Homeಚಳವಳಿಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

ಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ರೋಗವು ನಮಗೆ ಹಲವು ಪಾಠಗಳನ್ನು ಕಲಿಸಿದೆ. ದೇಶದ ಆರೋಗ್ಯ ಪರಿಸ್ಥಿತಿ ಮತ್ತು ಕೋವಿಡ್‍ ಅಲ್ಲದ ಸಂದರ್ಭದಲ್ಲೂ ಸಾಮಾನ್ಯ ಸನ್ನದ್ಧತೆಗೆ ಸಂಬಂಧಿಸಿದಂತೆ ಅನೇಕ ಪಾಠಗಳನ್ನು ಕಲಿಯಲು ದಾರಿ ಮಾಡಿಕೊಟ್ಟಿದೆ. ಈಗ ಕಲ್ಯಾಣ ಕಾರ್ಯಕ್ರಮಗಳನ್ನು (welfare system) ಮರು ವಿನ್ಯಾಸಗೊಳಿಸುವ ಅಗತ್ಯ ಇದೆ ಎಂದು ಅಭಿಜಿತ್ ಬ್ಯಾನರ್ಜಿ ಹೇಳಿದ್ದಾರೆ.

ಜೋಧ್‍ಪುರ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಇಂಪ್ಲಿಮೆಂಟೇಶನ್ ರಿಸರ್ಚ್ ಆಯೋಜಿಸಿದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ದೇಶದ ಆರೋಗ್ಯ ಪರಿಸ್ಥಿತಿ, ಕಲ್ಯಾಣ ಕಾರ್ಯಕ್ರಮ ಮತ್ತು ಆರೋಗ್ಯ ವ್ಯವಸ್ಥೆಗಳ ಆರ್ಥಿಕ ಅಂಶಗಳ ಬಗ್ಗೆ ಬೆಳಕು ಚೆಲ್ಲಿದರು.

ಆರೋಗ್ಯ ಪರಿಸ್ಥಿತಿಯ ಆರ್ಥಿಕ ಅಂಶದ ಕುರಿತು ಮಾತನಾಡುತ್ತ, ‘ಭಾರತವು ಜೀವನಶೈಲಿ (ಲೈಫ್‍ಸ್ಟೈಲ್‍)  ಕಾಯಿಲೆಗಳಿಂದ ಬಳಲುತ್ತಿರುವ ದೊಡ್ಡ ಜನಸಂಖ್ಯೆಯನ್ನು ಹೊಂದಿದೆ. ಅವು ಸಾಂಕ್ರಾಮಿಕವಲ್ಲದ ಕಾಯಿಲೆಗಳು (ಎನ್‌ಸಿಡಿ). ಸಾಂಕ್ರಾಮಿಕ ರೋಗದ ಎರಡನೆಯ ಮತ್ತು ಮೊದಲ ಅಲೆಯಲ್ಲಿ ಅನೇಕ ಯುವಕರು ಸಾವನ್ನಪ್ಪಿದರು. ಆದರೆ ಅವರ ಆಗಿನ ಪರಿಸ್ಥಿತಿಗಳನ್ನು ಪತ್ತೆ ಮಾಡಿಲ್ಲ. ಯುವಕರಲ್ಲಿ ಇಂಥಹದ್ದು ಹೇಗೆ ಸಂಭವಿಸಿತು ಎಂದು ಪ್ರಶ್ನಿಸಿದ ಅವರು, ಸಾಂಕ್ರಾಮಿಕವಲ್ಲದ ಕಾಯಿಲೆಗಳ (ಎನ್‌ಸಿಡಿ) ಬಗ್ಗೆ ಜಾಗೃತಿ ಮೂಡಿಸುವುದು ಒಂದು ಪ್ರಮುಖ ಸವಾಲಾಗಿದೆ ಎಂದರು.

‘ದೇಶದ ಕಲ್ಯಾಣ ವ್ಯವಸ್ಥೆಯನ್ನು (ಸಾಮಾಜಿಕ ಕಲ್ಯಾಣ ಕಾರ್ಯಕ್ರಮ) ಸಾಂಕ್ರಾಮಿಕ ರೋಗ ಎದುರಿಸಲು ವಿನ್ಯಾಸಗೊಳಿಸಲಾಗಿಲ್ಲ ಮತ್ತು ಭವಿಷ್ಯದಲ್ಲಿ ಇಂತಹ ಸಂದರ್ಭಗಳನ್ನು ಎದುರಿಸಲು ಕಲ್ಯಾಣ ಯೋಜನೆಗಳನ್ನು ಮರುವಿನ್ಯಾಸಗೊಳಿಸುವ ಅಗತ್ಯವಿದೆ’ ಎಂದು ಒತ್ತಿ ಹೇಳಿದರು.

ದೇಶದ ಆರೋಗ್ಯ ವ್ಯವಸ್ಥೆಯ ವಿವಿಧ ಆಯಾಮಗಳ ಕುರಿತು ಮಾತನಾಡಿದ ಬ್ಯಾನರ್ಜಿ, ಯಾವುದೇ  ವೈದ್ಯಕೀಯ ಅರ್ಹತೆ ಇಲ್ಲದ ನಕಲಿ ವೈದ್ಯರ ಚಿಕಿತ್ಸೆ ಮತ್ತು ಸ್ಟಿರಾಯ್ಡ್ ಗಳ ವಿವೇಚನೆಯಿಲ್ಲದ ಬಳಕೆ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಒಂದು ಅಧ್ಯಯನವನ್ನು ಉಲ್ಲೇಖಿಸಿ, ಪಶ್ಚಿಮ ಬಂಗಾಳದಲ್ಲಿ, ಕಡಿಮೆ ತೂಕದ ಮಹಿಳೆಯರು ಮದುವೆ ಹೊತ್ತಿಗೆ ತೂಕ ಹೆಚ್ಚು ಮಾಡಿಕೊಳ್ಳಲು ಆಗಾಗ್ಗೆ ಸ್ಟಿರಾಯ್ಡ್‌ಗಳನ್ನು ತೆಗೆದುಕೊಳ್ಳುತ್ತಾರೆ ಮತ್ತು ಈ ಸ್ಟಿರಾಯ್ಡ್ ಸ್ಥಳೀಯ ದಿನಸಿಗಳಲ್ಲಿ ಸುಲಭವಾಗಿ ಲಭ್ಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರ (ಕ್ವಾಕ್) ಪರಿಪಾಠ ಸಂಪೂರ್ಣವಾಗಿ ಮುಕ್ತ ವಿದ್ಯಮಾನವೆಂದು ಹೇಳುವ ಬ್ಯಾನರ್ಜಿ, ಈ ಸಮಸ್ಯೆಯನ್ನು ಪರಿಹರಿಸಲು ಯಾವುದೇ ಕಠಿಣ ಕಾನೂನು ಜಾರಿಗೊಳಿಸಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಮ್ಮ ಆರೋಗ್ಯ ವ್ಯವಸ್ಥೆಯನ್ನು ಆರೋಗ್ಯ ವ್ಯವಸ್ಥೆಯಿಂದ ಹೊರಗುಳಿದವರು ನಿರ್ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಸಾಮಾನ್ಯ ಕಾಯಿಲೆಗಳಿಗೆ ಔಷಧಿಗಳನ್ನು ಅತಿಯಾಗಿ ಶಿಫಾರಸು ಮಾಡುವ ವಿಷಯವನ್ನೂ ಬ್ಯಾನರ್ಜಿ ಎತ್ತಿ ತೋರಿಸಿದರು. ವೈದ್ಯಕೀಯ ಕಡೆಗಿನ ಗ್ರಾಹಕ ಸಂಸ್ಕೃತಿಯನ್ನು ದೂರಿದ ಅವರು, ರೋಗನಿರೋಧಕತೆ ತರುವ ವಿಧಾನದ ಬದಲು, ರೋಗ ತಡೆಗಟ್ಟುವ ಅಭಿವೃದ್ಧಿಯ ಅಗತ್ಯವನ್ನು ಒತ್ತಿ ಹೇಳಿದರು.

ನಾವು ಔಷಧಿಗಳ ಬೇಡಿಕೆಗೆ ಒಡ್ಡಿಕೊಳ್ಳುತ್ತೇವೆ. ನಾವು ವೈದ್ಯರ ಬಳಿಗೆ ಹೋಗಿ ‘ನಮಗೆ ಏನನ್ನಾದರೂ ನೀಡಿ’ ಎಂದು ಕೇಳುತ್ತೇವೆ, ಅವರು ಔಷಧಿಗಳನ್ನು ಶಿಫಾರಸು ಮಾಡಲು ಇಷ್ಟವಿಲ್ಲದಿದ್ದಾಗಲೂ ಕೂಡ ನಾವು, ’ಏನನ್ನಾದರೂ ನೀಡಿ ಎನ್ನುತ್ತೇವೆ’ ಎಂದು ಬ್ಯಾನರ್ಜಿ ತಿಳಿಸಿದರು.

ಕಾಯಿಲೆ ತಡೆಗಟ್ಟುವಿಕೆಗಾಗಿ ಒಂದು ಸರಳ ವ್ಯವಸ್ಥೆಯನ್ನು ನಿರ್ಮಿಸುವ ಅವಶ್ಯಕತೆಯಿದೆ ಮತ್ತು ಅದರ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಬ್ಯಾನರ್ಜಿ ಹೇಳಿದರು.


ಇದನ್ನೂ ಓದಿ: ಕೊರೊನಾ ಮೊದಲ ಅಲೆಯಿಂದ ಉತ್ತರ ಪ್ರದೇಶ ಪಾಠ ಕಲಿಯಲಿಲ್ಲ: ಆಡಳಿತ ಪಕ್ಷದ ನಾಯಕರಿಂದ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...