Homeಮುಖಪುಟ‘ಸಹಾಯ ಬೇಕು’: ಕೊರೊನಾ ಸೋಂಕಿತ ಪತ್ರಕರ್ತನ ಮನವಿ ಹಂಚಿಕೊಂಡ ರಾಹುಲ್ ಗಾಂಧಿ

‘ಸಹಾಯ ಬೇಕು’: ಕೊರೊನಾ ಸೋಂಕಿತ ಪತ್ರಕರ್ತನ ಮನವಿ ಹಂಚಿಕೊಂಡ ರಾಹುಲ್ ಗಾಂಧಿ

- Advertisement -
- Advertisement -

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳ ಮಧ್ಯೆ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಜೂನ್ 9 ರ ಮಂಗಳವಾರ ಪತ್ರಕರ್ತರೊಬ್ಬರ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಆ ಪತ್ರಕರ್ತನು “ನಮ್ಮೀಡಿ ಕುಟುಂಬಕ್ಕೆ ಕೊರೊನಾ ಸೋಂಕು ತಗುಲಿದೆ. ದಯವಿಟ್ಟು ಸಹಾಯ ಮಾಡಿ” ಎಂದು ಮನವಿ ಮಾಡಿದ್ದಾರೆ.

“ಕಳೆದ 10 ದಿನಗಳಲ್ಲಿ, ನನ್ನ ಮನೆಯಲ್ಲಿ ನನ್ನ ಹೆಂಡತಿಯ ತಂದೆ ಮತ್ತು ಈಗ ನನ್ನ ಅತ್ತೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಬಹಳ ಸಮಯದಿಂದ ಶವವನ್ನು ಇಡಲಾಗಿದ್ದು, ಆದರೆ ಅದನ್ನು ತೆಗೆದುಕೊಳ್ಳಲು ಯಾರೂ ಬಂದಿಲ್ಲ” ಎಂದು ಅಜಯ್‌ ಜಾ ಎಂಬ ಪತ್ರಕರ್ತ ಭಾವನಾತ್ಮಕ ವಿಡಿಯೋದಲ್ಲಿ ತಿಳಿಸಿದ್ದಾರೆ.

ಆ ವಿಡಿಯೋವನ್ನು ಷೇರ್‌ ಮಾಡಿರುವ ರಾಹುಲ್‌ ಗಾಂಧಿ “ಅಜಯ್ ಅವರಂತಹ ನನ್ನ ಲಕ್ಷಾಂತರ ಸಹೋದರ ಮತ್ತು ಸಹೋದರಿಯರಿಗಾಗಿ, ನಾವು ನಿಮ್ಮ ನೋವನ್ನು ಹಂಚಿಕೊಳ್ಳುತ್ತೇವೆ. ನಿಮ್ಮನ್ನು ರಕ್ಷಿಸಲು ನಾವು ಎಲ್ಲವನ್ನು ಮಾಡುತ್ತೇವೆ. ಇದನ್ನು ನಾವು ಒಟ್ಟಾಗಿ ಜಯಿಸುತ್ತೇವೆ” ಎಂದು ರಾಹುಲ್‌ ಗಾಂಧಿ ಬರೆದಿದ್ದಾರೆ.

ಸಾಂಕ್ರಾಮಿಕ ರೋಗದ ಮಧ್ಯೆ ಸೌಲಭ್ಯಗಳು ಮತ್ತು ಚಿಕಿತ್ಸೆಯ ಲಭ್ಯತೆಯ ಬಗ್ಗೆ ದೆಹಲಿ ಸರ್ಕಾರವನ್ನು ದೂಷಿಸಿದ ಪತ್ರಕರ್ತ “ಪ್ರತಿಯೊಬ್ಬರೂ ಜವಾಬ್ದಾರಿಯನ್ನು ಪರಸ್ಪರರ ಮೇಲೆ ಹಾಕುತ್ತಿದ್ದಾರೆ. ಕೇಜ್ರಿವಾಲ್ ಮತ್ತು ಇತರ ಸರ್ಕಾರಗಳು ಎಲ್ಲವೂ ಲಭ್ಯವಿದೆ ಎಂದು ಹೇಳುತ್ತಿವೆ, ಆದರೆ ಸತ್ಯವೆಂದರೆ ಏನೂ ಲಭ್ಯವಿಲ್ಲ” ಎಂದು ನೋವು ತೋಡಿಕೊಂಡಿದ್ದಾರೆ.

“ನನ್ನ ಕುಟುಂಬ ಮತ್ತು ನಾನು ತುಂಬಾ ತೊಂದರೆಗೀಡಾಗಿದ್ದೇವೆ. ಜನರು ನನಗೆ ಸಹಾಯ ಮಾಡಿ ನಮ್ಮನ್ನು ಇದರಿಂದ ಹೊರಗೆ ಕರೆದೊಯ್ಯಬೇಕೆಂದು ನಾನು ಬಯಸುತ್ತೇನೆ. ನನ್ನ ಹೆಣ್ಣುಮಕ್ಕಳಿಗೆ 9 ಮತ್ತು 5 ವರ್ಷ ವಯಸ್ಸಾಗಿದೆ. ನನ್ನ ಹೆಂಡತಿ ಧ್ವಂಸಗೊಂಡಿದ್ದಾಳೆ. ನಾನು ಧೈರ್ಯವನ್ನು ತೋರಿಸಲು ಪ್ರಯತ್ನಿಸುತ್ತಿದ್ದೇನೆ ಆದರೆ ಏನು ಮಾಡಬೇಕೆಂದು ನನಗೆ ತಿಳಿದಿಲ್ಲ. ನನಗೆ ಸಹಾಯ ಬೇಕು, ನನಗೆ ಚಿಕಿತ್ಸೆ ಬೇಕು. ಜನರು ಇದನ್ನು ಕೇಳುತ್ತಾರೆ, ಮುಂದೆ ಬರುತ್ತಾರೆ ಮತ್ತು ನಮಗೆ ಸಹಾಯ ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ “ಎಂದು ಪತ್ರಕರ್ತ ವಿಡಿಯೋದಲ್ಲಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಇದುವರೆಗೆ ಸುಮಾರು 30,000 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿವೆ. 874 ಜನರು ಸಾವನ್ನಪ್ಪಿದ್ದಾರೆ. ಕಳೆದ ಕೆಲವು ದಿನಗಳಿಂದ ಪ್ರತಿದಿನ 1,000 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಈ ನಡುವೆ ನಗರದ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆಯ ಬಗ್ಗೆಯೂ ವಿವಾದಗಳು ಹುಟ್ಟಿಕೊಂಡಿವೆ.


ಇದನ್ನೂ ಓದಿ: ಜುಲೈ 31 ರೊಳಗೆ ದೆಹಲಿಯಲ್ಲಿ 5.5 ಲಕ್ಷ ಜನರಿಗೆ ಕೊರೊನಾ ಸೋಂಕು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...