ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಯಶಸ್ಸು ಗಳಿಸಿದ ಬಳಿಕ ರಾಷ್ಟ್ರ ರಾಜಧಾನಿಗೆ ಮೊದಲ ಭೇಟಿ ನೀಡಿರುವ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 2024 ರ ರಾಷ್ಟ್ರೀಯ ಚುನಾವಣೆಯನ್ನು ಗುರಿಯಾಗಿಸಿಕೊಂಡಿದ್ದು, ವಿಪಕ್ಷ ನಾಯಕರನ್ನು ಭೇಟಿಯಾಗುತ್ತಿದ್ದಾರೆ.
ಎಲ್ಲಾ ವಿಪಕ್ಷ ನಾಯಕರನ್ನು ಭೇಟಿ ಮಾಡುತ್ತಿರುವ ಮಮತಾ ಬ್ಯಾನರ್ಜಿ ಇಂದು (ಜುಲೈ 28) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. 2024 ರ ರಾಷ್ಟ್ರೀಯ ಚುನಾವಣೆಯಲ್ಲಿ ಒಂದು ಏಕೀಕೃತ ಹೋರಾಟಕ್ಕಾಗಿ ಒಂದಾಗಲು ವಿರೋಧ ಪಕ್ಷಗಳ ಮಧ್ಯೆ ಸಭೆ ನಡೆದಿದೆ ಎನ್ನುವ ಉಹಾಪೋಹಗಳು ಹರಿದಾಡುತ್ತಿವೆ.
ಸೋನಿಯಾ ಗಾಂಧಿ ಭೇಟಿ ಬಳಿಕ ಮಾತನಾಡಿರುವ ಮಮತಾ ಬ್ಯಾನರ್ಜಿ, “ಇದು ಬಹಳ ಒಳ್ಳೆಯ ಸಕಾರಾತ್ಮಕ ಸಭೆ. ಬಿಜೆಪಿಯನ್ನು ಸೋಲಿಸಲು ಎಲ್ಲರೂ ಒಗ್ಗೂಡಬೇಕು. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ” ಎಂದಿದ್ದಾರೆ. ಬಂಗಾಳ ಸಿಎಂ ಬ್ಯಾನರ್ಜಿ, ಸೋನಿಯಾ ಗಾಂಧಿಯವರೊಂದಿಗೆ 45 ನಿಮಿಷಗಳ ಸಂವಾದ ನಡೆಸಿದ್ದಾರೆ.
ಇದನ್ನೂ ಓದಿ: 2024ರ ಚುನಾವಣೆಗೆ ಸಜ್ಜು: ವಿಪಕ್ಷ ನಾಯಕರನ್ನು ಭೇಟಿಯಾಗಲಿರುವ ಮಮತಾ ಬ್ಯಾನರ್ಜಿ
ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೆಹಲಿಯಲ್ಲಿ ಮುಖ ವಿರೋಧ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಹಿರಿಯ ಮುಖಂಡರಾದ ಕಮಲ್ ನಾಥ್ ಮತ್ತು ಆನಂದ್ ಶರ್ಮಾ ಅವರನ್ನು ಭಾನುವಾರ ಭೇಟಿ ಮಾಡಿದ್ದರು.
ಸೋಮವಾರ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿದ್ದಾರೆ. ಭಾನುವಾರ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಸಭೆ ನಡೆಸಿದ್ದಾರೆ.
“ಸಂಸತ್ತಿನ ಅಧಿವೇಶನದ ನಂತರ ಮಾತುಕತೆ ನಡೆಯಲಿದೆ, ಒಟ್ಟಿಗೆ ಕೆಲಸ ಮಾಡಲು ಒಂದು ಸಾಮಾನ್ಯ ವೇದಿಕೆ ಇರಬೇಕು. ನಾವು ಎಲ್ಲಾ ಪಕ್ಷಗಳೊಂದಿಗೆ ಮಾತನಾಡುತ್ತೇವೆ. 2024 ಸಾರ್ವತ್ರಿಕ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ಮತ್ತು ದೇಶದ ನಡುವೆ ನಡೆಯುವ ಚುನಾವಣೆ” ಎಂದು ಹೇಳಿದ್ದಾರೆ.
ಭಾನುವಾರ ಪ್ರಧಾನಿ ಮೋದಿ ಭೇಟಿ ಮಾಡಿದ್ದ ಬ್ಯಾನರ್ಜಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡು, ವಿರೋಧ ಪಕ್ಷದ ನಾಯಕರು, ಇಬ್ಬರು ಕೇಂದ್ರ ಸಚಿವರು ಮತ್ತು 40 ಪತ್ರಕರ್ತರನ್ನು ಒಳಗೊಂಡಂತೆ ಸುಮಾರು 300 ಜನರ ಮೇಲಾಗಿರುವ ಪೆಗಾಸಸ್ ಕಣ್ಗಾವಲು ಹಗರಣದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಪೆಗಾಸಸ್ ಬಗ್ಗೆ ತನಿಖೆ ನಡೆಯಲಿ: ಪ್ರಧಾನಿ ಭೇಟಿ ಬಳಿಕ ಮಮತಾ ಬ್ಯಾನರ್ಜಿ ಹೇಳಿಕೆ


