ಕುಮಾರ್ ಪ್ರತಿನಿಧಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...