Homeಮುಖಪುಟಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

- Advertisement -
- Advertisement -

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ ಆಡಳಿತ” ಎಂದು ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಗೆ ವ್ಯಾಪಕ ಟೀಕೆ ವ್ಯಕ್ತವಾದ ನಂತರ ಅವರು ತಮ್ಮ ಪೋಸ್ಟ್ ಅನ್ನು ಡಿಲಿಟ್ ಮಾಡಿದ್ದಾರೆ. 

ಆದಿತ್ಯ ರಾಜ್ ಕೌಲ್ ಅವರು ಇರಾನ್ ಸರಕಾರವನ್ನು “ಭಯೋತ್ಪಾದಕ ಆಡಳಿತ” ಎಂದು ತಮ್ಮ ಪೋಸ್ಟ್‌ ನಲ್ಲಿ ಉಲ್ಲೇಖಿಸಿದ್ದರು. ಇರಾನ್ ಮೇಲೆ ಇಸ್ರೇಲ್-ಅಮೆರಿಕ ಜಂಟಿ ದಾಳಿ ಮತ್ತು ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಅವರ ಈ ಪೋಸ್ಟ್ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಅವರ ಪೋಸ್ಟ್ ಕುರಿತು ರಾಜಕಾರಣಿಗಳು, ಪತ್ರಕರ್ತರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ತೀವ್ರ ಟೀಕೆಯನ್ನು ವ್ಯಕ್ತಪಡಿಸಿದ್ದು, ಮುಖ್ಯವಾಹಿನಿ ಮಾಧ್ಯಮವೊಂದರ ಸಂಪಾದಕರೊಬ್ಬರು ಬಳಸಿದ ಭಾಷೆ ವರದಿಗಾರಿಕೆ ಮತ್ತು ರಾಜಕೀಯ ವಕಾಲತ್ತು ನಡುವಿನ ಗೆರೆಯನ್ನು ದಾಟಿದೆ ಎಂದು ಟೀಕಿಸಿದ್ದಾರೆ.

ಟೀಕೆ ಬೆನ್ನಲ್ಲೆ ಕೌಲ್‌ ಅವರು ತನ್ನ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿದ್ದಾರೆ. ಆದರೆ ಪೋಸ್ಟ್‌ ಕುರಿತ ಸ್ಕ್ರೀನ್ ಶಾಟ್ ಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ಪತ್ರಿಕೋದ್ಯಮದಲ್ಲಿನ ವೃತ್ತಿಪರ ಮಾನದಂಡಗಳು ಮತ್ತು ಸುದ್ದಿಯನ್ನು ರೂಪಿಸುವಲ್ಲಿ ಸಾಮಾಜಿಕ ಜಾಲತಾಣಗಳ ಹೆಚ್ಚುತ್ತಿರುವ ಪಾತ್ರದ ಬಗ್ಗೆ ಚರ್ಚೆ ನಡೆದಿದೆ.

ಪೋಸ್ಟ್ ಬಗ್ಗೆ ಪ್ರತಿಕ್ರಿಯಿಸಿರುವ ಲೇಖಕ ಸಲ್ಮಾನ್ ಅನೀಸ್ ಸೋಝ್, ಎನ್‌ಡಿಟಿವಿ ಸಂಪಾದಕರು ಬಳಸಿದ ಭಾಷೆಯ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. “ಭಾರತದ ಪ್ರಮುಖ ಸುದ್ದಿ ಸಂಸ್ಥೆಯ ಹಿರಿಯ ಸಂಪಾದಕರೊಬ್ಬರು ಭಾರತವು ರಾಜತಾಂತ್ರಿಕ ಸಂಬಂಧ ಹೊಂದಿರುವ ದೇಶದ ಸರಕಾರವನ್ನು ‘ಭಯೋತ್ಪಾದಕ ಆಡಳಿತ’ ಎಂದು ಬಣ್ಣಿಸಿರುವುದು ಆಘಾತಕಾರಿಯಾಗಿದೆ. ಯುದ್ಧದ ಕುರಿತು ಪತ್ರಕರ್ತರು ವರದಿ ಮಾಡಬೇಕು. ಆದರೆ ಒಂದು ಪಕ್ಷದ ವಕ್ತಾರರಂತೆ ವರ್ತಿಸಬಾರದು ಎಂದು ಸೋಝ್ ಹೇಳಿದ್ದಾರೆ.

“ಇದು ಪತ್ರಿಕೋದ್ಯಮವಲ್ಲ. ಇದು ಯೋಜಿತ ಪ್ರಚಾರ. ಮುಖ್ಯವಾಹಿನಿ ಸುದ್ದಿ ಸಂಸ್ಥೆಯೊಂದರ ಹಿರಿಯ ಸಂಪಾದಕರೊಬ್ಬರು ಯುದ್ಧಕ್ಕೆ ಸಂಬಂಧಿಸಿ ಒಂದು ಪಕ್ಷದ ನಿರೂಪಣೆಯನ್ನು ಹೇಳುವುದು ಪತ್ರಿಕೋದ್ಯಮ ವೃತ್ತಿಯ ವಿಶ್ವಾಸಾರ್ಹತೆಯನ್ನು ದುರ್ಬಲಗೊಳಿಸುತ್ತದೆ ಮತ್ತೋರ್ವರು ಟೀಕಿಸಿದ್ದಾರೆ. 

“ಭಾರತವು ರಾಜತಾಂತ್ರಿಕ ಸಂಬಂಧ ಹೊಂದಿರುವ ದೇಶದ ಸರಕಾರವನ್ನು ‘ಭಯೋತ್ಪಾದಕ ಆಡಳಿತ’ ಎಂದು ಕರೆಯುವುದು ವರದಿಯಲ್ಲ. ಅದು ವಕಾಲತ್ತು ಎಂದು ಮತ್ತೋರ್ವರು ಬರೆದುಕೊಂಡಿದ್ದಾರೆ.

ಈ ವಿವಾದದ ಹಿನ್ನೆಲೆಯಲ್ಲಿ Karvaan India ಭಾರತದಲ್ಲಿನ ಇರಾನ್ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದ್ದು, ಹೇಳಿಕೆಗಳು ಮತ್ತು ಇಸ್ರೇಲ್-ಇರಾನ್ ಸಂಘರ್ಷದ ಕುರಿತ ನಿರೂಪಣೆ ಬಗ್ಗೆ ಅಧಿಕೃತ ಪ್ರತಿಕ್ರಿಯೆ ನೀಡುವಂತೆ ಕೋರಿದೆ.

ಈ ಬೆಳವಣಿಗೆ ಮತ್ತೊಮ್ಮೆ ಸಂಘರ್ಷಗಳ ಕುರಿತ ವರದಿಗಾರಿಕೆಯಲ್ಲಿ ಪತ್ರಕರ್ತರ ಹೊಣೆಗಾರಿಕೆ, ಹಾಗೆಯೇ ಯುದ್ಧದಂತಹ ಸೂಕ್ಷ್ಮ ಸಂದರ್ಭಗಳಲ್ಲಿ ವೃತ್ತಿನಿಷ್ಠೆ, ನಿಖರತೆ ಮತ್ತು ತಟಸ್ಥತೆಯನ್ನು ಕಾಪಾಡಿಕೊಳ್ಳುವ ಅಗತ್ಯತೆಯ ಬಗ್ಗೆ ಗಮನ ಸೆಳೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...