Homeರಂಜನೆಕ್ರೀಡೆವಿಶ್ವ ಅಥ್ಲೆಟಿಕ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾ

ವಿಶ್ವ ಅಥ್ಲೆಟಿಕ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾ

- Advertisement -
- Advertisement -

ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಜಾವೆಲಿನ್‌ ಥ್ರೋ ವಿಭಾಗದಲ್ಲಿ ನೀರಜ್‌ ಚೋಪ್ರಾ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.

ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಗೌರವದೊಂದಿಗೆ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ.

ಬುಡಾಪೆಸ್ಟ್‌ನಲ್ಲಿ ನಡೆದ ಫೈನಲ್‌ನಲ್ಲಿ ನೀರಜ್‌, ಜಾವೆಲಿನ್‌ನ್ನು 88.17 ಮೀ. ದೂರ ಎಸೆಯುವ ಮೂಲಕ ಅಗ್ರಸ್ಥಾನ ಪಡೆದುಕೊಂಡಿದ್ದರು.

ಆರು ಎಸೆತಗಳ ಅವಕಾಶವಿದ್ದ ಫೈನಲ್‌ನ ಎರಡನೇ ಪ್ರಯತ್ನದಲ್ಲಿ ಅವರಿಂದ ಈ ಸಾಧನೆ ಮಾಡಿದ್ದಾರೆ. ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತಕ್ಕೆ ದೊರೆತ ಮೊಟ್ಟ ಮೊದಲ ಚಿನ್ನದ ಪದಕ ಇದಾಗಿದೆ.

ಛೋಪ್ರಾ ಅವರ ನಿಕಟ ಪ್ರತಿಸ್ಪರ್ಧಿ ಪಾಕಿಸ್ತಾನದ ಅರ್ಷದ್ ನದೀಮ್ 87.82 ಮೀಟರ್ ಎಸೆಯುವ ಮೂಲಕ ಬೆಳ್ಳಿ ಪದಕ ಪಡೆದುಕೊಂಡಿದ್ದು, ಜಾಕುಬ್ ವದ್ಲೇಚ್ 86.67 ಮೀಟರ್ ಸಾಧನೆ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಭಾರತದ ಇತರ ಆಥ್ಲೀಟ್‍ಗಳಾದ ಕಿಶೋರ್ ಜೆನಾ ಹಾಗೂ ಡಿ.ಪಿ.ಮನು ಕೂಡಾ ಉತ್ತಮ ಪ್ರದರ್ಶನ ನೀಡಿದ್ದಾರೆ.  ಜೆನಾ, 84.77 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು  ವೈಯಕ್ತಿಕವಾಗಿ ಜೀವಮಾನದ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಇವರು ಐದನೇ ಸ್ಥಾನ ಪಡೆದಿದ್ದು, 84.14 ಮೀಟರ್ ಜಾವೆಲಿನ್ ಎಸೆಯುವ ಮೂಲಕ ಮನು 6ನೇ ಸ್ಥಾನ ಪಡೆದಿದ್ದಾರೆ.

ಇದನ್ನು ಓದಿ: ಮಹಾರಾಷ್ಟ್ರ; ನಾಲ್ವರು ದಲಿತ ಯುವಕರನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಥಳಿತ

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...