Homeಮುಖಪುಟಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

- Advertisement -
- Advertisement -

ಜಾರ್ಖಂಡ್ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ಮಿಲಿಟರಿಯ ಸಹಾಯ ಬೇಕಾಗಬಹುದು ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಳಿವು ನೀಡಿದ್ದಾರೆ. ಸಾಂಕ್ರಾಮಿಕ ರೋಗದ ಹೊರತಾಗಿಯೂ ಜನರಲ್ಲಿ ಉಂಟಾಗಿರುವ ಭಯದ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ನಾವು ಪ್ರಧಾನ ಮಂತ್ರಿ, ಗೃಹ ಸಚಿವರು, ರಕ್ಷಣಾ ಸಚಿವರಿಗೆ ಪತ್ರ ಬರೆಯುತ್ತೇವೆ. ಅವರ ಮಿಲಿಟರಿ ಶಕ್ತಿ ಮತ್ತು ಸೌಲಭ್ಯಗಳನ್ನು ನಮ್ಮ ರಾಜ್ಯದಲ್ಲಿ ಬಳಸಲು ನಾವು ಬಯಸುತ್ತೇವೆ” ಎಂದು ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದರು.

ಕಳೆದ 24 ಗಂಟೆಗಳಲ್ಲಿ ಜಾರ್ಖಂಡ್ 3,838 ಹೊಸ ಪ್ರಕರಣಗಳನ್ನು ಮತ್ತು 30 ಸಾವುಗಳನ್ನು ವರದಿ ಮಾಡಿದೆ.  ಇದರಿಂದ ಒಟ್ಟಾರೆ ರಾಜ್ಯದಲ್ಲಿ ಸುಮಾರು 1.6 ಲಕ್ಷ ಸೋಂಕಿತರು ವರದಿಯಾಗಿದ್ದರೆ, 1,400 ಕ್ಕೂ ಹೆಚ್ಚು ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ರೈತರೊಂದಿಗೆ ಮಾತುಕತೆ ನಡೆಸಿ ಎಂದು ಪ್ರಧಾನಿಗೆ ಪತ್ರ ಬರೆದ ಹರಿಯಾಣ ಡಿಸಿಎಂ

“ನಾನು ಉಪಚುನಾವಣೆ ಕಾರ್ಯಕ್ರಮದಿಂದ ಈಗಷ್ಟೇ ಹಿಂದಿರುಗಿದ್ದೇನೆ. ಜನರು ಮಾಸ್ಕ್‌ಗಳನ್ನು ಧರಿಸುವುದಿಲ್ಲ, ದೈಹಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ ಇದನ್ನೆಲ್ಲಾ ನೋಡಿ ನಾನು ಬೆಚ್ಚಿಬಿದ್ದಿದ್ದೇನೆ.  ಜನರು ಸಂಪೂರ್ಣವಾಗಿ ಭಯವನ್ನು ಕಳೆದುಕೊಂಡಿದ್ದಾರೆ. ಅವರಿಗೆ ಗಟ್ಟಿಯಾದ ಸಂದೇಶ ನೀಡುವ ಅಗತ್ಯವಿದೆ’’ ಎಂದು ಹೇಮಂತ್ ಸೊರೆನ್ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

ಜನರು ಕೊರೊನಾ ನಿಯಮಗಳನ್ನು ಮೀರದಂತೆ, ಅವುಗಳನ್ನು ಅನುಸರಿಸುವಂತೆ ನಿರ್ದೇಶನಗಳನ್ನು ನೀಡುವಂತೆ ಜಾರ್ಖಂಡ್ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸರ್ಕಾರವು ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಮುಂದೂಡುವುದು ಮತ್ತು ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸುವುದು ಮುಖ್ಯ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಕೈಬಿಟ್ಟ ಕೇಂದ್ರ!

ಜಾರ್ಖಂಡ್‌ನಲ್ಲಿ ಸಾಕಷ್ಟು ಆಮ್ಲಜನಕ ಘಟಕಗಳಿವೆ ಆದರೂ, ಆರೋಗ್ಯ ರಕ್ಷಣಾ ವ್ಯವಸ್ಥೆಯು ಇನ್ನೂ ಕೊರತೆಯನ್ನು ಎದುರಿಸಬೇಕಾಗುತ್ತದೆ. ನಮಗೆ ಹೆಚ್ಚಿನ ರೆಮ್‌ಡೆಸಿವಿರ್ ಚುಚ್ಚುಮದ್ದುಗಳು ಬೇಕಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಾಸ್ಕ್ ದಂಡ ಹೆಚ್ಚಳದ ಬಗ್ಗೆ ಮಾತನಾಡಿರುವ ಅವರು, “ದಿನಕ್ಕೆ 200 ರೂಪಾಯಿ ಮಾತ್ರ ಗಳಿಸುವ ವ್ಯಕ್ತಿಯ ಮೇಲೆ ಮಾಸ್ಕ್ ಧರಿಸದಿದ್ದಕ್ಕಾಗಿ 1,000 ರೂಪಾಯಿ ದಂಡ ವಿಧಿಸುವ ಮೂಲಕ ನಾವು ಏನು ಸಾಬೀತುಪಡಿಸುತ್ತಿದ್ದೇವೆ?” ಅವನು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಕೊರೊನಾ ವಿರುದ್ಧ ಹೋರಾಡಲು ಹೊಸ ಕಠಿಣ ನಿಯಮಗಳ ಭಾಗವಾಗಿ ಮಾಸ್ಕ್ ಇಲ್ಲದೇ ಮೊದಲ ಸಲ ಸಿಕ್ಕಿಬಿದ್ದ ಜನರಿಗೆ ಒಂದು ಸಾವಿರ ರೂಪಾಯಿ ಮತ್ತು ಎರಡನೇ ಸಲವೂ ಆ ತಪ್ಪು ಮಾಡಿದರೆ 10 ಸಾವಿರ ರೂ ದಂಡ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ಗೆ ಕೊರೊನಾ, ನಿಮ್ಮ ಸಮಸ್ಯೆ ಬಗೆಹರಿಸಲು ಹೆಚ್ಚಿನ ಸಮಯ ಸಿಗಲಿದೆ ಎಂದ ನಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ ಸಿದ್ದರಾಮಯ್ಯ

ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ವೈರಲ್ ಆಗಿದ್ದು, ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...

ಕರ್ನಲ್ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ‘ವಿಜಯ್ ಶಾ ವಿರುದ್ಧ 2 ವಾರಗಳಲ್ಲಿ ವಿಚಾರಣೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಿ’: ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಆಪರೇಷನ್ ಸಿಂಧೂರ್ ನಂತರ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ...

ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ರೂಪಿಸಲು ಸಂತ್ರಸ್ತ ವ್ಯಕ್ತಿಯ ಹೇಳಿಕೆ ಸಾಕು : ಕೇರಳ ಹೈಕೋರ್ಟ್

ಸಾಕ್ಷಿಗಳ ಹೇಳಿಕೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 2018 ರ ಸೆಕ್ಷನ್ 3(1)(ಆರ್) ಮತ್ತು 3(1)(ಎಸ್‌) ಅಡಿಯಲ್ಲಿ ಅಪರಾಧದ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ ಎಂಬ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತಗೊಳಿಸಲು...

ಕೇರಳ| ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ; ಅವಮಾನ ಸಹಿಸದೆ ವ್ಯಕ್ತಿ ಆತ್ಮಹತ್ಯೆ

ಮಹಿಳೆಯೊಬ್ಬರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಡಿಯೋ ವೈರಲ್ ಆದ ಬಳಿಕ ಮನನೊಂದ ಆರೋಪಿತ ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳದ ಕೋಝಿಕೋಡ್ ಮೂಲದ ವ್ಯಕ್ತಿಯ ಕುಟುಂಬವು ದೂರುದಾರ ಮಹಿಳೆ ವಿರುದ್ಧ...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ವಜಾಗೊಳಿಸಿದೆ....

ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಉಚ್ಛಾಟಿಸಲಾಗಿದ್ದ ಕೆ.ಕವಿತಾ ಅವರು ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ ಅವರು ಈ...

ಉತ್ತರ ಪ್ರದೇಶ| ಹಣಕಾಸಿನ ವಿವಾದ: ದಲಿತ ವ್ಯಕ್ತಿಗೆ ಸಾರ್ವಜನಿಕವಾಗಿ ತಲೆ ಬೋಳಿಸಿ ಅಪಮಾನ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನವಾಬ್‌ಗಂಜ್ ಪ್ರದೇಶದಲ್ಲಿ, ಪಪ್ಪು ದಿವಾಕರ್ ಎಂಬ ದಲಿತ ವ್ಯಕ್ತಿಯನ್ನು ಶನಿವಾರ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿ, ತಲೆ ಬೋಳಿಸಿ ಸಾರ್ವಜನಿಕ ಅವಮಾನಕ್ಕೆ ಒಳಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ...

ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು...

ಕುರ್ದಿಶ್‌ ಪಡೆಗಳ ಜೊತೆ ಕದನ ವಿರಾಮ : ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ ಸಿರಿಯಾ ಸೇನೆ

ಕುರ್ದಿಶ್ ನೇತೃತ್ವದ ಸಿರಿಯನ್ ಡೆಮಾಕ್ರಟಿಕ್ ಫೋರ್ಸಸ್ (ಎಸ್‌ಡಿಎಫ್‌) ಜೊತೆಗಿನ ಎರಡು ವಾರಗಳ ಭಾರೀ ಕಾದಾಟದ ನಂತರ, ಸಿರಿಯಾದ ಸರ್ಕಾರಿ ಪಡೆಗಳು ಉತ್ತರ ಮತ್ತು ಈಶಾನ್ಯ ಸಿರಿಯಾದ ಹಲವಾರು ಪ್ರಮುಖ ಪ್ರದೇಶಗಳ ಮೇಲೆ ಹಿಡಿತ...

ಖಮೇನಿ ಮೇಲಿನ ದಾಳಿಯು ‘ಸಂಪೂರ್ಣ ಯುದ್ಧ’ಕ್ಕೆ ಕಾರಣವಾಗುತ್ತದೆ: ಇರಾನ್ ಅಧ್ಯಕ್ಷರ ಎಚ್ಚರಿಕೆ

ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಮೇಲಿನ ಯಾವುದೇ ದಾಳಿಯನ್ನು ಇರಾನ್ ರಾಷ್ಟ್ರದ ವಿರುದ್ಧ "ಸಂಪೂರ್ಣ ಯುದ್ಧ" ಘೋಷಣೆ ಎಂದು ಪರಿಗಣಿಸಲಾಗುತ್ತದೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಎಚ್ಚರಿಸಿದ್ದಾರೆ. "ಇರಾನ್‌ನಲ್ಲಿ ಹೊಸ ನಾಯಕತ್ವವನ್ನು...