Homeಮುಖಪುಟರಾಜಸ್ಥಾನ | ಕೋಟಾದಲ್ಲಿ ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ : ಈ ವರ್ಷದಲ್ಲಿ 3ನೇ ಪ್ರಕರಣ

ರಾಜಸ್ಥಾನ | ಕೋಟಾದಲ್ಲಿ ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ : ಈ ವರ್ಷದಲ್ಲಿ 3ನೇ ಪ್ರಕರಣ

ಕಳೆದ ವರ್ಷ ರಾಜ್ಯದಲ್ಲಿ 23 ಜನರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅದರಲ್ಲಿ 20 ಜನರು ಕೋಟಾದವರು

- Advertisement -
- Advertisement -

ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್)ಗೆ ತಯಾರಿ ನಡೆಸುತ್ತಿದ್ದ 18 ವರ್ಷದ ವಿದ್ಯಾರ್ಥಿ ಶುಕ್ರವಾರ(ಜ.17) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ವರ್ಷ ಕೋಟಾದಲ್ಲಿ ನಡೆದ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. ಕಳೆದ ವರ್ಷ ರಾಜಸ್ಥಾನದ ಕೋಚಿಂಗ್ ಹಬ್‌ಗಳಲ್ಲಿ ಕನಿಷ್ಠ 23 ಜನರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅದರಲ್ಲಿ 20 ಜನರು ಕೋಟಾದವರು ಎಂಬುವುದು ಗಮನಾರ್ಹ ಸಂಗತಿ.

ಕೋಟಾದ ಅಂಬೇಡ್ಕರ್ ಕಾಲೋನಿಯಲ್ಲಿರುವ ಖಾಸಗಿ ಹಾಸ್ಟೆಲ್‌ನಿಂದ ವಿದ್ಯಾರ್ಥಿಯೊಬ್ಬ ತನ್ನ ಕೋಣೆಯ ಬಾಗಿಲು ತೆರೆಯುತ್ತಿಲ್ಲ ಎಂಬ ಮಾಹಿತಿ ಬಂದಿತ್ತು. ಪೊಲೀಸ್ ಸಿಬ್ಬಂದಿ ಹಾಸ್ಟೆಲ್‌ಗೆ ತೆರಳಿ ಬಾಗಿಲು ಒಡೆದು ನೋಡಿದಾಗ ವಿದ್ಯಾರ್ಥಿಯ ಶವ ಕಂಡು ಬಂದಿದೆ ಎಂದು ವಿಜ್ಞಾನ ನಗರ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಲಾಲ್ ಸಿಂಗ್ ತನ್ವರ್ ಹೇಳಿದ್ದಾರೆ.

ವಿದ್ಯಾರ್ಥಿಯ ಶವವನ್ನು ತಕ್ಷಣ ಎಂಬಿಎಸ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ವೈದ್ಯರೂ ಕೂಡ ಆತ ಮೃತಪಟ್ಟಿರುವುದಾಗಿ ಘೋಷಿಸಿದರು. ಮೃತ ವಿದ್ಯಾರ್ಥಿನೀಟ್‌ಗೆ ತಯಾರಿ ನಡೆಸಲು ಕೋಟಾಗೆ 2024 ರ ಏಪ್ರಿಲ್‌ನಲ್ಲಿ ಬಂದಿದ್ದರು ಎಂದು ಲಾಲ್ ಸಿಂಗ್ ತನ್ವರ್ ಮಾಹಿತಿ ನೀಡಿದ್ದಾರೆ.

ಜನವರಿ 7ರಂದು, ಹರಿಯಾಣದ 19 ವರ್ಷದ ಜೆಇಇ ಆಕಾಂಕ್ಷಿ ಕೋಟಾದ ರಾಜೀವ್ ಗಾಂಧಿ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅದೇ ಜೆಇಇ ಕೋರ್ಸ್‌ಗೆ ತಯಾರಿ ನಡೆಸುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ಜನವರಿ 8ರಂದು ವಿಜ್ಞಾನ್ ನಗರದಲ್ಲಿರುವ ತನ್ನ ಹಾಸ್ಟೆಲ್‌ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...