Homeಮುಖಪುಟವಾಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಅಗತ್ಯವಿದೆ: ಸುಪ್ರೀಂಕೋರ್ಟ್

ವಾಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಅಗತ್ಯವಿದೆ: ಸುಪ್ರೀಂಕೋರ್ಟ್

- Advertisement -
- Advertisement -

ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370ರ ರದ್ದತಿಯನ್ನು ಟೀಕಿಸಿ ವಾಟ್ಸಾಪ್ ಸ್ಟೇಟಸ್‌ ಹಾಕಿದ್ದ ಪ್ರಾಧ್ಯಾಪಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಾಗ, ಸಂವಿಧಾನ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸಂವಿಧಾನದ 19(1) (ಎ) ವಿಧಿ ಖಾತರಿಪಡಿಸಿದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರಿಕಲ್ಪನೆ ಬಗ್ಗೆ ನಮ್ಮ ಪೊಲೀಸರಿಗೆ ಅರಿವು ಮತ್ತು ಶಿಕ್ಷಣ ನೀಡುವ ಸಮಯ ಬಂದಿದೆ. ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಪ್ರಜಾಸತ್ತಾತ್ಮಕ ಮೌಲ್ಯಗಳ ಬಗ್ಗೆ ಅವರು ಸಂವೇದನಾಶೀಲರಾಗಬೇಕು. ಈ ಹೇಳಿಕೆಯು ಪ್ರೊಫೆಸರ್ ಜಾವೇದ್ ಅಹ್ಮದ್ ಹಜಾಮ್ ಅವರ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ನೀಡಿದ ವಿಶಾಲ ತೀರ್ಪಿನ ಭಾಗವಾಗಿದೆ.

ವಿಶೇಷವಾಗಿ ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಮತ್ತು ಟೀಕೆಗಳನ್ನು ವ್ಯಕ್ತಪಡಿಸುವ ನಾಗರಿಕರ ಮೂಲಭೂತ ಹಕ್ಕನ್ನು ತೀರ್ಪಿನಲ್ಲಿ ಒತ್ತಿ ಹೇಳಲಾಗಿದೆ. ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ವಾಟ್ಸಾಪ್ ಸ್ಟೇಟಸ್ ಸಂದೇಶಗಳಿಗಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ  ಅಡಿಯಲ್ಲಿ ಆರೋಪ ಎದುರಿಸುತ್ತಿರುವ ಪ್ರೊಫೆಸರ್ ಜಾವೇದ್ ಅಹ್ಮದ್ ಹಜಾಮ್ ಅವರ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪಿನಲ್ಲಿ ಸುಪ್ರೀಂಕೋರ್ಟ್‌ ಈ ಮಹತ್ವದ ಅಂಶಗಳನ್ನು ಉಲ್ಲೇಖಿಸಿದೆ.

ಆರ್ಟಿಕಲ್ 370ರ ರದ್ದತಿಯನ್ನು ಟೀಕಿಸುವ ವಾಟ್ಸಾಪ್ ಸ್ಟೇಟಸ್‌ ಬಗೆಗಿನ ಪ್ರಕರಣದಲ್ಲಿ ಜಾವೇದ್ ಅಹ್ಮದ್ ಹಜಾಮ್ ವಿರುದ್ಧ ದಾಖಲಿಸಲಾದ ಪ್ರಥಮ ಮಾಹಿತಿ ವರದಿಯನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ಈ ಹಿಂದೆ ನಿರಾಕರಿಸಿತ್ತು, ಸ್ಟೇಟಸ್‌ನಲ್ಲಿ ಆರ್ಟಿಕಲ್ 370ರ ರದ್ಧತಿಯನ್ನು ‘ಜಮ್ಮು ಮತ್ತು ಕಾಶ್ಮೀರಕ್ಕೆ ಕರಾಳ ದಿನ’ ಎಂದು ಬಣ್ಣಿಸಲಾಗಿತ್ತು. ಇಂತಹ ಸಂದೇಶಗಳು ವಿವಿಧ ಗುಂಪುಗಳ ನಡುವೆ ಅಶಾಂತಿಗೆ ಕಾರಣವಾಗುತ್ತದೆ ಎಂದು ಬಾಂಬೆ ಹೈಕೋರ್ಟ್‌ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ಆದರೆ ಸರ್ವೋಚ್ಚ ನ್ಯಾಯಾಲಯವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಾಮುಖ್ಯತೆಯನ್ನು ಗುರುತಿಸಿದೆ ಮತ್ತು ಐಪಿಸಿಯ ಸೆಕ್ಷನ್ 153ಎ ಅಡಿಯಲ್ಲಿ ಪ್ರೊಫೆಸರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿದೆ.

ಮುಖ್ಯವಾಗಿ, ರಾಜ್ಯದ  ವಿರುದ್ಧದ ಪ್ರತಿ ಟೀಕೆ ಅಥವಾ ಪ್ರತಿಭಟನೆಯನ್ನು ಸೆಕ್ಷನ್ 153-ಎ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಿದರೆ, ಭಾರತದ ಸಂವಿಧಾನದ ಅತ್ಯಗತ್ಯ ಲಕ್ಷಣವಾದ ಪ್ರಜಾಪ್ರಭುತ್ವವು ಜೀವಂತವಾಗಿರುವುದಿಲ್ಲ ಎಂದು ನ್ಯಾಯಾಲಯವು ಗಮನಿಸಿದೆ. ಪ್ರೊ.ಜಾವೆದ್ ಅಹ್ಮದ್ ಅವರು 370ನೇ ವಿಧಿಯ ರದ್ದತಿಯನ್ನು ಟೀಕಿಸಿ ಸಂದೇಶ ಹಾಕುವಾಗ ಯಾವುದೇ ಗುಂಪು, ಜಾತಿ, ಜನಾಂಗ ಮತ್ತು ಧರ್ಮವನ್ನು ಉಲ್ಲೇಖಿಸಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದ್ದು, ಜಾವೆದ್ ಅವರ ವಾಟ್ಸಾಪ್ ಸಂದೇಶ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಒಂದು ‘ಸರಳ ಪ್ರತಿಭಟನೆ’ ಎಂದು ಪರಿಗಣಿಸಬಹುದು ಎಂದಿದೆ.

ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಷಯ ಕೋರಿರುವ ಎರಡನೇ ವಾಟ್ಸಾಪ್ ಸಂದೇಶಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ನ್ಯಾಯಾಲಯ, ‘ಪಾಕಿಸ್ತಾನಕ್ಕೆ ಶುಭಾಷಯ ಕೋರುವುದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದಿದೆ. ಪಾಕಿಸ್ತಾನಕ್ಕೆ ಶುಭಾಷಯ ಕೋರಿದಂತೆ, ಇತರ ದೇಶಗಳಿಗೆ ಶುಭ ಹಾರೈಕೆಗಳನ್ನು ವ್ಯಕ್ತಪಡಿಸಲು ನಾಗರಿಕರಿಗೆ ಹಕ್ಕಿದೆ. ಭಾರತದ ಪ್ರಜೆಯು ಪಾಕಿಸ್ತಾನದ ನಾಗರಿಕರಿಗೆ ಅವರ ಸ್ವಾತಂತ್ರ್ಯ ದಿನಾಚರಣೆಯಾದ ಆಗಸ್ಟ್ 14ರಂದು ಶುಭ ಹಾರೈಸಿದರೆ ಅದರಲ್ಲಿ ತಪ್ಪೇನಿಲ್ಲ. ಇದು ಸದ್ಭಾವನೆಯ ಸಂಕೇತವಾಗಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಇದನ್ನು ಓದಿ: ಜಾತಿ ಗಣತಿ: ಕಾಂಗ್ರೆಸ್‌ನ ಬದ್ಧತೆಯನ್ನು ಪುನರುಚ್ಛರಿಸಿದ ರಾಹುಲ್‌ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...