Homeಮುಖಪುಟಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

- Advertisement -
- Advertisement -

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಸಂಸತ್ತಿಗೆ ತಿಳಿಸಿದೆ.

2020 ರಲ್ಲಿ 85,256 ಜನರು ತಮ್ಮ ಪೌರತ್ವ ತ್ಯಜಿಸಿದ್ದಾರೆ ಎಂದು ಸಚಿವಾಲಯ ಹೇಳಿದೆ. ಆದರೆ, 2021 ರಲ್ಲಿ ಈ ಸಂಖ್ಯೆ 1.6 ಲಕ್ಷಕ್ಕೆ ತೀವ್ರವಾಗಿ ಏರಿತು. ನಂತರ, 2022 ರಲ್ಲಿ 2.2 ಲಕ್ಷಕ್ಕೆ ಮತ್ತಷ್ಟು ಏರಿತು. 2023 ರಲ್ಲಿ ಈ ಸಂಖ್ಯೆ 2.1 ಲಕ್ಷದಲ್ಲಿತ್ತು ಮತ್ತು 2024 ರಲ್ಲಿ 2 ಲಕ್ಷವನ್ನು ತಲುಪಿದೆ ಎಂದು ಅದು ಹೇಳಿದೆ.

ಈ ಅವಧಿಗೆ ಮುಂಚಿನ ಮಾದರಿ ತುಲನಾತ್ಮಕವಾಗಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ಗಮನಿಸಿದ್ದಾರೆ. 2011 ರಿಂದ 2019 ರವರೆಗಿನ ದತ್ತಾಂಶವು ವಾರ್ಷಿಕವಾಗಿ 1.2 ಲಕ್ಷದಿಂದ 1.4 ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ತೋರಿಸಿದೆ.

ಪೌರತ್ವ ತ್ಯಜಿಸಲು ಆಯ್ಕೆ ಮಾಡಿಕೊಂಡವರ ಆದಾಯ ಮಟ್ಟ ಅಥವಾ ವೃತ್ತಿಪರ ಹಿನ್ನೆಲೆಯ ಬಗ್ಗೆ ಸರ್ಕಾರ ಮಾಹಿತಿಯನ್ನು ನಿರ್ವಹಿಸುತ್ತಿದೆಯೇ ಎಂಬ ಬಗ್ಗೆ ಸ್ಪಷ್ಟನೆ ಕೋರಿದ ವಿರೋಧ ಪಕ್ಷದ ಸಂಸದರೊಬ್ಬರ ಪ್ರಶ್ನೆಗೆ ಉತ್ತರವಾಗಿ ಈ ವಿವರಗಳನ್ನು ಹಂಚಿಕೊಳ್ಳಲಾಗಿದೆ. ಅಂತಹ ಯಾವುದೇ ಪ್ರೊಫೈಲ್‌ಗಳು ಲಭ್ಯವಿಲ್ಲ ಎಂದು ಸಚಿವಾಲಯ ಪ್ರತಿಕ್ರಿಯಿಸಿತು.

ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, ಸರ್ಕಾರವು ಈ ವರ್ಗದ ಡೇಟಾವನ್ನು ಹೊಂದಿಲ್ಲ. ವೈಯಕ್ತಿಕ ಸಂದರ್ಭಗಳ ಆಧಾರದ ಮೇಲೆ ಪೌರತ್ವ ತ್ಯಜಿಸುವುದು ಸ್ವಯಂಪ್ರೇರಿತ ಕ್ರಿಯೆ ಎಂದು ಅವರು ಪುನರುಚ್ಚರಿಸಿದರು.

ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರವು ಸಂಸತ್ತಿಗೆ ನೀಡಿದ ಹಿಂದಿನ ಹೇಳಿಕೆಯನ್ನು ಅನುಸರಿಸಿ ಈ ಅಂಕಿಅಂಶಗಳನ್ನು ನೀಡಲಾಗಿದೆ. ಪೌರತ್ವ ತ್ಯಜಿಸಲು ಕಾರಣಗಳು ವೈಯಕ್ತಿಕ, ಕಾರಣ ಆ ವ್ಯಕ್ತಿಗೆ ಮಾತ್ರ ತಿಳಿದಿವೆ ಎಂದು ಅದು ಸಂಸತ್ತಿಗೆ ತಿಳಿಸಿತು. ಪೌರತ್ವ ತೊರೆಯುವ ನಿರ್ಧಾರಗಳು ಹೆಚ್ಚಾಗಿ ನೀತಿ-ಚಾಲಿತ ಅಂಶಗಳಿಗಿಂತ ವ್ಯಕ್ತಿನಿಷ್ಠ ಪರಿಗಣನೆಗಳಿಂದ ಹುಟ್ಟಿಕೊಂಡಿವೆ ಎಂದು ಅದು ವಾದಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...